Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 4:7 - ಕನ್ನಡ ಸತ್ಯವೇದವು C.L. Bible (BSI)

7 ದೇವರು ನಮ್ಮನ್ನು ಕರೆದಿರುವುದು ಅಶುದ್ಧ ನಡತೆಗಲ್ಲ, ಪರಿಶುದ್ಧ ನಡತೆಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧರಾಗಿರುವುದಕ್ಕೆ ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದೇವರು ನಮ್ಮನ್ನು ಬಂಡತನಕ್ಕೆ ಕರೆಯದೆ ಶುದ್ಧರಾಗಿರುವದಕ್ಕೆ ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರು ನಮ್ಮನ್ನು ಪರಿಶುದ್ಧರಾಗಿ ಜೀವಿಸುವುದಕ್ಕೆ ಕರೆದಿದ್ದಾನೆ. ನಾವು ಪಾಪದಲ್ಲಿ ಜೀವಿಸಲು ಆತನು ಇಷ್ಟಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಪವಿತ್ರ ಜೀವನವನ್ನು ಜೀವಿಸಲು ಕರೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ದೆವಾನ್ ಅಮ್ಕಾ ಪಾಪಾತ್ ಜಿವನ್ ಕರುಕ್ ನ್ಹಯ್, ಪವಿತ್ರಪಾನಾತ್ ಜಿವನ್ ಕರುಕ್ ಬಲ್ವುಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 4:7
18 ತಿಳಿವುಗಳ ಹೋಲಿಕೆ  

ಏಕೆಂದರೆ ನಾನು ನಿಮ್ಮ ದೇವರಾದ ಸರ್ವೇಶ್ವರ; ನೀವು ದೇವಜನರಿಗೆ ತಕ್ಕಂತಿರಬೇಕು. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ನೆಲದ ಮೇಲೆ ಹರಿದಾಡುವ ಯಾವ ಜಂತುವಿನಿಂದಾದರೂ ನೀವು ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.


ಜಗತ್ತು ಸೃಷ್ಟಿಯಾಗುವ ಮೊದಲೇ ದೇವರು ಕ್ರಿಸ್ತಯೇಸುವಿನಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು. ಹೀಗೆ ಅವರ ಸನ್ನಿಧಿಯಲ್ಲಿ ನಾವು ನಿಷ್ಕಳಂಕರೂ ನಿರ್ದೋಷಿಗಳೂ ಆಗಿರಬೇಕೆಂದು ಇಚ್ಛಿಸಿದರು.


“ನಿಮ್ಮ ದೇವರಾದ ಸರ್ವೇಶ್ವರನೆಂಬ ನಾನು ಪರಿಶುದ್ಧ ನಾಗಿರುವಂತೆ ನೀವು ಕೂಡ ಪರಿಶುದ್ಧ ರಾಗಿರಬೇಕು .


ನಾವು ಸ್ವಂತ ಸತ್ಕಾರ್ಯಗಳಿಂದಲ್ಲ, ದೇವರ ಯೋಜನೆ ಹಾಗೂ ಅನುಗ್ರಹಗಳಿಂದಲೇ ಜೀವೋದ್ಧಾರ ವರವನ್ನು ಪಡೆದಿದ್ದೇವೆ; ದೇವರ ಪ್ರಜೆಗಳೆನಿಸಿಕೊಂಡಿದ್ದೇವೆ. ಈ ಅನುಗ್ರಹವನ್ನು ಕ್ರಿಸ್ತಯೇಸುವಿನಲ್ಲಿ ಅನಾದಿಯಿಂದಲೇ ನಮಗೆ ಕೊಡಲಾಯಿತು.


ಮುಖ್ಯವಾಗಿ, ತುಚ್ಛವಾದ ದೈಹಿಕ ವ್ಯಾಮೋಹಗಳಿಗೆ ಬಲಿಯಾಗಿರುವವರನ್ನು ಮತ್ತು ದೇವರ ಅಧಿಕಾರವನ್ನು ತೃಣೀಕರಿಸುವವರನ್ನು ಅವರು ಶಿಕ್ಷಿಸದೆ ಬಿಡುವುದಿಲ್ಲ.


ದೈಹಿಕ ವ್ಯಾಮೋಹದ ದುಷ್ಪರಿಣಾಮಗಳು ತಿಳಿದೇ ಇವೆ: ಹಾದರ, ಅಶುದ್ಧತೆ, ಕಾಮುಕತನ,


ನಮ್ಮ ಬೋಧನೆಯಾದರೋ ದುರುದ್ದೇಶದಿಂದ ಕೂಡಿದುದಲ್ಲ; ಅಶುದ್ಧ ಅಥವಾ ಕಪಟ ಮನಸ್ಸಿನಿಂದ ಮೂಡಿದುದೂ ಅಲ್ಲ.


ಎಲ್ಲರೊಂದಿಗೂ ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ; ಪರಿಶುದ್ಧತೆಯನ್ನು ಅರಸಿರಿ; ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವಂತಿಲ್ಲ.


ಲಜ್ಜೆಗೆಟ್ಟವರಾಗಿ ದುರಿಚ್ಛೆಗಳಿಗೆ ಮಾರುಹೋಗಿದ್ದಾರೆ; ಅಶುದ್ಧ ಕಾರ್ಯಗಳಲ್ಲೇ ನಿರತರಾಗಿದ್ದಾರೆ.


ಪ್ರಭುವಿನ ಸೇವೆಯ ನಿಮಿತ್ತ ಸೆರೆಯಾಳಾಗಿ ಇರುವ ನಾನು ನಿಮ್ಮಲ್ಲಿ ಬಿನ್ನವಿಸುವುದು ಏನೆಂದರೆ: ದೇವರ ಕರೆಗೆ ಅನುಗುಣವಾಗಿ ಯೋಗ್ಯ ಬಾಳುವೆ ನಡೆಸಿರಿ.


ನಾವಾದರೋ ದೇವರ ಕಲಾಕೃತಿಗಳು. ಕ್ರಿಸ್ತಯೇಸುವಿನಲ್ಲಿ ನಾವು ಸತ್ಕಾರ್ಯಗಳನ್ನು ಮಾಡುತ್ತಾ ಬಾಳಬೇಕೆಂದು ತಾವು ಮೊದಲೇ ನಿರ್ಣಯಿಸಿದ್ದಂತೆ ದೇವರು ನಮ್ಮನ್ನು ಸೃಷ್ಟಿಸಿದ್ದಾರೆ.


ಯೇಸುಕ್ರಿಸ್ತರು ನಮಗೂ ಸಮಸ್ತ ದೇವಜನರಿಗೂ ಪ್ರಭುವಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು