Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 4:9 - ಕನ್ನಡ ಸತ್ಯವೇದವು C.L. Bible (BSI)

9 ಸಹೋದರ ಪ್ರೇಮವನ್ನು ಕುರಿತು ನಿಮಗೆ ಬರೆಯುವ ಅವಶ್ಯಕತೆಯಿಲ್ಲ. ನೀವು ಒಬ್ಬರನ್ನೊಬ್ಬರು ಪ್ರೀತಿಸುವುದನ್ನು ದೇವರಿಂದಲೇ ಕಲಿತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸಹೋದರ ಸ್ನೇಹದ ವಿಷಯದಲ್ಲಿ ನಿಮಗೆ ಬರೆಯುವ ಅವಶ್ಯಕತೆಯಿಲ್ಲ, ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಸಹೋದರಸ್ನೇಹ ವಿಷಯದಲ್ಲಿ ನಿಮಗೆ ಬರೆಯುವದು ಅವಶ್ಯವಿಲ್ಲ; ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದು ಸಮಸ್ತ ಮಕೆದೋನ್ಯದಲ್ಲಿರುವ ಸಹೋದರರನ್ನೆಲ್ಲಾ ಪ್ರೀತಿಸುವವರಾಗಿಯೇ ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಕ್ರಿಸ್ತನಲ್ಲಿ ಸಹೋದರ ಸಹೋದರಿಯರನ್ನು ಹೇಗೆ ಪ್ರೀತಿಸಬೇಕೆಂಬುದರ ಬಗ್ಗೆ ನಾವು ನಿಮಗೆ ಬರೆಯುವ ಅವಶ್ಯಕತೆಯಿಲ್ಲ. ಒಬ್ಬರನ್ನೊಬ್ಬರು ಹೇಗೆ ಪ್ರೀತಿಸಬೇಕೆಂಬುದನ್ನು ಈಗಾಗಲೇ ದೇವರು ನಿಮಗೆ ಕಲಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸಹೋದರ ಪ್ರೀತಿಯ ವಿಷಯದಲ್ಲಿ ನಿಮಗೆ ಬರೆಯುವುದು ಅವಶ್ಯವಿಲ್ಲ. ಒಬ್ಬರನ್ನೊಬ್ಬರು ಪ್ರೀತಿಸಬೇಕೆಂದು ನೀವು ದೇವರಿಂದಲೇ ಉಪದೇಶ ಹೊಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತುಮ್ಚ್ಯಾ ವಾಂಗುಡ್ಚ್ಯಾ ಕ್ರಿಸ್ತಾ ವರ್ತಿ ವಿಶ್ವಾಸ್ ಕರಲ್ಲ್ಯಾ ಲೊಕಾಂಚ್ಯಾ ವಾಂಗ್ಡಾ, ತುಮಿ ಕಶೆ ಪ್ರೆಮಾನಿ ರ್‍ಹಾವ್ಚೆ ಮನುನ್ ಮಿಯಾ ತುಮ್ಕಾ ಲಿವ್ತಲಿ ಗರಜ್ ನಾ. ತುಮ್ಚ್ಯಾ ಎವ್ಡ್ಯಾಕ್ ತುಮಿ ಎಕಾಮೆಕಾತ್ನಿ ಕಶೆ ಪ್ರೆಮಾನ್ ರ್‍ಹಾವ್ಚೆ ಮನುನ್ ದೆವಾಕ್ನಾಚ್ ತುಮಿ ಶಿಕ್ಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 4:9
30 ತಿಳಿವುಗಳ ಹೋಲಿಕೆ  

ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು ಎಂಬುದೇ ಮೊತ್ತಮೊದಲಿನಿಂದಲೂ ನೀವು ಕೇಳಿದ ಸಂದೇಶ.


ಸಹೋದರ ಭಾವನೆಯಿಂದ ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿ ಪ್ರೀತಿಸಿರಿ. ಗೌರವ ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.


ನಾವು ದೇವರ ಪುತ್ರ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟು ಅವರು ವಿಧಿಸಿದಂತೆ ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದೇ ದೇವರ ಆಜ್ಞೆ.


ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬುದು ಕ್ರಿಸ್ತಯೇಸು ನಮಗೆ ಮಾಡಿರುವ ಆಜ್ಞೆ.


ಸೋದರ ಪ್ರೀತಿಯಲ್ಲಿ ನೆಲೆಯಾಗಿ ನಿಲ್ಲಿರಿ.


ಸಹೋದರರೇ, ಇದೆಲ್ಲ ನಡೆಯಲಿರುವ ಸಮಯ ಸಂದರ್ಭಗಳನ್ನು ಕುರಿತು ನಿಮಗೆ ಬರೆಯುವ ಅವಶ್ಯಕತೆಯಿಲ್ಲ.


ಭಕ್ತವಿಶ್ವಾಸಿಗಳು ಒಗ್ಗಟ್ಟಿನಿಂದಲೂ ಒಮ್ಮನಸ್ಸಿನಿಂದಲೂ ಬಾಳುತ್ತಿದ್ದರು. ಯಾರೂ ತಮ್ಮ ಸೊತ್ತನ್ನು ತನ್ನದೇ ಎಂದು ಭಾವಿಸದೆ ಹುದುವಾಗಿ ಹಂಚಿಕೊಳ್ಳುತ್ತಿದ್ದರು.


ತನ್ನ ಸಹೋದರನನ್ನು ಪ್ರೀತಿಸುವವನಾದರೋ ಬೆಳಕಿನಲ್ಲಿ ನೆಲೆಗೊಂಡಿರುತ್ತಾನೆ. ಎಡವಿ ಪಾಪದಲ್ಲಿ ಬೀಳಿಸುವಂಥದ್ದೇನೂ ಅವನಲ್ಲಿ ಇರದು.


ಈ ನಿಮ್ಮ ಸದ್ಭಕ್ತಿಗೆ ಸೋದರ ಸ್ನೇಹವನ್ನು, ಸೋದರ ಸ್ನೇಹಕ್ಕೆ ಪ್ರೀತಿಯನ್ನು ಬೆರೆಸಿರಿ.


ಎಲ್ಲಕ್ಕೂ ಮಿಗಿಲಾಗಿ ಒಬ್ಬರನ್ನೊಬ್ಬರು ಯಥಾರ್ಥವಾಗಿ ಪ್ರೀತಿಸಿರಿ. ಏಕೆಂದರೆ, ಪ್ರೀತಿ ಅಸಂಖ್ಯಾತ ಪಾಪಗಳನ್ನು ಅಳಿಸಿಹಾಕುತ್ತದೆ.


ಕಡೆಯದಾಗಿ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ; ಪರಸ್ಪರ ಸಹಾನುಭೂತಿ ಇರಲಿ. ಒಡಹುಟ್ಟಿದವರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ; ದಯೆತೋರುವವರೂ ದೀನಭಾವವುಳ್ಳವರೂ ಆಗಿರಿ.


“ಆ ದಿನಗಳು ಬಂದಮೇಲೆ ನಾನು ಅವರೊಡನೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು : ನನ್ನ ಆಜ್ಞೆಗಳನ್ನು ಅವರ ಹೃದಯದಲ್ಲಿ ನಾಟಿಸುವೆನು; ಅವರ ಮನದಲ್ಲಿ ಬರೆಯುವೆನು.” ಎಂದು ಹೇಳಿದ ನಂತರವೇ,


ಆದರೆ ಪಿತನು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪೋಷಕರಾದ ಪವಿತ್ರಾತ್ಮ ನಿಮಗೆ ಎಲ್ಲವನ್ನೂ ಬೋಧಿಸಿ ನಾನು ಹೇಳಿರುವುದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.


ಸೋದರರು ಒಂದಾಗಿ ಬಾಳ್ವುದು I ಅದೆಷ್ಟು ಚೆನ್ನ, ಅದೆಷ್ಟು ರಮ್ಯ II


ಇದಕ್ಕೆ ಸರಿಹೊಂದುವ ಎರಡನೇ ಆಜ್ಞೆ ಯಾವುದೆಂದರೆ, ‘ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು.’


ಒಬ್ಬನು ತನ್ನ ನೆರೆಹೊರೆಯವರನ್ನು ಕುರಿತು ಅಥವಾ ಅಣ್ಣತಮ್ಮಂದಿರನ್ನು ಕುರಿತು, ‘ಸರ್ವೇಶ್ವರನನ್ನು ಅರಿತುಕೊ’ ಎಂದು ಬೋಧಿಸಬೇಕಾಗಿರುವುದಿಲ್ಲ. ಚಿಕ್ಕವರಿಂದ ಮೊದಲ್ಗೊಂಡು ದೊಡ್ಡವರ ತನಕ ಎಲ್ಲರು ನನ್ನನ್ನು ಅರಿತುಕೊಳ್ಳುವರು. ನಾನು ಅವರ ಅಪರಾಧವನ್ನು ಕ್ಷಮಿಸಿ, ಅವರ ಪಾಪವನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”


ಆಕಾಶವನು ಹರಡಿ ಭೂಮಿಯನು ಸ್ಥಾಪಿಸಿದಾ ನಿನ್ನ ಸೃಷ್ಟಿಕರ್ತ ಸರ್ವೇಶ್ವರನನು ಮರೆತುಬಿಟ್ಟೆಯಾ? ನಾಶಮಾಡಲು ಹವಣಿಸುವ ಹಿಂಸಕನ ಕ್ರೋಧಕೆ ನೀ ಎಡೆಬಿಡದೆ ದಿನವೆಲ್ಲ ಅಂಜುತ್ತಿರಬೇಕೆ? ಆ ಹಿಂಸಕನ ಕ್ರೋಧವು ಈಗ ಹೋದುದೆಲ್ಲಿಗೆ?


ಅದರಲ್ಲಿ ಏನನ್ನಾದರೂ ತಿಂದವನು ಸರ್ವೇಶ್ವರನ ದ್ರವ್ಯವಾದ ಪರಿಶುದ್ಧತೆಯನ್ನು ಹೊಲೆಮಾಡುತ್ತಾನೆ. ಆದುದರಿಂದ ತನ್ನ ಪಾಪದ ಫಲವನ್ನು ಅನುಭವಿಸಲೇಬೇಕು. ಅವನು ಕುಲದಿಂದ ಬಹಿಷ್ಕೃತನಾಗಬೇಕು.


ಸರ್ವೇಶ್ವರನಾದ ನಾನು ಹೇಳುತ್ತೇನೆ ಕೇಳಿ: ಆ ದಿನಗಳು ಬಂದಮೇಲೆ ನಾನು ಇಸ್ರಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು - ನನ್ನ ಧರ್ಮಶಾಸ್ತ್ರವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ದೇವಜನರಿಗೆ ಸಲ್ಲಿಸಬೇಕಾದ ಈ ಸೇವಾಕಾರ್ಯವನ್ನು ಕುರಿತು ನಾನು ನಿಮಗೆ ಬರೆಯುವ ಅವಶ್ಯಕತೆಯಿಲ್ಲ.


ನಮ್ಮಲ್ಲಿ ಪರಿಣತರಾದವರು ಈ ವಿಷಯದಲ್ಲಿ ಇದೇ ಮನೋಭಾವನೆಯಿಂದ ಇರಬೇಕು. ಯಾವುದಾದರೂ ಒಂದು ವಿಷಯದಲ್ಲಿ ನೀವು ಭಿನ್ನಾಭಿಪ್ರಾಯ ಉಳ್ಳವರಾಗಿದ್ದರೆ ದೇವರು ನಿಜಾಂಶವನ್ನು ಸ್ಪಷ್ಟೀಕರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು