Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 4:14 - ಕನ್ನಡ ಸತ್ಯವೇದವು C.L. Bible (BSI)

14 ಯೇಸು ಸತ್ತು ಪುನರುತ್ಥಾನ ಹೊಂದಿದರೆಂದು ನಾವು ವಿಶ್ವಾಸಿಸುತ್ತೇವೆ ಅಲ್ಲವೇ? ಹಾಗೆಯೇ, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟು ಮರಣಹೊಂದಿದವರನ್ನು ದೇವರು ಯೇಸುಕ್ರಿಸ್ತರೊಡನೆ ಮರಳಿ ಕರೆದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬುತ್ತೇವೆ ಹಾಗೆಯೇ ಯೇಸುವಿನಲ್ಲಿದ್ದು ನಿದ್ರೆಹೋದವರನ್ನು ಸಹ ದೇವರು ಆತನೊಡನೆ ಎಬ್ಬಿಸಿ ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೇಸು ಸತ್ತುಹೋದನೆಂದು ನಾವು ನಂಬುತ್ತೇವೆ. ಆದರೆ ಯೇಸು ಮತ್ತೆ ಜೀವಂತವಾಗಿ ಎದ್ದುಬಂದನೆಂಬುದನ್ನೂ ನಾವು ನಂಬುತ್ತೇವೆ. ಹಾಗೆಯೇ ಯೇಸುವಿನಲ್ಲಿ ವಿಶ್ವಾಸವಿಟ್ಟು ಸತ್ತುಹೋದವರನ್ನು ದೇವರು ಆತನ ಜೊತೆಯಲ್ಲಿ ಕರೆದುಕೊಂಡು ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಏಕೆಂದರೆ ಯೇಸು ಸತ್ತು ಪುನಃ ಜೀವಂತವಾಗಿ ಎದ್ದರೆಂದು ನಾವು ನಂಬಿದರೆ, ಅದರಂತೆ ಯೇಸುವಿನಲ್ಲಿ ನಿದ್ರೆಹೋದವರನ್ನು ಸಹ ದೇವರು ಅವರೊಡನೆ ಕರೆದುಕೊಂಡು ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಜೆಜು ಕ್ರಿಸ್ತ್ ಮರ್ಲೊ, ಅನಿ ಅನಿ ಪರ್ತುನ್ ಝಿತ್ತೊ ಹೊವ್ನ್ ಉಟ್ಲೊ ಮನುನ್ ಅಮಿ ವಿಶ್ವಾಸ್ ಕರ್ತಾಂವ್, ತೆಚ್ಯಾಸಾಟ್ನಿ ಜೆ ಕೊನ್ ಕ್ರಿಸ್ತಾಚ್ಯಾ ವರ್‍ತಿ ವಿಶ್ವಾಸ್ ಥವ್ನ್ ಮರ್ಲ್ಯಾತ್, ತೆಂಕಾ ದೆವ್ ಕ್ರಿಸ್ತಾಚ್ಯಾ ವಾಂಗ್ಡಾ ಅನಿ ಝಿತ್ತೊ ಕರುನ್ ಉಟ್ವುತಾ ಮನುನ್ ಅಮಿ ವಿಶ್ವಾಸ್ ಕರ್‍ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 4:14
16 ತಿಳಿವುಗಳ ಹೋಲಿಕೆ  

ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರ ಆತ್ಮ ನಿಮ್ಮಲ್ಲಿ ನೆಲೆಗೊಂಡಿರಲಿ. ಆಗ ಕ್ರಿಸ್ತಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ನೆಲೆಗೊಂಡಿರುವ ಆತ್ಮನ ಮುಖಾಂತರ ನಿಮ್ಮ ನಶ್ವರ ದೇಹಗಳಿಗೂ ಜೀವವನ್ನೀಯುವರು.


ಬದುಕುವರು ನಿಧನರಾದ ನಮ್ಮ ಜನರು ಜೀವದಿಂದೇಳುವುವು ನಮ್ಮವರ ಶವಗಳು. ಎದ್ದು ಹರ್ಷಧ್ವನಿಗೈಯಲಿ ನೆಲದಲಿ ಬಿದ್ದಿರುವವರು. ನೀ ಸುರಿಸುವ ಇಬ್ಬನಿ ಜ್ಯೋತಿರ್ಮಯ, ಆದುದರಿಂದ ಸತ್ತವರು ಪುನರುತ್ಥಾನಹೊಂದುವರು ನೆಲದಿಂದ.


ಸಹೋದರರೇ, ಮೃತರ ಮುಂದಿನ ಸ್ಥಿತಿಗತಿಯ ವಿಷಯವಾಗಿ ನೀವು ತಿಳಿದಿರಬೇಕು ಎಂಬುದೇ ನಮ್ಮ ಬಯಕೆ. ಏಕೆಂದರೆ, ನಂಬಿಕೆ ನಿರೀಕ್ಷೆಯಿಲ್ಲದ ಇತರರಂತೆ ಮೃತರಿಗಾಗಿ ನೀವು ದುಃಖಿಸಬಾರದು.


ನಮ್ಮ ಪ್ರಭು ಯೇಸು ನಿಮ್ಮನ್ನು ದೃಢಪಡಿಸಲಿ; ತಮ್ಮ ಪರಿಶುದ್ಧ ಪರಿವಾರದ ಸಮೇತ ಯೇಸು ಪುನರಾಗಮಿಸುವಾಗ, ನಮ್ಮ ಪಿತನಾದ ದೇವರ ಸನ್ನಿಧಾನದಲ್ಲಿ ನೀವೂ ಸಹ ಪರಿಶುದ್ಧರೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಂತೆ ಮಾಡಲಿ.


ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.


ಇದಾದ ಮೇಲೆ ಸ್ವರ್ಗದಿಂದ ಬಂದ ಧ್ವನಿಯೊಂದು ಕೇಳಿಸಿತು. ಅದು ನನಗೆ, “ನೀನಿದನ್ನು ಬರೆ: ಇಂದಿನಿಂದ ಪ್ರಭುವಿನ ಭಕ್ತರಾಗಿ ಸಾಯುವವರು ಭಾಗ್ಯವಂತರು,” ಎಂದು ತಿಳಿಸಿತು. ಆಗ ದೇವರ ಆತ್ಮ, “ಹೌದು, ಅವರೇ ಭಾಗ್ಯವಂತರು. ಇನ್ನು ಅವರ ಸಂಕಷ್ಟಗಳು ಮುಗಿದು ಅವರಿಗೆ ವಿಶ್ರಾಂತಿ ದೊರಕುವುದು; ಅವರ ಸುಕೃತ್ಯಗಳಿಗೆ ತಕ್ಕ ಪ್ರತಿಫಲ ದೊರಕುವುದು,” ಎಂದು ಹೇಳಿತು.


ಆಮೇಲೆ, ಇನ್ನೂ ಬದುಕಿರುವ ನಾವು ಎದ್ದುಬಂದವರೊಡನೆ ಆಕಾಶಮಂಡಲದಲ್ಲಿ ಪ್ರಭುವನ್ನು ಎದುರುಗೊಳ್ಳಲು ಮೇಘಾರೂಢರಾಗಿ ಮೇಲಕ್ಕೆ ಒಯ್ಯಲ್ಪಡುತ್ತೇವೆ. ಹೀಗೆ ಸರ್ವದಾ ನಾವು ಪ್ರಭುವಿನೊಂದಿಗೆ ಇರುತ್ತೇವೆ.


ತುತೂರಿಯ ಘೋಷಣೆಯೊಂದಿಗೆ ಆತನು ತನ್ನ ದೂತರನ್ನು ನಾಲ್ಕು ದಿಕ್ಕುಗಳಿಗೂ ಕಳುಹಿಸುವನು. ಅವರು ಹೋಗಿ ಆತನಿಂದ ಆಯ್ಕೆಯಾದ ಜನರನ್ನು ವಿಶ್ವದ ಅಷ್ಟದಿಕ್ಕುಗಳಿಂದ ಒಟ್ಟುಗೂಡಿಸುವರು.


ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಪುನರಾಗಮನವನ್ನು ಮತ್ತು ನಾವು ಅವರ ಸನ್ನಿಧಿಯಲ್ಲಿ ಒಂದಾಗಿ ಸೇರುವ ವಿಷಯವನ್ನು ಕುರಿತು ನಿಮ್ಮಲ್ಲಿ ನಾವು ವಿನಂತಿಸುವುದೇನೆಂದರೆ:


ನಾಡಿನ ಜನರಿಗೆ ತಗಲುವಂಥ ವ್ಯಾಧಿಯೇ ಕುದುರೆ, ಹೇಸರಗತ್ತೆ, ಒಂಟೆ, ಕತ್ತೆ ಮುಂತಾದ ಪಾಳೆಯದಲ್ಲಿನ ಎಲ್ಲ ಪಶುಪ್ರಾಣಿಗಳಿಗೂ ತಗಲುವುದು.


ಗಾದನು ಗುರಿಯಾಗುವನು ಸುಲಿಗೆಗಾರರಾಕ್ರಮಣಕೆ ಓಡುವನಾ ದರೋಡೆಗಾರರನ್ನು ಹಿಮ್ಮೆಟ್ಟಿಕೊಂಡೇ.


ಏಕೆಂದರೆ, ಸತ್ತವರಿಗೂ ಬದುಕುವವರಿಗೂ ಪ್ರಭುವಾಗಬೇಕೆಂಬ ಉದ್ದೇಶದಿಂದಲೇ ಕ್ರಿಸ್ತಯೇಸು ಸತ್ತು ಜೀವಂತರಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು