Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 4:12 - ಕನ್ನಡ ಸತ್ಯವೇದವು C.L. Bible (BSI)

12 ಹೀಗೆ ಬಾಳಿದರೆ ಅನ್ಯಜನರು ನಿಮ್ಮನ್ನು ಗೌರವಿಸುವರು; ಇತರರನ್ನು ಅವಲಂಬಿಸುವ ಅವಶ್ಯಕತೆ ನಿಮಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೀಗಿದ್ದರೆ ನೀವು ಹೊರಗಿನವರ ದೃಷ್ಟಿಯಲ್ಲಿ ಸಜ್ಜನರಾಗಿರುವುದೇ ಅಲ್ಲದೆ ನಿಮಗೆ ಯಾವುದಕ್ಕೂ ಕೊರತೆಯಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೀಗಿದ್ದರೆ ನೀವು ಹೊರಗಿನವರ ಎದುರಿನಲ್ಲಿ ಸಜ್ಜನರಾಗಿ ನಡೆದುಕೊಳ್ಳುವಿರಿ ಮತ್ತು ನಿಮಗೆ ಯಾವದಕ್ಕೂ ಕೊರತೆಯಿರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೀವು ಹೀಗೆ ಮಾಡಿದರೆ, ವಿಶ್ವಾಸಿಗಳಲ್ಲದವರು ನಿಮ್ಮ ಜೀವತದ ರೀತಿಯನ್ನು ಕಂಡು ನಿಮ್ಮನ್ನು ಗೌರವಿಸುತ್ತಾರೆ. ಅಲ್ಲದೆ ನಿಮ್ಮ ಅಗತ್ಯತೆಗಳ ಪೂರೈಕೆಗಾಗಿ ನೀವು ಬೇರೆಯವರನ್ನು ಅವಲಂಬಿಸಿಕೊಳ್ಳುವ ಅವಶ್ಯಕತೆಯೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಹೀಗೆ ನಿಮ್ಮ ಅನುದಿನದ ಜೀವನವು ಹೊರಗಿನವರ ಮುಂದೆ ಯೋಗ್ಯವಾಗಿರುವುದು ಮತ್ತು ನೀವು ಯಾರ ಮೇಲೆಯೂ ಆತುಕೊಳ್ಳದೆ ಬಾಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಅಶೆ ತುಮ್ಚ್ಯಾ ಭೊತ್ಯಾನಿ ಹೊತ್ತ್ಯಾ ಕ್ರಿಸ್ತಾಕ್ ವಿಶ್ವಾಸ್ ಕರಿನಸಲ್ಲ್ಯಾ ಲೊಕಾತ್ನಿ ತುಮ್ಕಾ ಕಿಮ್ಮತ್ ಗಾವ್ತಾ. ಅನಿ ತುಮ್ಕಾ ಪಾಜೆ ಹೊಲ್ಲ್ಯಾ ಗರ್ಜೆಕ್ನಿ ತುಮಿ ದುಸ್ರ್ಯಾಂಚ್ಯಾ ವರ್‍ತಿ ಭಾರ್ ಥವ್ನ್ ಘೆವ್ನ್ ರ್‍ಹಾವ್ಚೆ ಮನುನ್ ರ್‍ಹಾಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 4:12
15 ತಿಳಿವುಗಳ ಹೋಲಿಕೆ  

ನೆರೆಯವರ ವಿಷಯದಲ್ಲಿ ಜಾಣತನದಿಂದ ವರ್ತಿಸಿರಿ. ನಿಮಗಿರುವ ಸಮಯ ಸಂದರ್ಭವನ್ನು ಸದುಪಯೋಗಪಡಿಸಿಕೊಳ್ಳಿರಿ.


ಅನ್ಯಧರ್ಮೀಯರ ಮಧ್ಯೆ ನಿಮ್ಮ ನಡತೆ ಆದರ್ಶಪ್ರಾಯವಾಗಿರಲಿ. ಅವರು ನಿಮ್ಮನ್ನು ದುಷ್ಕರ್ಮಿಗಳೆಂದು ದೂಷಿಸಿದರೂ ನಿಮ್ಮ ಸತ್ಕಾರ್ಯಗಳನ್ನು ಮೆಚ್ಚಿಕೊಂಡು ಕ್ರಿಸ್ತಯೇಸುವಿನ ಪುನರಾಗಮನದ ದಿನದಂದು ದೇವರನ್ನು ಕೊಂಡಾಡುವರು.


ಕೇಡಿಗೆ ಪ್ರತಿಯಾಗಿ ಕೇಡನ್ನು ಮಾಡದಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಮಾನ್ಯವೋ ಅದನ್ನೇ ಮಾಡಿರಿ.


ಕ್ರೈಸ್ತರಲ್ಲದವರಿಂದಲೂ ಆತನು ಒಳ್ಳೆಯವನೆನಿಸಿಕೊಂಡಿರಬೇಕು. ಹೀಗಿದ್ದರೆ ಮಾತ್ರ ನಿಂದೆಗೊಳಗಾಗದೆ ಸೈತಾನನ ಕುತಂತ್ರಗಳಿಂದ ದೂರವಿರಬಲ್ಲನು.


ದುಂದೌತಣ - ಕುಡಿತಗಳಲ್ಲಾಗಲೀ, ಕಾಮವಿಲಾಸ-ನಿರ್ಲಜ್ಜಾಕೃತ್ಯಗಳಲ್ಲಾಗಲೀ, ಕಲಹ-ಮತ್ಸರಗಳಲ್ಲಾಗಲೀ ಕಾಲಕಳೆಯದೆ ಬೆಳಕಿನಲ್ಲಿ ಬಾಳುವವರಂತೆ ಸಭ್ಯರಾಗಿ ವರ್ತಿಸೋಣ.


ಅದಕ್ಕೆ ಯೇಸು, “ದೇವರ ಸಾಮ್ರಾಜ್ಯದ ರಹಸ್ಯವನ್ನು ನಿಮಗೆ ತಿಳಿಸಲಾಗಿದೆ. ಮಿಕ್ಕವರಿಗಾದರೋ ಅದೆಲ್ಲವೂ ಸಾಮತಿಗಳ ರೂಪದಲ್ಲಿ ಮರೆಯಾಗಿದೆ. ಏಕೆಂದರೆ,


ಕೆಟ್ಟದ್ದನ್ನೆಲ್ಲಾ ಬಿಟ್ಟುಬಿಡಿ.


ಅಂತೆಯೇ ಸ್ತ್ರೀಯರೇ, ನೀವು ನಿಮ್ಮ ಪತಿಯರಿಗೆ ವಿಧೇಯರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯವನ್ನು ನಂಬದೆ ಇರಬಹುದು. ಆದರೂ ಯಾವ ಮಾತುಕತೆಯಿಲ್ಲದೆ ನಿಮ್ಮ ಸನ್ನಡತೆಯಿಂದಲೇ ಅವರನ್ನು ಜಯಿಸಬಹುದು.


ಕಡೆಯದಾಗಿ ಸಹೋದರರೇ, ಯಾವುದು ಸತ್ಯವು-ಮಾನ್ಯವು, ನ್ಯಾಯವು-ಶುದ್ಧವು, ಪ್ರೀತಿಕರವು-ಮನೋಹರವು ಆಗಿದೆಯೋ ಯಾವುದು ಸದ್ಗುಣವು-ಸ್ತುತ್ಯಾರ್ಹವು ಆಗಿದೆಯೋ ಅಂಥವುಗಳಲ್ಲಿ ಮಗ್ನರಾಗಿರಿ.


ಕಳ್ಳತನ ಮಾಡುವವನು ಕಳ್ಳತನವನ್ನು ಬಿಟ್ಟುಬಿಡಲಿ; ಶ್ರಮಪಟ್ಟು ದುಡಿದು ಸಂಪಾದಿಸಲಿ. ಆಗ ತನ್ನ ಪ್ರಾಮಾಣಿಕ ದುಡಿಮೆಯಿಂದ ಕಷ್ಟದಲ್ಲಿರುವವರಿಗೆ ನೆರವು ನೀಡಲು ಸಾಧ್ಯವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು