Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 4:11 - ಕನ್ನಡ ಸತ್ಯವೇದವು C.L. Bible (BSI)

11 ಮತ್ತೊಬ್ಬರ ವಿಷಯದಲ್ಲಿ ನೀವು ತಲೆಹಾಕದೆ ನಿಮ್ಮ ಸ್ವಂತಕಾರ್ಯಗಳಲ್ಲೇ ಮಗ್ನರಾಗಿರಿ. ನೆಮ್ಮದಿಯ ಜೀವನವೇ ನಿಮ್ಮ ಗುರಿಯಾಗಿರಲಿ. ನಿಮ್ಮ ಸ್ವಂತ ದುಡಿಮೆಯಿಂದ ಬದುಕನ್ನು ಸಾಗಿಸಿರಿ. ಇದೇ ನಿಮಗೆ ನಮ್ಮ ಆದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟಿರುವ ಪ್ರಕಾರ ನೀವು ಮತ್ತೊಬ್ಬರ ವಿಷಯದಲ್ಲಿ ತಲೆಹಾಕದೆ ಸುಮ್ಮಗಿದ್ದು, ಸ್ವಂತ ಕಾರ್ಯಗಳನ್ನೇ ನೋಡಿಕೊಳ್ಳುತ್ತಾ, ಕೈಯಾರೆ ಕೆಲಸಮಾಡಿ ದುಡಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇದಲ್ಲದೆ ನಾನು ನಿಮಗೆ ಆಜ್ಞೆಕೊಟ್ಟ ಪ್ರಕಾರ ನೀವು ಮತ್ತೊಬ್ಬರ ಕಾರ್ಯದಲ್ಲಿ ತಲೆಹಾಕದೆ ಸುಮ್ಮಗಿದ್ದು ಸ್ವಂತ ಕಾರ್ಯವನ್ನೇ ನಡಿಸಿಕೊಂಡು ಕೈಯಾರೆ ಕೆಲಸಮಾಡುವದೇ ಮಾನವೆಂದೆಣಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಶಾಂತಿಯಿಂದ ಜೀವಿಸಲು ನಿಮ್ಮಿಂದಾದಷ್ಟು ಪ್ರಯತ್ನಿಸಿರಿ. ನಿಮ್ಮ ಸ್ವಂತ ವ್ಯವಹಾರದ ಮೇಲ್ವಿಚಾರಣೆಯನ್ನು ನೋಡಿಕೊಳ್ಳಿ. ನಿಮ್ಮ ಕೈಯಾರೆ ಕೆಲಸ ಮಾಡಬೇಕೆಂದು ನಾವು ಈಗಾಗಲೇ ನಿಮಗೆ ಹೇಳಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇದಲ್ಲದೆ ನಾವು ನಿಮಗೆ ಹೇಳಿದ ಪ್ರಕಾರ ಪ್ರಶಾಂತ ಜೀವನವೇ ನಿಮ್ಮ ಗುರಿಯಾಗಿರಲಿ: ನೀವು ಸ್ವಂತ ಕಾರ್ಯಗಳನ್ನೇ ನಡೆಸಿಕೊಂಡು, ನಿಮ್ಮ ಕೈಯಾರೆ ಕೆಲಸ ಮಾಡುವವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಅಮಿ ತುಮ್ಕಾ ಸಾಂಗಲ್ಲ್ಯಾ ಬಾಸೆನ್ ಸಮಾದಾನಾಚೆ ಜಿವನ್ ಕರಾ, ತುಮ್ಚೆ-ತುಮ್ಚೆ ಕಾಮ್ ಕರಾ, ಅನಿ ತುಮ್ಚ್ಯಾ ಜಿವನಾಸಾಟ್ನಿ ತುಮಿಚ್ ರಾಬುನ್ ಗೊಳಾ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 4:11
23 ತಿಳಿವುಗಳ ಹೋಲಿಕೆ  

ಕಳ್ಳತನ ಮಾಡುವವನು ಕಳ್ಳತನವನ್ನು ಬಿಟ್ಟುಬಿಡಲಿ; ಶ್ರಮಪಟ್ಟು ದುಡಿದು ಸಂಪಾದಿಸಲಿ. ಆಗ ತನ್ನ ಪ್ರಾಮಾಣಿಕ ದುಡಿಮೆಯಿಂದ ಕಷ್ಟದಲ್ಲಿರುವವರಿಗೆ ನೆರವು ನೀಡಲು ಸಾಧ್ಯವಾಗುವುದು.


ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ಎರಡು ಕೈಹಿಡಿ ವ್ಯರ್ಥ ಪರಿಶ್ರಮಕ್ಕಿಂತ ಒಂದೇ ಕೈಹಿಡಿಯಷ್ಟು ಸಂಪಾದನೆ ಪಡೆದು ನೆಮ್ಮದಿಯಿಂದಿರುವುದು ಲೇಸು.


ಬದಲಿಗೆ, ಶಾಶ್ವತವಾದ, ಶಾಂತ ಹಾಗೂ ಸೌಮ್ಯಗುಣಗಳಿಂದ ಕೂಡಿದ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ. ಇದೇ ದೇವರ ದೃಷ್ಟಿಯಲ್ಲಿ ಅತೀ ಅಮೂಲ್ಯವಾದುದು.


ನಮ್ಮ ಜನರು ಸತ್ಕ್ರಿಯೆಗಳಲ್ಲಿ ನಿರತರಾಗಿರಲಿ. ಕುಂದುಕೊರತೆಯಲ್ಲಿರುವವರಿಗೆ ನೆರವಾಗಲಿ. ಪರೋಪಕಾರವನ್ನು ಕಲಿತುಕೊಳ್ಳಲಿ. ವ್ಯರ್ಥಜೀವನವನ್ನು ನಡೆಸದಿರಲಿ.


ನಾವು ದೈವಭಕ್ತಿಯುಳ್ಳವರಾಗಿ ಮತ್ತು ಗೌರವಯುತರಾಗಿ ಶಾಂತಿಸಮಾಧಾನದಿಂದಲೂ ನೆಮ್ಮದಿಯಿಂದಲೂ ಜೀವಿಸಲು ಅನುಕೂಲವಾಗುವಂತೆ ಅರಸರಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ಪ್ರಾರ್ಥಿಸಬೇಕು.


ಸರ್ವೇಶ್ವರನು ನಮ್ಮನ್ನು ಉದ್ಧರಿಸುವನೆಂದು ಎದುರುನೋಡುತ್ತಾ ತಾಳ್ಮೆಯಿಂದಿರುವುದು ಒಳಿತು.


ಜಗಳ ತುಂಬಿದ ಮನೆಯಲ್ಲಿ ಹಬ್ಬದೂಟ ಮಾಡುವುದಕ್ಕಿಂತಲು ಶಾಂತಿ ಸಮಾಧಾನದಿಂದ ಕೂಡಿದ ಒಣ ತುತ್ತೇ ಲೇಸು.


ಸ್ವಂತ ದುಡಿಮೆಯಿಂದ ಜೀವಿಸುತ್ತೇವೆ; ನಮ್ಮನ್ನು ಶಪಿಸುವವರನ್ನು ಆಶೀರ್ವದಿಸುತ್ತೇವೆ; ಹಿಂಸೆಗೊಳಗಾದಾಗ ಸಹಿಸಿಕೊಳ್ಳುತ್ತೇವೆ.


ನಿಮ್ಮಲ್ಲಿ ಯಾರೂ ಕೊಲೆಗಾರ, ಕಳ್ಳ, ಕೆಡುಕ, ಕುಚೋದ್ಯಗಾರ, ಎಂಬ ಕಾರಣದಿಂದ ಹಿಂಸೆಬಾಧೆಗಳಿಗೆ ಗುರಿಯಾಗಬಾರದು.


ಇದಲ್ಲದೆ ಅವರು ಮನೆಮನೆಗಳನ್ನು ಸುತ್ತುತ್ತಾ ಅಲೆದಾಡುತ್ತಾ ಹರಟೆಮಲ್ಲರೂ ಸೋಮಾರಿಗಳೂ ಆಗಬಹುದು. ಇತರರ ವಿಷಯಗಳಲ್ಲಿ ತಲೆಹಾಕಬಹುದು.


ಈ ಕಾರಣ, ಇಲ್ಲಾದರೂ ಸರಿ, ಅಲ್ಲಾದರೂ ಸರಿ, ಪ್ರಭು ಮೆಚ್ಚುವಂತೆ ಬಾಳುವುದೊಂದೇ ನಮ್ಮ ಗುರಿ.


ಪ್ರಭುವಿನ ಸೇವೆಯಲ್ಲಿ ಆಲಸಿಗಳಾಗದೆ ಅತ್ಯಾಸಕ್ತರಾಗಿರಿ.


ಹೀಗೆ ಕಷ್ಟಪಟ್ಟು ದುಡಿದು, ದುರ್ಬಲರಿಗೆ ನೆರವಾಗಬೇಕೆಂದು ನಾನು ನಿಮಗೆ ಹಲವಾರು ವಿಧದಲ್ಲಿ ತೋರಿಸಿಕೊಟ್ಟಿದ್ದೇನೆ. ‘ಕೊಳ್ಳುವ ಕೈಗಿಂತ ಕೊಡುವ ಕೈ ಧನ್ಯವಾದುದು’ ಎಂಬ ಯೇಸುಸ್ವಾಮಿಯ ಮಾತುಗಳನ್ನು ನೆನಪಿನಲ್ಲಿಡಿ.”


ಪ್ರವಾಸಕ್ಕೆಂದು ಯಜಮಾನನೊಬ್ಬನು ಮನೆಬಿಟ್ಟು ಹೋಗುವಾಗ ತನ್ನ ಸೇವಕರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ಜವಾಬ್ದಾರಿಕೆಯನ್ನು ವಹಿಸಿ, ದ್ವಾರಪಾಲಕನಿಗೆ ‘ನೀನು ಎಚ್ಚರವಾಗಿರಬೇಕು,’ ಎಂದು ಅಪ್ಪಣೆಕೊಡುವ ರೀತಿಯಲ್ಲಿ ನಾನು ನಿಮಗೆ ಹೇಳುತ್ತಿದ್ದೇನೆ. ಎಚ್ಚರವಾಗಿರಿ;


ಮತ್ತೊಬ್ಬನು ಹಾಕಿದ ಅಸ್ತಿವಾರದ ಮೇಲೆ ನಾನು ಕಟ್ಟುವುದು ಸರಿ ಅಲ್ಲವೆಂಬುದು ನನ್ನ ಅಭಿಪ್ರಾಯ. ಆದಕಾರಣ ಕ್ರಿಸ್ತಯೇಸುವಿನ ನಾಮವು ಪ್ರಚಾರವಾಗದಕಡೆ ಹೋಗಿ ಶುಭಸಂದೇಶವನ್ನು ಸಾರಬೇಕೆಂಬುದೇ ನನ್ನ ಆಕಾಂಕ್ಷೆ.


ಅವರು ತನ್ನಂತೆಯೇ ಗುಡಾರಮಾಡುವ ಕಸುಬಿನವರಾಗಿದ್ದರಿಂದ ಅವರಲ್ಲೇ ತಂಗಿದ್ದು ಅವರೊಡನೆ ಕೆಲಸಮಾಡುತ್ತಾ ಬಂದನು.


ವಾಗ್ವಾದವು ಏರಿಗೆ ಬಿರುಕು ಬಿದ್ದಂತೆ; ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ತೊರೆದುಬಿಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು