Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 5:18 - ಕನ್ನಡ ಸತ್ಯವೇದವು C.L. Bible (BSI)

18 ಎಲ್ಲಾ ಸಂದರ್ಭಗಳಲ್ಲೂ ಉಪಕಾರಸ್ಮರಣೆಮಾಡಿರಿ. ಕ್ರಿಸ್ತಯೇಸುವಿನಲ್ಲಿ ದೇವರು ನಿಮ್ಮಿಂದ ಇಚ್ಛಿಸುವುದು ಇದನ್ನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಚಿತ್ತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ; ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿ ಬಂದ ದೇವರ ಚಿತ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದೇವರಿಗೆ ಎಲ್ಲಾ ಕಾಲದಲ್ಲಿಯೂ ಕೃತಜ್ಞತೆಗಳನ್ನು ಸಲ್ಲಿಸಿರಿ. ಇದುವೇ ನಿಮ್ಮ ವಿಷಯವಾಗಿ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಚಿತ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಎಲ್ಲವುಗಳಿಗಾಗಿ ಕೃತಜ್ಞತೆ ಸಲ್ಲಿಸಿರಿ. ಏಕೆಂದರೆ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಸಗ್ಳ್ಯಾ ಎಳಾರ್ ದೆವಾಕ್ ಧನ್ಯವಾದ್ ದಿವಾ, ಕ್ರಿಸ್ತಾ ಜೆಜುಚ್ಯಾ ಎಕ್‍ವಟ್ಟಾನ್ ತುಮ್ಚ್ಯಾ ಜಿವನಾತ್ ಹೆ ಸಗ್ಳೆಚ್ ಹೊವ್ಕ್ ಪಾಜೆ ಮನ್ತಲಿ ದೆವಾಚಿ ಇಚ್ಛ್ಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 5:18
11 ತಿಳಿವುಗಳ ಹೋಲಿಕೆ  

ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ಯಾವಾಗಲೂ ಎಲ್ಲ ವರಗಳಿಗಾಗಿಯೂ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.


ನುಡಿಯಲ್ಲಾಗಲೀ ನಡೆಯಲ್ಲಾಗಲೀ ನೀವು ಏನು ಮಾಡಿದರೂ ಯೇಸುಸ್ವಾಮಿಯ ಹೆಸರಿನಲ್ಲಿಯೇ ಮಾಡಿರಿ. ಅವರ ಮುಖಾಂತರವೇ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


ಆದ್ದರಿಂದ, ಪ್ರಭುವಾದ ಯೇಸುಕ್ರಿಸ್ತರನ್ನು ಮುಕ್ತಕಂಠದಿಂದ ಗುಣಗಾನಮಾಡುತ್ತಾ ಅವರ ಮುಖಾಂತರ ಸ್ತುತಿಯೆಂಬ ಬಲಿಯನ್ನು ದೇವರಿಗೆ ಸತತವಾಗಿ ಸಮರ್ಪಿಸೋಣ.


ಉಳಿದಿರುವ ತನ್ನ ಜೀವಮಾನ ಕಾಲವನ್ನು ಲೌಕಿಕ ವ್ಯಾಮೋಹಗಳಲ್ಲಿ ಕಳೆಯದೆ ದೇವರ ಚಿತ್ತಕ್ಕನುಸಾರ ಕಳೆಯುತ್ತಾನೆ.


ಬರಿಗೈಯಲ್ಲಿ ಬಂದೆ ನಾನು ತಾಯಗರ್ಭದಿಂದ ಬರಿಗೈಯಲ್ಲಿ ಹಿಂತಿರುಗುವೆ ನಾನು ಇಲ್ಲಿಂದ ಸರ್ವೇಶ್ವರ ಕೊಟ್ಟ ಸರ್ವೇಶ್ವರ ತೆಗೆದುಕೊಂಡ ಆತನ ನಾಮಕ್ಕೆ ಸ್ತುತಿಸ್ತೋತ್ರ! ಎಂದನು.


ಪ್ರಭುವನು ನಾ ಕೊಂಡಾಡುವೆ ಎಲ್ಲ ಕಾಲದೊಳು I ಆತನ ಸ್ತುತಿ ಸದಾ ಇಹುದು ನನ್ನ ಬಾಯೊಳು II


ನಿಮ್ಮ ಒಳ್ಳೆಯ ನಡತೆಯಿಂದ, ಅರಿವಿಲ್ಲದೆ ಮಾತನಾಡುವ ಮೂಢಜನರ ಬಾಯನ್ನು ಮುಚ್ಚಿಸಬೇಕೆಂಬುದೇ ದೇವರ ಇಚ್ಛೆ.


ಲೋಕವೂ ಅದರ ವ್ಯಾಮೋಹವೂ ಗತಿಸಿಹೋಗುವುವು. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಚಿರಂಜೀವಿಯಾಗಿ ಬಾಳುವನು.


ನೀವು ಕೆಟ್ಟ ನಡತೆಯನ್ನು ಬಿಟ್ಟು ಪರಿಶುದ್ಧರಾಗಿ ಜೀವಿಸಬೇಕು ಎಂಬುದು ದೇವರ ಚಿತ್ತ.


ಶಾಸನಕ್ಕೆ ರುಜುವಾದ ವಿಷಯ ದಾನಿಯೇಲನಿಗೆ ತಿಳಿಯಿತು. ಆತ ತನ್ನ ಮನೆಗೆ ಹೊರಟುಹೋದನು. ಅಲ್ಲಿ ತನ್ನ ಮಹಡಿಯ ಕೊಠಡಿಯಲ್ಲಿನ ಕಿಟಕಿಗಳು ಜೆರುಸಲೇಮಿನ ಕಡೆಗೆ ತೆರೆದಿದ್ದವು. ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಅಲ್ಲಿ ತನ್ನ ದೇವರಿಗೆ ಮೊಣಕಾಲೂರಿ ಪ್ರಾರ್ಥಿಸಿ ಸ್ತೋತ್ರ ಸಲ್ಲಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು