Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 4:3 - ಕನ್ನಡ ಸತ್ಯವೇದವು C.L. Bible (BSI)

3 ನೀವು ಕೆಟ್ಟ ನಡತೆಯನ್ನು ಬಿಟ್ಟು ಪರಿಶುದ್ಧರಾಗಿ ಜೀವಿಸಬೇಕು ಎಂಬುದು ದೇವರ ಚಿತ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದೇವರ ಚಿತ್ತವೇನಂದರೆ ನೀವು ಶುದ್ಧರಾಗಬೇಕೆಂಬುದೇ. ಆದ್ದರಿಂದ ಹಾದರಕ್ಕೆ ದೂರವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದೇವರ ಚಿತ್ತವೇನಂದರೆ ನೀವು ಶುದ್ಧರಾಗಿ ಇರಬೇಕೆಂಬದೇ. ಆದದರಿಂದ ಹಾದರಕ್ಕೆ ದೂರವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀವು ಪವಿತ್ರರಾಗಿರಬೇಕೆಂಬುದು ದೇವರ ಚಿತ್ತವಾಗಿದೆ. ಆದುದರಿಂದ ನೀವು ಲೈಂಗಿಕ ಪಾಪಗಳಿಂದ ದೂರವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀವು ಪವಿತ್ರರಾಗಿ ಇರಬೇಕೆಂಬುದೇ ದೇವರ ಚಿತ್ತವಾಗಿದೆ. ಆದ್ದರಿಂದ ನೀವು ಕಾಮಾತಿರೇಕಕ್ಕೆ ದೂರವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತುಮಿ ಪವಿತ್ರ್ ಅನಿ ಅನೈತಿಕ್ ಲೈಂಗಿಕ್ ಸಮಂದಾಚ್ಯಾ ಬುರ್ಸ್ಯಾಪಾನಾತ್ನಾ ಎಗ್ದಮ್ ಬರೆ ಹೊಲ್ಲೆ ದೆವಾಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 4:3
47 ತಿಳಿವುಗಳ ಹೋಲಿಕೆ  

ಉಳಿದಿರುವ ತನ್ನ ಜೀವಮಾನ ಕಾಲವನ್ನು ಲೌಕಿಕ ವ್ಯಾಮೋಹಗಳಲ್ಲಿ ಕಳೆಯದೆ ದೇವರ ಚಿತ್ತಕ್ಕನುಸಾರ ಕಳೆಯುತ್ತಾನೆ.


ಶಾಂತಿದಾಯಕ ದೇವರು ನಿಮ್ಮನ್ನು ಪೂರ್ಣವಾಗಿ ಪಾವನಗೊಳಿಸಲಿ. ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ನಿಮ್ಮ ಆತ್ಮ, ಪ್ರಾಣ, ದೇಹ - ಇವುಗಳು ದೋಷರಹಿತವಾಗಿಯೂ ಸ್ವಸ್ಥವಾಗಿಯೂ ಇರುವಂತೆ ನಿಮ್ಮನ್ನು ಕಾಪಾಡಲಿ.


ಇಹಲೋಕದ ಆಚಾರವಿಚಾರಗಳಿಗೆ ಮಾರುಹೋಗಬೇಡಿ. ಬದಲಿಗೆ, ಮಾನಸಾಂತರಗೊಂಡು ನೂತನ ಜೀವಿಗಳಾಗಿ ಬಾಳಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಉನ್ನತವಾದುದು, ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.


ವಿವಾಹಬಂಧನವನ್ನು ಎಲ್ಲರೂ ಗೌರವಿಸಲಿ; ದಂಪತಿಗಳ ಸಂಬಂಧವು ನಿಷ್ಕಳಂಕವಾಗಿರಲಿ. ಕಾಮುಕರೂ ವ್ಯಭಿಚಾರಿಗಳೂ ದೇವರ ನ್ಯಾಯತೀರ್ಪಿಗೆ ಗುರಿಯಾಗುತ್ತಾರೆ.


ಬುದ್ಧಿಹೀನರಾಗಿರದೆ ಪ್ರಭುವಿನ ಚಿತ್ತವೇನೆಂದು ಗ್ರಹಿಸಿಕೊಳ್ಳಿರಿ.


ನಿಮ್ಮಲ್ಲಿರುವ ಪ್ರಾಪಂಚಿಕ ಆಶೆ ಆಕಾಂಕ್ಷೆಗಳನ್ನು ತ್ಯಜಿಸಿರಿ. ಹಾದರ, ಅನೈತಿಕತೆ, ಕಾಮಾಭಿಲಾಷೆ, ದುರಾಲೋಚನೆ, ವಿಗ್ರಹಾರಾಧನೆಗೆ ಸಮವಾಗಿರುವ ಲೋಭ - ಇವುಗಳನ್ನು ದಮನಮಾಡಿರಿ.


ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಪತ್ನಿಯನ್ನು ಘನತೆ ಗೌರವದಿಂದಲೂ ಶುದ್ಧಮನಸ್ಸಿನಿಂದಲೂ ನಡೆಸಿಕೊಳ್ಳಬೇಕು.


ದೈಹಿಕ ವ್ಯಾಮೋಹದ ದುಷ್ಪರಿಣಾಮಗಳು ತಿಳಿದೇ ಇವೆ: ಹಾದರ, ಅಶುದ್ಧತೆ, ಕಾಮುಕತನ,


ಲೋಕವೂ ಅದರ ವ್ಯಾಮೋಹವೂ ಗತಿಸಿಹೋಗುವುವು. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಚಿರಂಜೀವಿಯಾಗಿ ಬಾಳುವನು.


“ನನ್ನನ್ನು ‘ಸ್ವಾಮೀ, ಸ್ವಾಮೀ,’ ಎನ್ನುವ ಪ್ರತಿಯೊಬ್ಬನೂ ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸನು. ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತಾನುಸಾರ ನಡೆಯುವವನು ಮಾತ್ರ ಅದನ್ನು ಪ್ರವೇಶಿಸುವನು.


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ಸಹೋದರರೇ, ಪ್ರಭುವಿಗೆ ಪ್ರಿಯರಾದವರೇ, ನಿಮಗಾಗಿ ನಿರಂತರವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ನಾವು ಬದ್ಧರು. ಏಕೆಂದರೆ, ದೇವರು ನಿಮ್ಮನ್ನು ಪವಿತ್ರಾತ್ಮರ ಮುಖಾಂತರ ಪಾವನಗೊಳಿಸಿ, ನೀವು ಸತ್ಯದಲ್ಲಿ ವಿಶ್ವಾಸವಿಡುವಂತೆ ಮಾಡಿ, ಜೀವೋದ್ಧಾರವನ್ನು ಪಡೆಯುವಂತೆ ನಿಮ್ಮನ್ನು ಪ್ರಥಮ ಫಲವನ್ನಾಗಿ ಆರಿಸಿಕೊಂಡಿದ್ದಾರೆ.


ದೇವರ ಚಿತ್ತವನ್ನು ನೆರವೇರಿಸಿ, ಅವರು ವಾಗ್ದಾನಮಾಡಿರುವುದನ್ನು ಪಡೆದುಕೊಳ್ಳುವಂತೆ, ನೀವೂ ದೃಢಮನಸ್ಕರಾಗಿರಬೇಕು.


ಧಣಿಗಳನ್ನು ಮೆಚ್ಚಿಸುವ ಸಲುವಾಗಿ ಮುಖದಾಕ್ಷಿಣ್ಯದ ಸೇವೆಯನ್ನು ಮಾಡದಿರಿ. ಕ್ರಿಸ್ತಯೇಸುವಿನ ದಾಸರಂತೆ ದೈವೇಚ್ಛೆಯನ್ನು ಹೃದಯಪೂರ್ವಕವಾಗಿ ಈಡೇರಿಸಿರಿ.


ಲೈಂಗಿಕ ಪ್ರಲೋಭನೆಗಳು ಪ್ರಬಲವಾಗಿರುವುದರಿಂದ ಪ್ರತಿಯೊಬ್ಬನಿಗೂ ಸ್ವಂತ ಸತಿ ಇರಲಿ, ಪ್ರತಿಯೊಬ್ಬಳಿಗೂ ಸ್ವಂತ ಪತಿ ಇರಲಿ.


ನೀನೆನ್ನ ದೇವರು; ಕಲಿಸೆನಗೆ ನಡೆಯಲು ನಿನ್ನ ಚಿತ್ತದಂತೆ I ನಿನ್ನ ಶುಭಾತ್ಮ ನೆರವಾಗಲಿ ನಾ ಸಮಹಾದಿಯಲಿ ನಡೆವಂತೆ II


ನಿನ್ನ ಚಿತ್ತಾನುಸಾರ ನಡೆವುದೇ ನನಗೆ ಪರಮಾವೇಶ I ನನ್ನಂತರಂಗದಲಿದೆ ದೇವಾ, ನಿನ್ನ ಧರ್ಮೋಪದೇಶ” II


ಎಲ್ಲಾ ಸಂದರ್ಭಗಳಲ್ಲೂ ಉಪಕಾರಸ್ಮರಣೆಮಾಡಿರಿ. ಕ್ರಿಸ್ತಯೇಸುವಿನಲ್ಲಿ ದೇವರು ನಿಮ್ಮಿಂದ ಇಚ್ಛಿಸುವುದು ಇದನ್ನೇ.


ದೈವೇಚ್ಛೆಯನ್ನು ಯಾರು ನೆರವೇರಿಸುತ್ತಾರೋ ಅವರೇ ನನಗೆ ಸಹೋದರ, ಸಹೋದರಿ, ತಾಯಿ,” ಎಂದರು.


ನೀವು ಯೇಸುಕ್ರಿಸ್ತರಿಗೆ ಶರಣಾಗಿ ಅವರ ರಕ್ತದಿಂದ ಶುದ್ಧೀಕರಣಹೊಂದಲು ತಂದೆಯಾದ ದೇವರ ಸಂಕಲ್ಪಾನುಸಾರ ಆಯ್ಕೆಯಾದವರು; ಅವರ ಆತ್ಮದ ಮುಖಾಂತರ ಪವಿತ್ರೀಕರಿಸಲಾದವರು. ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಸಮೃದ್ಧಿಯಾಗಿ ಲಭಿಸಲಿ!


ನೀವು ಇಂಥ ದೇವರ ಚಿತ್ತವನ್ನು ನೆರವೇರಿಸಲು ನಿಮಗೆ ಬೇಕಾದ ಎಲ್ಲಾ ವರದಾನಗಳನ್ನು ಅವರು ನಿಮಗೆ ಅನುಗ್ರಹಿಸಲಿ. ಸ್ವಾಮಿ ಯೇಸುಕ್ರಿಸ್ತರ ಮುಖಾಂತರ ನಾವು ಅವರಿಗೆ ಪ್ರಿಯರಾದವರಾಗಿ ಬಾಳುವಂತಾಗಲಿ. ಯೇಸುಕ್ರಿಸ್ತರಿಗೆ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ಹೀಗಿರುವುದರಿಂದ ಈ ವಿಷಯವನ್ನು ನಾವು ಕೇಳಿದ ದಿನದಿಂದಲೂ ನಿಮಗಾಗಿ ಸದಾ ಪ್ರಾರ್ಥಿಸುತ್ತಲೇ ಇದ್ದೇವೆ. ನೀವು ಪರಿಪೂರ್ಣ ವಿವೇಕದಿಂದಲೂ ಆಧ್ಯಾತ್ಮಿಕ ಜ್ಞಾನದಿಂದಲೂ ದೇವರ ಚಿತ್ತವನ್ನು ಸಂಪೂರ್ಣವಾಗಿ ಅರಿಯಬೇಕೆಂಬುದೇ ನಮ್ಮ ಕೋರಿಕೆ.


ಹಿಂದೆ ಪಾಪಮಾಡಿದವರಲ್ಲಿ ಹಲವರು ತಮ್ಮ ಅಶುದ್ಧ, ಅನೈತಿಕ, ಕಾಮುಕ ನಡತೆಗೆ ಪಶ್ಚಾತ್ತಾಪಪಡದೆ ಇದ್ದಾರೋ ಏನೋ, ನಾನು ಅವರಿಗಾಗಿ ಪರಿತಪಿಸಬೇಕಾದೀತೋ ಏನೋ, ನಿಮ್ಮ ನಿಮಿತ್ತ ನಾನು ತಲೆತಗ್ಗಿಸುವಂತೆ ದೇವರು ಮಾಡುತ್ತಾರೋ ಏನೋ, ಎಂಬ ಭಯವೂ ನನಗಿದೆ.


ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನ ಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ.


ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


ಯೇಸು ಅವರಿಗೆ, “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸುವುದೇ ನನಗೇ ಆಹಾರ. ಆತನು ಕೊಟ್ಟ ಕಾರ್ಯಗಳನ್ನು ಪೂರೈಸುವುದೇ ನನಗೆ ತಿಂಡಿತೀರ್ಥ.


ಹೃದಯದಿಂದ ದುರಾಲೋಚನೆ, ಕೊಲೆ, ವ್ಯಭಿಚಾರ, ಅನೈತಿಕತೆ, ಕಳ್ಳತನ, ಸುಳ್ಳುಸಾಕ್ಷಿ, ಅಪದೂರು, ಇವು ಹೊರಬರುತ್ತವೆ.


ಸ್ವರ್ಗದಲ್ಲಿರುವ ನನ್ನ ತಂದೆಯ‍ ಚಿತ್ತವನ್ನು ಯಾರು ನೆರವೇರಿಸುತ್ತಾರೋ ಅವರೇ ನನಗೆ ಸಹೋದರ, ಸಹೋದರಿ ಮತ್ತು ತಾಯಿ,” ಎಂದರು.


ಕ್ರಿಸ್ತಯೇಸುವಿನ ಸೇವಕನೂ ನಿಮ್ಮ ಸಭೆಗೆ ಸೇರಿದವನೂ ಆದ ಎಪಫ್ರನಿಂದಲೂ ನಿಮಗೆ ವಂದನೆಗಳು. ನೀವು ಮಾಡುವ ಎಲ್ಲಾ ಕಾರ್ಯಗಳಲ್ಲೂ ದೇವರ ಚಿತ್ತಕ್ಕೆ ವಿಧೇಯರಾಗಿ ಸ್ಥಿರ ಹಾಗೂ ಸಿದ್ಧ ಕ್ರೈಸ್ತರಾಗಿ ಬಾಳಬೇಕೆಂದು ಅವನು ನಿಮಗಾಗಿ ಸದಾ ಆಸಕ್ತಿಯಿಂದ ಪ್ರಾರ್ಥಿಸುತ್ತಿದ್ದಾನೆ.


ಆದರೆ ನೀವು ಪಾಪದಿಂದ ಬಿಡುಗಡೆ ಹೊಂದಿರುವಿರಿ. ದೇವರಿಗೆ ದಾಸರಾಗಿರುವಿರಿ. ಇದರಿಂದ ನಿಮಗೆ ಸಿಕ್ಕಿರುವ ಪ್ರತಿಫಲ ಪರಿಶುದ್ಧಜೀವನ; ಅಂತಿಮವಾಗಿ ಅಮರ ಜೀವನ.


“ಈಗ ನಿಮ್ಮನ್ನು ದೇವರ ಕೈಗೂ, ಅವರ ಅನುಗ್ರಹ ಸಂದೇಶಕ್ಕೂ ಒಪ್ಪಿಸಿಕೊಡುತ್ತೇನೆ. ಅದು ನಿಮ್ಮನ್ನು ಅಭಿವೃದ್ಧಿಗೊಳಿಸಬಲ್ಲದು. ಮಾತ್ರವಲ್ಲ, ಪಾವನಪುರುಷರ ಬಾಧ್ಯತೆಯಲ್ಲಿ ಭಾಗಿಗಳಾಗುವಂತೆ ಮಾಡಬಲ್ಲದು.


ಅದಕ್ಕೆ ಬದಲಾಗಿ ನಾವು ಅವರಿಗೆ ಪತ್ರ ಬರೆದು, ‘ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು; ಅದನ್ನು ಸೇವಿಸಬಾರದು; ಅನೈತಿಕತೆಯಿಂದ ದೂರವಿರಬೇಕು; ರಕ್ತವನ್ನಾಗಲಿ, ಕುತ್ತಿಗೆ ಹಿಸುಕಿದ ಪ್ರಾಣಿಗಳನ್ನಾಗಲಿ ತಿನ್ನಬಾರದು,’ ಎಂದು ತಿಳುವಳಿಕೆ ಕೊಡಬೇಕು.


ದೇವರ ಚಿತ್ತದಂತೆ ನಡೆಯಲು ಮನಸ್ಸು ಉಳ್ಳವನಿಗೆ, ನಾನು ಬೋಧಿಸುವುದು ದೇವರಿಂದ ಬಂದುದೋ ಅಥವಾ ನನ್ನ ಸ್ವಂತ ಕಲ್ಪನೆಯೋ ಎಂಬುದು ತಿಳಿಯುತ್ತದೆ.


ನಿಮ್ಮಲ್ಲಿ ಯಾರೂ ಕಾಮುಕರಾಗಬಾರದು. ಏಸಾವನಂತೆ ಅಧರ್ಮಿಗಳು ಆಗಬಾರದು. ಆತನು, ಒಪ್ಪೊತ್ತಿನ ಊಟಕ್ಕಾಗಿ ತನ್ನ ಜನ್ಮಸಿದ್ಧವಾದ ಹಕ್ಕನ್ನೇ ಮಾರಿಕೊಂಡನು.


ಸಕಲ ವಿಧವಾದ ಅನ್ಯಾಯ, ಅಕ್ರಮ, ದುರಾಶೆ, ದುರ್ನಡತೆ ಅವರಲ್ಲಿ ತುಂಬಿಕೊಂಡವು. ಮತ್ಸರ, ಕೊಲೆ, ಕಲಹ, ಕಪಟತನ, ಹಗೆತನ, ಇವೆಲ್ಲವೂ ಅವರಲ್ಲಿ ತುಂಬಿಹೋಗಿವೆ.


ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು.


ಆದರೆ ನಾನೀಗ ನಿಮಗೆ ಹೇಳುತ್ತೇನೆ ಕೇಳಿ; ತನ್ನ ಹೆಂಡತಿಯ ದುರ್ನಡತೆಯ ಕಾರಣದಿಂದಲ್ಲದೆ, ಅವಳನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರಿಣಿಯಾಗುವುದಕ್ಕೆ ಕಾರಣನಾಗುತ್ತಾನೆ; ಅಲ್ಲದೆ ಗಂಡಬಿಟ್ಟವಳನ್ನು ಮದುವೆಯಾಗುವವನು ಕೂಡ ವ್ಯಭಿಚಾರಿಯಾಗುತ್ತಾನೆ.”


ಪ್ರಭು ಯೇಸುವಿನ ಅಧಿಕಾರದಿಂದ ನಾವು ನಿಮಗೆ ವಿಧಿಸಿದ ನಿಯಮಗಳನ್ನು ನೀವು ಬಲ್ಲಿರಿ.


ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಂಜೆಯವರೆಗೆ ಅಶುದ್ಧರಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು