Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 4:4 - ಕನ್ನಡ ಸತ್ಯವೇದವು C.L. Bible (BSI)

4 ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಪತ್ನಿಯನ್ನು ಘನತೆ ಗೌರವದಿಂದಲೂ ಶುದ್ಧಮನಸ್ಸಿನಿಂದಲೂ ನಡೆಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4-5 ದೇವರನ್ನರಿಯದ ಅನ್ಯಜನರಂತೆ ಕಾಮಾಭಿಲಾಷೆಗಳಿಗೆ ಒಳಗಾಗದೆ, ನಿಮ್ಮಲ್ಲಿ ಪ್ರತಿಯೊಬ್ಬನು ಪವಿತ್ರವಾದ ಮನಸ್ಸಿನಿಂದಲೂ ಘನತೆಯಿಂದಲೂ ಪತ್ನಿಯನ್ನು ಸಂಪಾದಿಸಿಕೊಳ್ಳಲು ತಿಳಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4-5 ದೇವರನ್ನರಿಯದ ಅನ್ಯಜನಗಳಂತೆ ಕಾಮಾಭಿಲಾಷೆಗೆ ಒಳಪಡದೆ ನಿಮ್ಮಲ್ಲಿ ಪ್ರತಿಯೊಬ್ಬನು ಪವಿತ್ರವಾದ ಮನಸ್ಸಿನಿಂದಲೂ ಘನತೆಯಿಂದಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ಸ್ವಂತ ದೇಹಗಳನ್ನು ಹತೋಟಿಯಲ್ಲಿ ಇಟ್ಟುಕೊಳ್ಳಬೇಕೆಂಬುದು ದೇವರ ಅಪೇಕ್ಷೆ. ನಿಮ್ಮ ದೇಹವನ್ನು ಪವಿತ್ರವಾದ ಮಾರ್ಗದಲ್ಲಿ ಬಳಸಿದರೆ, ದೇವರಿಗೆ ಗೌರವವನ್ನು ನೀಡಿದಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿಮ್ಮಲ್ಲಿ ಪ್ರತಿಯೊಬ್ಬನೂ ಪವಿತ್ರತೆಯಿಂದಲೂ ಘನತೆಯಿಂದಲೂ ತನ್ನ ಸ್ವಂತ ದೇಹವನ್ನು ಕಾಪಾಡಿಕೊಳ್ಳಲು ತಿಳಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತುಮಿ ಹರಿಎಕ್ಲ್ಯಾ ಘೊಮನ್ಸಾನ್, ತುಮ್ಚ್ಯಾ ಸ್ವತಾಚ್ಯಾ ಎಕ್ಲ್ಯಾಕ್ ಬಾಯ್ಕೊಕ್ ವಿಶ್ವಾಸಾನ್ ರ್‍ಹಾವ್ನ್ ಕಶೆ ಪವಿತ್ರ್ ರ್‍ಹಾತಲೆ ಅನಿ ಮರ್‍ಯಾದಿಚ್ಯಾ ವಾಟೆನ್ ಚಲುಚೆ ಮನುನ್ ಶಿಕುಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 4:4
15 ತಿಳಿವುಗಳ ಹೋಲಿಕೆ  

ಅವರಿಗೆ ಸಂಯಮ ಇಲ್ಲದಿದ್ದರೆ ಮದುವೆಮಾಡಿಕೊಳ್ಳಲಿ. ಕಾಮತಾಪದಿಂದ ಬೆಂದುಹೋಗುವುದಕ್ಕಿಂತ ಮದುವೆಮಾಡಿಕೊಳ್ಳುವುದೇ ಲೇಸು.


ಆದುದರಿಂದ ಸಹೋದರರೇ, ದೇವರ ಅಪಾರ ಕೃಪೆಯನ್ನು ನಿಮ್ಮ ನೆನಪಿಗೆ ತಂದು ನಾನು ಬೇಡಿಕೊಳ್ಳುವುದೇನೆಂದರೆ: ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವವಾದ ಬಲಿಯಾಗಿ ಸಮರ್ಪಿಸಿಕೊಳ್ಳಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.


ಅದೇ ಪ್ರಕಾರ ಪುರುಷರೇ, ಸರಿಯಾದ ತಿಳುವಳಿಕೆಯಿಂದ ನಿಮ್ಮ ನಿಮ್ಮ ಪತ್ನಿಯರೊಡನೆ ಸಹಜೀವನ ನಡೆಸಿರಿ. ಅವರು ಅಬಲೆಯರು ಮಾತ್ರವಲ್ಲ, ಸಜ್ಜೀವ ಕೊಡುಗೆಗೆ ನಿಮ್ಮೊಂದಿಗೆ ಸಮಬಾಧ್ಯರು ಎಂದು ತಿಳಿದು ಅವರನ್ನು ಗೌರವಿಸಿರಿ. ಆಗ ನಿಮ್ಮ ಪ್ರಾರ್ಥನೆಗೆ ಅಡಚಣೆ ಉಂಟಾಗದು.


ವಿವಾಹಬಂಧನವನ್ನು ಎಲ್ಲರೂ ಗೌರವಿಸಲಿ; ದಂಪತಿಗಳ ಸಂಬಂಧವು ನಿಷ್ಕಳಂಕವಾಗಿರಲಿ. ಕಾಮುಕರೂ ವ್ಯಭಿಚಾರಿಗಳೂ ದೇವರ ನ್ಯಾಯತೀರ್ಪಿಗೆ ಗುರಿಯಾಗುತ್ತಾರೆ.


ನಿಮ್ಮ ದೇಹಗಳು ಕ್ರಿಸ್ತಯೇಸುವಿನ ಅಂಗಗಳೆಂದು ನಿಮಗೆ ತಿಳಿಯದೇ? ಹಾಗಾದರೆ ನಾನು ಕ್ರಿಸ್ತಯೇಸುವಿನ ಅಂಗಗಳನ್ನು ತೆಗೆದು ವೇಶ್ಯೆಯ ಅಂಗಗಳನ್ನಾಗಿ ಮಾಡಬಹುದೇ? ಎಂದಿಗೂ ಇಲ್ಲ.


ಲೈಂಗಿಕ ಪ್ರಲೋಭನೆಗಳು ಪ್ರಬಲವಾಗಿರುವುದರಿಂದ ಪ್ರತಿಯೊಬ್ಬನಿಗೂ ಸ್ವಂತ ಸತಿ ಇರಲಿ, ಪ್ರತಿಯೊಬ್ಬಳಿಗೂ ಸ್ವಂತ ಪತಿ ಇರಲಿ.


ಕಡೆಯದಾಗಿ ಸಹೋದರರೇ, ಯಾವುದು ಸತ್ಯವು-ಮಾನ್ಯವು, ನ್ಯಾಯವು-ಶುದ್ಧವು, ಪ್ರೀತಿಕರವು-ಮನೋಹರವು ಆಗಿದೆಯೋ ಯಾವುದು ಸದ್ಗುಣವು-ಸ್ತುತ್ಯಾರ್ಹವು ಆಗಿದೆಯೋ ಅಂಥವುಗಳಲ್ಲಿ ಮಗ್ನರಾಗಿರಿ.


ಇದನ್ನು ಅರ್ಥಮಾಡಿಕೊಳ್ಳಲು ನೀವು ಅಶಕ್ತರಾಗಿರುವುದರಿಂದ ನಾನು ಹೀಗೆ ಸಾಮಾನ್ಯ ರೀತಿಯಲ್ಲಿ ಮಾತನಾಡುತ್ತಿದ್ದೇನೆ. ಹಿಂದೊಮ್ಮೆ ನೀವು ನಿಮ್ಮ ಇಂದ್ರಿಯಗಳನ್ನು ಹೆಚ್ಚುಹೆಚ್ಚಾಗಿ ಅಶ್ಲೀಲತೆಗೂ ಅಕ್ರಮಕ್ಕೂ ಗುಲಾಮರನ್ನಾಗಿಸಿದಿರಿ; ಈಗಲಾದರೋ ಪರಿಶುದ್ಧತೆಗೂ ಸತ್ಸಂಬಂಧಕ್ಕೂ ನಿಮ್ಮ ಇಂದ್ರಿಯಗಳನ್ನು ಅಧೀನರಾಗಿಸಿರಿ.


ಆದುದರಿಂದ, ಮಾನವರು ಮನಸ್ಸಿನ ಆಶಾಪಾಶಗಳಿಗೆ ಬಲಿಯಾಗಿ ತಮ್ಮ ದೇಹಗಳಿಂದ ತಮ್ಮತಮ್ಮಲ್ಲೇ ಅಶ್ಲೀಲಕೃತ್ಯಗಳೆಸಗಲೆಂದು ದೇವರು ಅವರನ್ನು ಅಶುದ್ಧ ನಡತೆಗೆ ಬಿಟ್ಟುಬಿಟ್ಟರು.


ಪ್ರಭು ಅವನಿಗೆ, “ನೀನು ಹೋಗು, ನನ್ನ ನಾಮವನ್ನು ಅನ್ಯಧರ್ಮದವರಿಗೂ ಅರಸರಿಗೂ ಇಸ್ರಯೇಲಿನ ಜನರಿಗೂ ಪ್ರಕಟಿಸಲು ನಾನು ಆರಿಸಿಕೊಂಡಿರುವ ಸಾಧನ ಅವನು.


ನಾವು ಇಂಥ ಆಧ್ಯಾತ್ಮಿಕ ಮಾಣಿಕ್ಯವನ್ನು ಪಡೆದಿದ್ದರೂ ಮಣ್ಣಿನ ಮಡಕೆಗಳಂತೆ ಇದ್ದೇವೆ. ಹೀಗೆ, ಈ ಪರಮೋನ್ನತ ಶಕ್ತಿ ನಮಗೆ ಸೇರಿದ್ದಲ್ಲ. ದೇವರಿಗೆ ಸೇರಿದ್ದೆಂದು ವ್ಯಕ್ತವಾಗುತ್ತದೆ.


ದಾವೀದನು, “ನಮ್ಮ ಎಲ್ಲಾ ಯುದ್ಧ ಪ್ರಯಾಣಗಳಲ್ಲಿ ಸ್ತ್ರೀಸಂಗ ನಿಷೇಧಮಾಡುವಂತೆ ಈಗಲೂ ಮಾಡಿದ್ದೇವೆ. ನಾವು ಸಾಧಾರಣ ಕಾರ್ಯಕ್ಕೆ ಹೊರಟಾಗಲೂ ಆಳುಗಳ ಸಾಮಾಗ್ರಿಗಳು ಪರಿಶುದ್ಧವಾಗಿರುತ್ತಿದ್ದವು. ಈ ದಿನವಂತು ಅವು ಮತ್ತಷ್ಟು ಪರಿಶುದ್ಧವಾಗಿ ಇರುತ್ತವಲ್ಲವೇ?’ ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು