Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 5:14 - ಕನ್ನಡ ಸತ್ಯವೇದವು C.L. Bible (BSI)

14 ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ; ಮನಗುಂದಿದವರಿಗೆ ಧೈರ್ಯ ತುಂಬಿರಿ; ದುರ್ಬಲರಿಗೆ ನೆರವಾಗಿರಿ; ಎಲ್ಲರೊಡನೆ ಸಹನೆಯಿಂದಿರಿ. ಇದು ನಮ್ಮ ಪ್ರಬೋಧನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರೊಂದಿಗೆ ದೀರ್ಘಶಾಂತಿಯಿಂದಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸಹೋದರರೇ, ಅಕ್ರಮವಾಗಿ ನಡೆಯುವವರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರಲ್ಲಿಯೂ ದೀರ್ಘಶಾಂತರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸಹೋದರ ಸಹೋದರಿಯರೇ, ಕೆಲಸ ಮಾಡದೆ ಇರುವ ಜನರಿಗೆ ಎಚ್ಚರಿಕೆ ನೀಡಬೇಕೆಂದು ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ. ಹೆದರಿಕೊಂಡಿರುವವರನ್ನು ಪ್ರೋತ್ಸಾಹಿಸಿರಿ; ಬಲಹೀನರಿಗೆ ಸಹಾಯ ಮಾಡಿ; ಎಲ್ಲರ ಜೊತೆಯಲ್ಲಿ ತಾಳ್ಮೆಯಿಂದಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಪ್ರಿಯರೇ, ಶಿಸ್ತು ಇಲ್ಲದವರನ್ನು ಎಚ್ಚರಿಸಿರಿ. ಮನಗುಂದಿದವರನ್ನು ಆದರಿಸಿರಿ. ಬಲಹೀನರಿಗೆ ಆಧಾರವಾಗಿರಿ. ಎಲ್ಲರೊಂದಿಗೂ ತಾಳ್ಮೆಯುಳ್ಳವರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅಮ್ಚ್ಯಾ ಭಾವಾ-ಭೆನಿಯಾನು, ಅಮಿ ತುಮ್ಚ್ಯಾಕ್ಡೆ ಲೈ ಮಾಗ್ತಾಂವ್, ಕಾಮ್ ಕರಿನಸ್ತಾನಾ ರ್‍ಹಾತಲ್ಯಾಕ್ನಿ ಉಶಾರ್ಕಿ ಸಾಂಗಾ, ಭಿಂವ್ಕುರ್ಯ್ಯಾಕ್ನಿ ಧೈರೊ ದಿವಾ, ಬಳನಸಲ್ಯಾಕ್ನಿ ಮಜತ್ ಕರಾ, ಸಗ್ಳ್ಯಾಂಚ್ಯಾ ವಾಂಗ್ಡಾ ಸಮಾದಾನಾನ್ ರ್‍ಹಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 5:14
40 ತಿಳಿವುಗಳ ಹೋಲಿಕೆ  

ನೀನು ದೇವರ ವಾಕ್ಯವನ್ನು ಆಸಕ್ತಿಯಿಂದ ಕಾಲ ಅಕಾಲಗಳನ್ನು ಲೆಕ್ಕಿಸದೆ ಬೋಧಿಸು. ಸತ್ಯವನ್ನು ಮನಗಾಣಿಸು; ತಪ್ಪನ್ನು ತಿದ್ದು; ಒಳ್ಳೆಯದನ್ನು ಪ್ರೋತ್ಸಾಹಿಸು’ ತಾಳ್ಮೆಯನ್ನು ಕಳೆದುಕೊಳ್ಳದೆ ಉಪದೇಶಮಾಡು.


ವಿಶ್ವಾಸದಲ್ಲಿ ಸ್ಥಿರವಿಲ್ಲದವರನ್ನೂ ನಿಮ್ಮ ಸಂಗಡ ಸೇರಿಸಿಕೊಳ್ಳಿರಿ. ಆದರೆ ವೈಯಕ್ತಿಕ ಅಭಿಪ್ರಾಯಗಳ ಬಗ್ಗೆ ವಾಗ್ವಾದ ನಡೆಸಬೇಡಿ.


ಹೀಗೆ ಕಷ್ಟಪಟ್ಟು ದುಡಿದು, ದುರ್ಬಲರಿಗೆ ನೆರವಾಗಬೇಕೆಂದು ನಾನು ನಿಮಗೆ ಹಲವಾರು ವಿಧದಲ್ಲಿ ತೋರಿಸಿಕೊಟ್ಟಿದ್ದೇನೆ. ‘ಕೊಳ್ಳುವ ಕೈಗಿಂತ ಕೊಡುವ ಕೈ ಧನ್ಯವಾದುದು’ ಎಂಬ ಯೇಸುಸ್ವಾಮಿಯ ಮಾತುಗಳನ್ನು ನೆನಪಿನಲ್ಲಿಡಿ.”


ನಾವು ಸಾರುತ್ತಲಿರುವುದೂ ಯೇಸುಕ್ರಿಸ್ತರನ್ನೇ. ಎಲ್ಲರಿಗೂ ಬುದ್ಧಿಹೇಳುತ್ತಾ ಎಲ್ಲರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತಯೇಸುವಿನಲ್ಲಿ ಪರಿಣತರನ್ನಾಗಿ ಊರ್ಜಿತಗೊಳಿಸಲು ಪ್ರಯತ್ನಿಸುತ್ತಿದ್ದೇವೆ.


ಸೆರೆಯಲ್ಲಿರುವವರನ್ನು ಸ್ಮರಿಸಿಕೊಳ್ಳಿ. ಅವರ ಸಂಗಡ ನೀವೂ ಸೆರೆಯಲ್ಲಿರುವಂತೆ ಭಾವಿಸಿಕೊಳ್ಳಿ. ಅನ್ಯಾಯಕ್ಕೆ ಒಳಗಾಗಿರುವವರನ್ನು ಜ್ಞಾಪಕದಲ್ಲಿಟ್ಟುಕೊಳ್ಳಿ. ಅನ್ಯಾಯಕ್ಕೆ ಒಳಗಾಗಬಲ್ಲ ದೇಹವೊಂದು ನಿಮಗೂ ಸಹ ಇದೆಯಲ್ಲವೇ?


ದೇವರ ಭಕ್ತನಾದ ನೀನು ಈ ಎಲ್ಲಾ ಕೇಡುಗಳಿಂದ ದೂರವಿರು. ದೇವರೊಡನೆ ಸತ್ಸಂಬಂಧ, ಭಕ್ತಿ, ವಿಶ್ವಾಸ, ಪ್ರೀತಿ, ಸ್ಥಿರಚಿತ್ತ, ಸಾತ್ವಿಕತೆ - ಇವೇ ಮೊದಲಾದ ಸದ್ಗುಣಗಳನ್ನು ಸಂಪಾದಿಸಲು ಪ್ರಯತ್ನಿಸು.


ಯಾವಾಗಲೂ ದೀನದಯಾಳತೆ, ವಿನಯಶೀಲತೆ ಹಾಗೂ ಶಾಂತಿಸಮಾಧಾನವುಳ್ಳವರಾಗಿರಿ. ಪರಸ್ಪರ ಪ್ರೀತಿಯಿಂದಲೂ ಸಹನೆಯಿಂದಲೂ ವರ್ತಿಸಿರಿ.


ನಿಮ್ಮನ್ನು ನಾಚಿಕೆಪಡಿಸುವುದಕ್ಕೆ ಇದನ್ನು ಬರೆಯಲಿಲ್ಲ. ನಮ್ಮ ನೆಚ್ಚಿನ ಮಕ್ಕಳಾದ ನಿಮ್ಮನ್ನು ಎಚ್ಚರಿಸಲೆಂದು ಬರೆದೆನು.


“ತಪ್ಪಿಸಿಕೊಂಡಿದ್ದನ್ನು ಹುಡುಕುವೆನು, ದಾರಿತಪ್ಪಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದುದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿನ ಕುರಿಗಳನ್ನಾದರೋ ಧ್ವಂಸಮಾಡುವೆನು; ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”


ಆತ ಮೇಯಿಸುವನು ತನ್ನ ಮಂದೆಯನ್ನು ಕುರುಬನ ಹಾಗೆ ಮರಿಗಳನ್ನು ಕೈಗೆ ಎತ್ತಿಕೊಳ್ಳುವನು, ಅಪ್ಪಿಕೊಳ್ಳುವನು ಎದೆಗೆ ನಡೆಸುವನು ಹಾಲೂಡಿಸುವ ಕುರಿಗಳನ್ನು ಮೆಲ್ಲಗೆ.


ಆದುದರಿಂದ ಎಚ್ಚರಿಕೆ! ನಾನು ಮೂರು ವರ್ಷಗಳ ಕಾಲ ಹಗಲಿರುಳು ಕಣ್ಣೀರಿಡುತ್ತಾ ಪ್ರತಿಯೊಬ್ಬನಿಗೂ ಬುದ್ಧಿ ಹೇಳಿದ್ದೇನೆಂಬುದನ್ನು ಮರೆಯಬೇಡಿ.


ಮುರಿದ ಜೊಂಡಿನಂತಹ ದುರ್ಬಲರಿಗೀತ ದೀನಬಂಧು ನಂದಿಹೋಗುತಿಹ ದೀನದಲಿತರಿಗೆ ಕೃಪಾಸಿಂಧು ನ್ಯಾಯನೀತಿಗೆ ಜಯ ದೊರಕಿಸದೆ ಬಿಡನಿವನು.


ಆ ಜನರ ಕಷ್ಟದುಃಖಗಳಲ್ಲಿ ಸಂರಕ್ಷಿಸಿದರು. ದಯೆಯಿಂದಲೂ ಪ್ರೀತಿಯಿಂದಲೂ ಅವರಿಗೆ ಬಿಡುಗಡೆ ನೀಡಿದರು. ಪುರಾತನ ಕಾಲದಲ್ಲೆಲ್ಲಾ ಅವರನ್ನು ಎತ್ತಿ ಹೊತ್ತು ಆದರಿಸಿದರು.


ಆದ್ದರಿಂದ, ಜೋತುಬೀಳುವ ನಿಮ್ಮ ಕೈಗಳನ್ನು ಮೇಲೆತ್ತಿ, ಕುಸಿದುಬೀಳುವ ನಿಮ್ಮ ಮೊಣಕಾಲುಗಳನ್ನು ಚೇತರಿಸಿಕೊಳ್ಳಿ.


ನಾನು ಕೊಟ್ಟ ಸಲಹೆಗಳನ್ನು ಜ್ಞಾಪಿಸಿಕೋ; ಸಭಾಹಿರಿಯನು ನಿಂದಾರಹಿತನೂ ಏಕಪತ್ನಿ ವ್ರತಸ್ಥನೂ ಆಗಿರಬೇಕು. ಆತನ ಮಕ್ಕಳು ವಿಶ್ವಾಸಿಗಳಾಗಿರಬೇಕು. ಅವರು ಸ್ವೇಚ್ಛಾಚಾರಿಗಳಾಗಿರಬಾರದು, ಅವಿಧೇಯರಾಗಿರಬಾರದು.


ಅವನು ಕುಡುಕನು, ಕಲಹಪ್ರಿಯನು ಮತ್ತು ಹೊಡೆದಾಡುವವನು ಆಗಿರಬಾರದು. ಶಾಂತನೂ ದಯಾವಂತನೂ ಹಣದ ವ್ಯಾಮೋಹ ಇಲ್ಲದವನೂ ಆಗಿರಬೇಕು.


ಪರಸ್ಪರ ಕರುಣೆಯಿಂದಲೂ ಕನಿಕರದಿಂದಲೂ ವರ್ತಿಸಿರಿ. ಯೇಸುಕ್ರಿಸ್ತರಲ್ಲಿ ದೇವರು ನಿಮ್ಮನ್ನು ಕ್ಷಮಿಸಿದಂತೆಯೇ, ನೀವು ಸಹ ಒಬ್ಬರನ್ನೊಬ್ಬರು ಕ್ಷಮಿಸಿರಿ.


ಪವಿತ್ರಾತ್ಮದತ್ತವಾದ ಸತ್ಫಲಗಳು ಯಾವುವೆಂದರೆ: ಪ್ರೀತಿ, ಆನಂದ, ಶಾಂತಿಸಮಾಧಾನ, ಸಹನೆ, ದಯೆ, ಸದ್ಗುಣ, ಪ್ರಾಮಾಣಿಕತೆ, ಸೌಭಾಗ್ಯ, ಸಂಯಮ - ಇಂಥವುಗಳೇ.


ಆದುದರಿಂದ ಸಹೋದರರೇ, ದೇವರ ಅಪಾರ ಕೃಪೆಯನ್ನು ನಿಮ್ಮ ನೆನಪಿಗೆ ತಂದು ನಾನು ಬೇಡಿಕೊಳ್ಳುವುದೇನೆಂದರೆ: ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವವಾದ ಬಲಿಯಾಗಿ ಸಮರ್ಪಿಸಿಕೊಳ್ಳಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.


ಏಕೆಂದರೆ, ದೈವಯೋಜನೆಯನ್ನು ಕಿಂಚಿತ್ತೂ ಮರೆಮಾಚದೆ ತಿಳಿಯಪಡಿಸಿದ್ದೇನೆ.


ಆದರೆ, ನಾನು ನಿನ್ನ ವಿಶ್ವಾಸವು ಕುಂದದಂತೆ ನಿನಗಾಗಿ ಪ್ರಾರ್ಥನೆ ಮಾಡಿದ್ದೇನೆ. ನೀನು ಪರಿವರ್ತನೆ ಹೊಂದಿದ ನಂತರ ನಿನ್ನ ಸಹೋದರರನ್ನು ದೃಢಪಡಿಸು,” ಎಂದರು.


ಅವರ ಹೆಂಡತಿ, ಮನೆ, ಹೊಲ, ಗದ್ದೆ ಎಲ್ಲವೂ ಅನ್ಯರ ಪಾಲಾಗುವುದು.” “ನಾಡಿನ ನಿವಾಸಿಗಳ ಮೇಲೆ ಕೈಮಾಡುವೆನೆಂಬುದು ಖಚಿತ. ಇದು ಸರ್ವೇಶ್ವರನಾದ ನನ್ನ ನುಡಿ.


ಇತ್ತೀಚೆಗೆ ಅವಿಧೇಯರು, ಜೊಳ್ಳು ಮಾತಿನವರು ಹಾಗೂ ವಂಚಕಬೋಧಕರು ತಲೆ ಎತ್ತಿದ್ದಾರೆ. ಅವರಲ್ಲಿ ಕ್ರೈಸ್ತರಾಗಿರುವ ಯೆಹೂದ್ಯರು ಸಾಕಷ್ಟು ಮಂದಿ ಇದ್ದಾರೆ.


ಆದರೆ ಎಲ್ಲರಿಗೂ ಇದರ ಅರಿವಿಲ್ಲ. ಕೆಲವರು ಸಾಂಪ್ರದಾಯಕವಾಗಿ ಬಂದ ವಿಗ್ರಹಾರಾಧನೆಯಲ್ಲಿ ಭಾಗವಹಿಸಿ, ವಿಗ್ರಹಕ್ಕೆ ಅರ್ಪಿತವಾದ ನೈವೇದ್ಯಪದಾರ್ಥವನ್ನು ತಿನ್ನುತ್ತಾರೆ. ಆದರೆ ಅವರ ಮನಸ್ಸಾಕ್ಷಿ ದುರ್ಬಲವಾಗಿರುವುದರಿಂದ ತಾವು ಕಲುಷಿತರಾದೆವೆಂದು ಭಾವಿಸಿಕೊಳ್ಳುತ್ತಾರೆ.


ಆದರೂ ಅವನನ್ನು ಶತ್ರುವೆಂದು ಭಾವಿಸದೆ, ಸಹೋದರನಂತೆ ಕಂಡು, ಬುದ್ಧಿಹೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು