Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 4:1 - ಕನ್ನಡ ಸತ್ಯವೇದವು C.L. Bible (BSI)

1 ಕಡೆಯದಾಗಿ ಸಹೋದರರೇ, ನೀವು ಹೇಗೆ ಬಾಳಬೇಕು. ದೇವರು ಮೆಚ್ಚುವಂತೆ ಹೇಗೆ ನಡೆದುಕೊಳ್ಳಬೇಕು, ಎಂಬುದನ್ನು ನಮ್ಮಿಂದ ಕಲಿತುಕೊಂಡಿರಿ. ಅಂತೆಯೇ ಜೀವಿಸುತ್ತಿದ್ದೀರಿ. ನಿಮ್ಮ ನಡತೆ ಇನ್ನೂ ಉತ್ತಮಗೊಳ್ಳಬೇಕೆಂದು ಪ್ರಭು ಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ ಹಾಗೂ ಪ್ರಬೋಧಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕಡೆಯದಾಗಿ, ಸಹೋದರರೇ, ನಾವು ಕರ್ತನಾದ ಯೇಸುವಿನ ಮುಖಾಂತರ ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕಡೇ ಮಾತೇನಂದರೆ, ಸಹೋದರರೇ, ನಾವು ಕರ್ತನಾದ ಯೇಸುವಿನ ಅಧಿಕಾರದಿಂದ ನಿಮಗೆ ಕೊಟ್ಟ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಹೋದರ ಸಹೋದರಿಯರೇ, ಈಗ ನಿಮಗೆ ಇತರ ಕೆಲವು ವಿಚಾರಗಳನ್ನು ತಿಳಿಸುತ್ತೇನೆ. ದೇವರನ್ನು ಮೆಚ್ಚಿಸಲು ಹೇಗೆ ಜೀವಿಸಬೇಕೆಂದು ನಿಮಗೆ ಕಲಿಸಿದ್ದೇವೆ. ನೀವು ಅದೇ ರೀತಿಯಲ್ಲಿ ಜೀವಿಸುತ್ತಿರುವಿರಿ. ಅದೇ ರೀತಿಯಲ್ಲಿ ಇನ್ನೂ ಹೆಚ್ಚು ಸಮರ್ಪಕವಾಗಿ ಜೀವಿಸಬೇಕೆಂದು ನಾವು ನಿಮ್ಮನ್ನು ಕ್ರಿಸ್ತನಲ್ಲಿ ಕೇಳಿಕೊಳ್ಳುತ್ತೇವೆ ಮತ್ತು ಪ್ರೋತ್ಸಾಹಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪ್ರಿಯರೇ, ನೀವು ಹೇಗೆ ನಡೆದುಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿದಂತೆಯೇ ಜೀವಿಸುತಿರುವಿರಿ. ಇದರಲ್ಲಿ ನೀವು ಹೆಚ್ಚೆಚ್ಚಾಗಿ ಮಾಡಬೇಕೆಂದು ನಾವು ಕಡೆಯದಾಗಿ ನಮಗೆ ಕರ್ತ ಆಗಿರುವ ಯೇಸುವಿನಲ್ಲಿ ನಿಮ್ಮನ್ನು ಪ್ರಬೋಧಿಸುತ್ತೇವೆ ಮತ್ತು ಉತ್ತೇಜಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಆಕ್ರಿಕ್, ಅಮ್ಚ್ಯಾ ಭಾವಾನು ಅನಿ ಭೆನಿಯಾನು, ದೆವಾಕ್ ಬರೆ ದಿಸ್ತಲೆ ಜಿವನ್ ಕಶೆ ಕರ್‍ತಲೆ ಮನುನ್ ತುಮಿ ಅಮ್ಚ್ಯಾಕ್ನಾ ಬರೆ ಕರುನ್ ಶಿಕ್ಲ್ಯಾಸಿ, ತೆ ಖರೆ ಹಾಯ್. ಅನಿ ತಸೆಚ್ ತುಮಿ ಅನಿ ಅತ್ತಾ ತುಮ್ಚೆ ಜಿವನ್ ಕರುಕ್ ಲಾಗ್ಲ್ಯಾಶಿ, ಅನಿಬಿ ದೆವಾಕ್ ಬರೆ ದಿಸ್ತಲ್ಯಾ ರಿತಿನ್ ತುಮಿ ಜಿವನ್ ಕರಾ ಮನುನ್ ಧನಿಯಾ ಜೆಜುಚ್ಯಾ ನಾವಾನ್ ಅಮಿ ತುಮ್ಚೆಕ್ಡೆ ಹಾತ್ ಜೊಡುನ್ ಮಾಗ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 4:1
44 ತಿಳಿವುಗಳ ಹೋಲಿಕೆ  

ಆಗ ಎಲ್ಲ ವಿಷಯಗಳಲ್ಲಿಯೂ ಪ್ರಭುಯೇಸು ಮೆಚ್ಚುವ ರೀತಿಯಲ್ಲಿ ನೀವು ಜೀವಿಸುವಿರಿ. ನಾನಾ ತರಹದ ಸತ್ಕಾರ್ಯಗಳನ್ನು ಕೈಗೊಳ್ಳುವಿರಿ. ಸತ್ಫಲವನ್ನೀಯುವ ದೈವಜ್ಞಾನದಲ್ಲಿ ವೃದ್ಧಿಹೊಂದುವಿರಿ.


ಸಹೋದರರೇ, ನಿಮಗಾಗಿ ನಾವು ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ; ಹಾಗೆ ಸಲ್ಲಿಸುವುದು ಯುಕ್ತವೂ ಹೌದು. ಏಕೆಂದರೆ, ನಿಮ್ಮ ವಿಶ್ವಾಸವು ಪ್ರವರ್ಧಿಸುತ್ತಾ ಇದೆ. ನಿಮ್ಮಲ್ಲಿರುವ ಪರಸ್ಪರ ಪ್ರೀತಿ ಹೆಚ್ಚುತ್ತಿದೆ.


ನಮ್ಮ ಪ್ರಭು ಮತ್ತು ಉದ್ಧಾರಕರಾದ ಯೇಸುಕ್ರಿಸ್ತರ ಅನುಗ್ರಹದಲ್ಲೂ ಅವರನ್ನು ಕುರಿತ ಜ್ಞಾನದಲ್ಲೂ ನೀವು ಅಭಿವೃದ್ಧಿಹೊಂದಿರಿ. ಅವರಿಗೆ ಈಗಲೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ! ಆಮೆನ್.


ಇದಲ್ಲದೆ, ಪರೋಪಕಾರ ಮಾಡುವುದನ್ನೂ ನಿಮಗಿರುವುದನ್ನು ಪರರೊಡನೆ ಹಂಚಿಕೊಳ್ಳುವುದನ್ನೂ ನಿಲ್ಲಿಸಬೇಡಿ. ಇವು ಕೂಡ ದೇವರಿಗೆ ಮೆಚ್ಚುಗೆಯಾದ ಬಲಿಯರ್ಪಣೆಗಳೇ.


ನೀವು ಪ್ರೀತಿಯಲ್ಲಿ ಪ್ರವರ್ಧಿಸುತ್ತಾ, ಪೂರ್ಣ ಜ್ಞಾನ ಹಾಗೂ ವಿವೇಕದಿಂದ ಕೂಡಿದವರಾಗಬೇಕೆಂಬುದೇ ನನ್ನ ಪ್ರಾರ್ಥನೆ.


ನಿಮ್ಮ ಮೇಲೆ ನಮಗಿರುವ ಪ್ರೀತಿ ವೃದ್ಧಿಯಾಗುತ್ತಿರುವಂತೆಯೇ, ನಿಮ್ಮ ಪರಸ್ಪರ ಪ್ರೀತಿಯೂ ಸರ್ವಜನಪ್ರೇಮವೂ ಬೆಳೆದು ಸಮೃದ್ಧಿಯಾಗಲೆಂದು ಪ್ರಭುವಿನಲ್ಲಿ ಪ್ರಾರ್ಥಿಸುತ್ತೇವೆ.


ಮೇಲಣ ಬಹುಮಾನವನ್ನು ಪಡೆಯಲೆಂದು ದೇವರು ನನಗೆ ಕ್ರಿಸ್ತಯೇಸುವಿನ ಮುಖಾಂತರ ಕರೆ ನೀಡಿದ್ದಾರೆ. ಆ ಗುರಿಯನ್ನು ತಲುಪಲೆಂದೇ ನಾನು ಮುಂದೋಡುತ್ತಲಿದ್ದೇನೆ.


ನಾವು ದೇವರ ಆಜ್ಞೆಗಳಿಗೆ ವಿಧೇಯರಾಗಿ ಅವರಿಗೆ ಮೆಚ್ಚುಗೆಯಾದವುಗಳನ್ನೇ ಮಾಡುವುದರಿಂದ ನಾವು ಕೋರುವುದೆಲ್ಲವನ್ನೂ ಅವರಿಂದ ಪಡೆಯುತ್ತೇವೆ.


ಪ್ರಭುವಿನ ಸೇವೆಯ ನಿಮಿತ್ತ ಸೆರೆಯಾಳಾಗಿ ಇರುವ ನಾನು ನಿಮ್ಮಲ್ಲಿ ಬಿನ್ನವಿಸುವುದು ಏನೆಂದರೆ: ದೇವರ ಕರೆಗೆ ಅನುಗುಣವಾಗಿ ಯೋಗ್ಯ ಬಾಳುವೆ ನಡೆಸಿರಿ.


ಕೊನೆಯದಾಗಿ ಪ್ರಿಯ ಸಹೋದರರೇ, ಸಂತೋಷದಿಂದಿರಿ, ಪರಿಪೂರ್ಣರಾಗಲು ಪ್ರಯತ್ನಿಸಿರಿ. ನನ್ನ ಬುದ್ಧಿಮಾತುಗಳಿಗೆ ಕಿವಿಗೊಡಿ; ಒಮ್ಮನಸ್ಸಿನಿಂದ ಬಾಳಿರಿ; ಸಮಾಧಾನದಿಂದ ಜೀವಿಸಿರಿ; ಆಗ ಪ್ರೀತಿ ಮತ್ತು ಶಾಂತಿ ಸ್ವರೂಪರಾದ ದೇವರು ನಿಮ್ಮೊಡನೆ ಇರುತ್ತಾರೆ.


ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿರಿ; ನಿಶ್ಚಲರಾಗಿರಿ. ಪ್ರಭುವಿನ ಸೇವೆಯಲ್ಲಿ ನೀವು ಪಡುವ ಪ್ರಯಾಸ ಎಂದಿಗೂ ನಿಷ್ಫಲವಾಗದು. ಆದ್ದರಿಂದ ಅವರ ಸೇವೆಯಲ್ಲಿ ನಿರಂತರ ಶ್ರದ್ಧೆಯುಳ್ಳವರಾಗಿರಿ.


ಸನ್ಮಾರ್ಗದಲ್ಲಿ ಮುಂದುವರೆವವನು ಸಜ್ಜನನು ಬಲಗೊಳ್ಳುತ್ತಲೇ ಇರುವನು ಶುದ್ಧಹಸ್ತನು.


ಕೊನೆಯದಾಗಿ ಸಹೋದರರೇ, ನಮಗಾಗಿಯೂ ಪ್ರಾರ್ಥನೆಮಾಡಿ; ಪ್ರಭುವಿನ ಸಂದೇಶ ನಿಮ್ಮಲ್ಲಿ ಹಬ್ಬಿಹರಡಿದಂತೆ ಎಲ್ಲೆಲ್ಲಿಯೂ ಪಸರಿಸಿ ಪ್ರಖ್ಯಾತವಾಗಲಿ.


ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಪುನರಾಗಮನವನ್ನು ಮತ್ತು ನಾವು ಅವರ ಸನ್ನಿಧಿಯಲ್ಲಿ ಒಂದಾಗಿ ಸೇರುವ ವಿಷಯವನ್ನು ಕುರಿತು ನಿಮ್ಮಲ್ಲಿ ನಾವು ವಿನಂತಿಸುವುದೇನೆಂದರೆ:


ನೀವು ಕ್ರಿಸ್ತಯೇಸುವನ್ನು ಪ್ರಭುವಾಗಿ ಸ್ವೀಕರಿಸಿರುವುದರಿಂದ, ಅವರೊಡನೆ ಐಕ್ಯತೆಯಿಂದ ಬಾಳಿರಿ.


ಅದೇನೇ ಇರಲಿ, ನೀವು ಮಾತ್ರ ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯೋಗ್ಯರಾಗಿ ನಡೆದುಕೊಳ್ಳಿರಿ. ನಾನು ನಿಮ್ಮಲ್ಲಿಗೆ ಬಂದರೂ ಸರಿ, ಬಾರದಿದ್ದರೂ ಸರಿ, ಇದು ಮುಖ್ಯವಲ್ಲ. ಶುಭಸಂದೇಶವು ನೀಡುವ ವಿಶ್ವಾಸಕ್ಕಾಗಿ ನೀವು ಒಮ್ಮನಸ್ಸಿನಿಂದ, ಕೆಚ್ಚಿನಿಂದ ಹೋರಾಡುವುದೇ ಮುಖ್ಯ. ಇದು ನನಗೆ ತಿಳಿದುಬಂದರೆ ಅಷ್ಟೇ ಸಾಕು.


ನನ್ನಲ್ಲಿದ್ದೂ ಫಲಕೊಡದ ಕವಲುಬಳ್ಳಿಗಳನ್ನೆಲ್ಲಾ ಅವರು ಕತ್ತರಿಸಿಹಾಕುವರು. ಫಲಕೊಡುವ ಕವಲುಬಳ್ಳಿಗಳು ಮತ್ತಷ್ಟು ಫಲಕೊಡುವಂತೆ ಅವನ್ನು ಸವರಿ ಶುದ್ಧಗೊಳಿಸುವರು.


ಪ್ರಭು ಯೇಸುವಿನ ಅಧಿಕಾರದಿಂದ ನಾವು ನಿಮಗೆ ವಿಧಿಸಿದ ನಿಯಮಗಳನ್ನು ನೀವು ಬಲ್ಲಿರಿ.


ಈ ಕಾರಣ, ಇಲ್ಲಾದರೂ ಸರಿ, ಅಲ್ಲಾದರೂ ಸರಿ, ಪ್ರಭು ಮೆಚ್ಚುವಂತೆ ಬಾಳುವುದೊಂದೇ ನಮ್ಮ ಗುರಿ.


ಶರೀರ ಸ್ವಭಾವಕ್ಕೆ ಅನುಸಾರವಾಗಿ ನಡೆಯುವವರು ದೇವರನ್ನು ಮೆಚ್ಚಿಸಲು ಸಾಧ್ಯವೇ ಇಲ್ಲ


ಸಜ್ಜನರ ಮಾರ್ಗ ಪ್ರಾತಃಕಾಲದ ಬೆಳಕಿನಂತೆ; ಅದರ ಬೆಳಕು ಹೆಚ್ಚುತ್ತಿರುತ್ತದೆ ಬಟ್ಟ ಹಗಲವರೆಗೆ.


ಸಹೋದರರೇ, ಈ ಬುದ್ಧಿಮಾತುಗಳನ್ನು ತಾಳ್ಮೆಯಿಂದ ಸ್ವೀಕರಿಸಬೇಕೆಂದು ಕೇಳಿಕೊಳ್ಳುತ್ತೇನೆ. ಇವನ್ನು ಸಂಕ್ಷೇಪವಾಗಿಯೇ ನಿಮಗೆ ಬರೆದಿದ್ದೇನೆ.


ವಿಶ್ವಾಸವಿಲ್ಲದೆ ದೇವರ ಮೆಚ್ಚುಗೆಗೆ ಪಾತ್ರರಾಗಲು ಯಾರಿಂದಲೂ ಸಾಧ್ಯವಿಲ್ಲ. ದೇವರ ಬಳಿಗೆ ಸಾಗುವವರು, ಅವರ ಅಸ್ತಿತ್ವವನ್ನು ವಿಶ್ವಾಸಿಸಬೇಕು; ಅವರನ್ನು ಅರಸುವವರಿಗೆ ತಕ್ಕ ಪ್ರತಿಫಲ ಸಿಗುವದೆಂದು ನಂಬಬೇಕು.


ಬುದ್ಧಿಹೀನರಾಗಿರದೆ ಪ್ರಭುವಿನ ಚಿತ್ತವೇನೆಂದು ಗ್ರಹಿಸಿಕೊಳ್ಳಿರಿ.


ಕ್ರಿಸ್ತಯೇಸುವಿನಿಂದ ನೀವು ಇಂಥದ್ದೇನನ್ನು ಕಲಿಯಲಿಲ್ಲ.


“ಪೌಲನು ನಮ್ಮ ಹತ್ತಿರವಿರುವಾಗ ಮೆದುವಾಗಿಯೂ ದೂರವಿರುವಾಗ ಕಠಿಣನಾಗಿಯೂ ವರ್ತಿಸುತ್ತಾನೆ,” ಎಂದು ನಿಮ್ಮಲ್ಲಿ ಕೆಲವರು ಮಾತನಾಡಿಕೊಳ್ಳುವುದು ನನಗೆ ತಿಳಿದುಬಂದಿದೆ. ವಿನಯಶೀಲರೂ ದೀನದಯಾಳುವೂ ಆದ ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾನು ಕೇಳಿಕೊಳ್ಳುವುದೇನೆಂದರೆ:


ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೇನೆಂದರೆ: ದೇವರಿಂದ ನೀವು ಪಡೆದ ವರಪ್ರಸಾದಗಳನ್ನು ವ್ಯರ್ಥಮಾಡಬೇಡಿ.


ಪ್ರಿಯ ಸಹೋದರರೇ, ನಾನು ನಿಮಗೆ ಬೋಧಿಸಿದ ಶುಭಸಂದೇಶವನ್ನು ನೆನಪಿಗೆ ತಂದುಕೊಳ್ಳಿರಿ. ನೀವು ಅದನ್ನು ಸ್ವೀಕರಿಸಿದ್ದೀರಿ. ಅದರಲ್ಲಿ ನೆಲೆಯಾಗಿ ನಿಂತಿದ್ದೀರಿ.


ನಿಮಗೆ ಮಾಡಿದ ಉಪದೇಶವನ್ನು ನಾನು ಪ್ರಭುವಿನಿಂದಲೇ ಪಡೆದೆನು. ಅದೇನೆಂದರೆ: ಪ್ರಭುಯೇಸು, ತಮ್ಮನ್ನು ಹಿಡಿದುಕೊಡಲಾದ ಆ ರಾತ್ರಿ, ರೊಟ್ಟಿಯನ್ನು ತೆಗೆದುಕೊಂಡು


ಏಕೆಂದರೆ, ದೈವಯೋಜನೆಯನ್ನು ಕಿಂಚಿತ್ತೂ ಮರೆಮಾಚದೆ ತಿಳಿಯಪಡಿಸಿದ್ದೇನೆ.


ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನು ಅವರ ಪ್ರತ್ಯಕ್ಷತೆಯನ್ನೂ ಸಾಮ್ರಾಜ್ಯವನ್ನೂ ಮುಂದಿಟ್ಟು ನಿನಗೆ ಆಜ್ಞಾಪಿಸುವುದೇನೆಂದರೆ:


ದೇವರ ಸನ್ನಿಧಿಯಲ್ಲಿಯೂ ಕ್ರಿಸ್ತಯೇಸುವಿನ ಪ್ರಸನ್ನತೆಯಲ್ಲಿಯೂ ಹಾಗೂ ಆಯ್ಕೆಯಾದ ದೇವದೂತರ ಮುಂದೆಯೂ ನಾನು ನಿನಗೆ ಆಜ್ಞಾಪಿಸುವುದಿದು: ಪೂರ್ವಾಗ್ರಹದಿಂದಾಗಲಿ, ಪಕ್ಷಪಾತದಿಂದಾಗಲಿ ಏನೂ ಮಾಡಬೇಡ.


ಸಹೋದರರೇ, ನಿಮ್ಮಲ್ಲಿ ಯಾರಾದರೂ ತಪ್ಪಿತಸ್ಥರಾಗಿದ್ದರೆ, ಆಧ್ಯಾತ್ಮಿಕ ಜೀವಿಗಳಾದ ನೀವು ಅಂಥವನನ್ನು ನಯವಿನಯದಿಂದ ತಿದ್ದಿ ಸರಿಯಾದ ದಾರಿಗೆ ತರಬೇಕು. ಆದರೆ ನೀನೂ ಅವನಂತೆ ಪಾಪಪ್ರಚೋದನೆಗೆ ಒಳಗಾಗದಂತೆ ಎಚ್ಚರಿಕೆಯಿಂದಿರಬೇಕು.


ಸಹೋದರರೇ, ನಿಮ್ಮೊಡನೆ ದುಡಿಯುತ್ತಾ ಪ್ರಭುವಿನ ಹೆಸರಿನಲ್ಲಿ ನಿಮಗೆ ಅಧಿಕಾರಿಗಳೂ ಮಾರ್ಗದರ್ಶಕರೂ ಆಗಿರುವವರಿಗೆ ತಕ್ಕ ಸನ್ಮಾನವನ್ನು ಸಲ್ಲಿಸಿರಿ.


ನೀವಾದರೋ ಸಹೋದರರೇ, ಸತ್ಕಾರ್ಯದ ಸಾಧನೆ ಸಾಕಾಯಿತೆಂದು ಹೇಳಿದಿರಿ.


ಇವನು ಇಸ್ರಯೇಲರಂತೆ ನಡೆಯದೆ, ತನ್ನ ಪಿತೃವಿನ ದೇವರಲ್ಲಿ ಭಕ್ತಿಯಿಟ್ಟು ಅವರ ಆಜ್ಞೆಗಳನ್ನು ಅನುಸರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು