Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 5:5 - ಕನ್ನಡ ಸತ್ಯವೇದವು C.L. Bible (BSI)

5 ನೀವೆಲ್ಲರೂ ಬೆಳಕಿನ ಹಾಗೂ ಹಗಲಿನ ಮಕ್ಕಳು. ನಾವು ಕತ್ತಲೆಗಾಗಲಿ, ರಾತ್ರಿಗಾಗಲಿ ಸೇರಿದವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವೆಲ್ಲರೂ ‘ಬೆಳಕಿನ ಮಕ್ಕಳು’ ಹಾಗೂ ‘ಹಗಲಿನ ಮಕ್ಕಳು’ ಆಗಿದ್ದೀರಷ್ಟೆ, ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವೆಲ್ಲರು ಬೆಳಕಿನವರೂ ಹಗಲಿನವರೂ ಆಗಿದ್ದೀರಷ್ಟೆ; ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀವೆಲ್ಲರೂ ಬೆಳಕಿಗೆ ಸೇರಿದವರು ಮತ್ತು ಹಗಲಿಗೆ ಸೇರಿದವರು. ನಾವು ರಾತ್ರಿಗಾಗಲಿ ಅಥವಾ ಕತ್ತಲೆಗಾಗಲಿ ಸೇರಿದವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಿ. ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತುಮಿ ಸಗ್ಳೆ ಉಜ್ವೊಡಾಕ್ ಅನಿ ದಿಸಾಕ್ ಸಮಂದ್ ಪಡಲ್ಲಿ ಲೊಕಾ, ಅಮಿ ರಾತ್ತಿಕ್ ನಾಹೊಲ್ಯಾರ್ ಕಾಳ್ಕಾಕ್ ಸಮಂದ್ ಪಡಲ್ಲಿ ಲೊಕಾ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 5:5
7 ತಿಳಿವುಗಳ ಹೋಲಿಕೆ  

ನೀವು ಹಿಂದೊಮ್ಮೆ ಕತ್ತಲುಮಯವಾಗಿದ್ದಿರಿ. ಈಗಲಾದರೋ ಪ್ರಭುವಿನಲ್ಲಿ ಬೆಳಕಾಗಿದ್ದೀರಿ. ಆದ್ದರಿಂದ ಬೆಳಕಿನ ಮಕ್ಕಳಾಗಿ ಬಾಳಿರಿ.


ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


ನಿಮ್ಮೊಡನೆ ಇನ್ನೂ ಜ್ಯೋತಿ ಇರುವುದರಿಂದ ಆ ಜ್ಯೋತಿಯಲ್ಲಿ ನಂಬಿಕೆಯಿಡಿ. ಆಗ ನೀವು ಜ್ಯೋತಿಯ ಮಕ್ಕಳು ಆಗುವಿರಿ,” ಎಂದರು. ಇದನ್ನು ಕೇಳಿದ ತರುವಾಯ ಯೇಸು ಅಲ್ಲಿಂದ ಹೊರಟು ಜನರ ಕಣ್ಣಿಗೆ ಬೀಳದಂತೆ ಮರೆಯಾದರು.


“ಈ ಅಪ್ರಾಮಾಣಿಕ ಮೇಸ್ತ್ರಿ ಮಾಡಿದ ಮುಂದಾಲೋಚನೆಯನ್ನು ಅವನ ಯಜಮಾನ ಪ್ರಶಂಶಿಸಿದ. ಏಕೆಂದರೆ, ತಮ್ಮ ತಮ್ಮ ವ್ಯವಹಾರಗಳಲ್ಲಿ ಲೌಕಿಕ ಜನರು ಬೆಳಕಿನ ರಾಜ್ಯದ ಜನರಿಗಿಂತ ಜಾಣರು.


ನಾವು ಹಗಲಿಗೆ ಸೇರಿದವರಾದುದರಿಂದ ಸ್ವಸ್ಥಚಿತ್ತದಿಂದ ಇರೋಣ. ವಿಶ್ವಾಸ ಹಾಗೂ ಪ್ರೀತಿ ನಮಗೆ ವಕ್ಷಕವಚವಾಗಬೇಕು. ಜೀವೋದ್ಧಾರದ ನಿರೀಕ್ಷೆ ನಮಗೆ ಶಿರಸ್ತ್ರಾಣವಾಗಿರಬೇಕು.


ಆದರೂ ನಾನೀಗ ನಿಮಗೆ ಬರೆಯುತ್ತಿರುವುದು ಒಂದು ವಿಧದಲ್ಲಿ ಹೊಸ ಆಜ್ಞೆಯೇ ಸರಿ. ಅದರ ನೈಜಗುಣವು ಕ್ರಿಸ್ತಯೇಸುವಿನಲ್ಲಿ ಬೆಳಗಿದಂತೆ, ನಿಮ್ಮ ಜೀವನದಲ್ಲೂ ಬೆಳಗುತ್ತದೆ. ಏಕೆಂದರೆ, ಕತ್ತಲು ಕಳೆದುಹೋಗುತ್ತಿದೆ; ನಿಜವಾದ ಬೆಳಕು ಈಗಾಗಲೇ ಪ್ರಕಾಶಿಸುತ್ತಿದೆ.


ಉಷ್ಟ್ರಪಕ್ಷಿ, ಉಲೂಕ, ಕಡಲ ಹಕ್ಕಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು