Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 5:8 - ಕನ್ನಡ ಸತ್ಯವೇದವು C.L. Bible (BSI)

8 ನಾವು ಹಗಲಿಗೆ ಸೇರಿದವರಾದುದರಿಂದ ಸ್ವಸ್ಥಚಿತ್ತದಿಂದ ಇರೋಣ. ವಿಶ್ವಾಸ ಹಾಗೂ ಪ್ರೀತಿ ನಮಗೆ ವಕ್ಷಕವಚವಾಗಬೇಕು. ಜೀವೋದ್ಧಾರದ ನಿರೀಕ್ಷೆ ನಮಗೆ ಶಿರಸ್ತ್ರಾಣವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾವಾದರೋ ಹಗಲಿನವರಾಗಿರಲಾಗಿ ನಂಬಿಕೆ ಪ್ರೀತಿಗಳೆಂಬ ಎದೆಕವಚವನ್ನೂ, ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸಪ್ರೀತಿಗಳೆಂಬ ವಜ್ರಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ನಾವು ಹಗಲಿಗೆ ಸೇರಿದವರಾದ್ದರಿಂದ ನಮ್ಮನ್ನು ಹತೋಟಿಯಲ್ಲಿ ಇಟ್ಟುಕೊಳ್ಳಬೇಕು. ನಾವು ನಮ್ಮನ್ನು ರಕ್ಷಿಸಿಕೊಳ್ಳುವುದಕ್ಕಾಗಿ ಪ್ರೀತಿಯನ್ನೂ ನಂಬಿಕೆಯನ್ನೂ ಧರಿಸಿಕೊಳ್ಳಬೇಕು. ರಕ್ಷಣೆಯ ನಿರೀಕ್ಷೆಯು ನಮಗೆ ಶಿರಸ್ತ್ರಾಣವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾವಾದರೋ ಹಗಲಿಗೆ ಸೇರಿದವರಾಗಿ ಇರುವುದರಿಂದ ನಂಬಿಕೆ ಹಾಗೂ ಪ್ರೀತಿಯನ್ನು ಕವಚವನ್ನಾಗಿಯೂ ರಕ್ಷಣೆಯ ನಿರೀಕ್ಷೆಯನ್ನು ಶಿರಸ್ತ್ರಾಣವನ್ನಾಗಿಯೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಖರೆ ಅಮಿ ದಿಸಾಕ್ ಸಮಂದ್ ಪಡಲ್ಲಿ ಲೊಕಾ ಅನಿ ಅಮಿ ಕನ್ನಾಬಿ ತಯಾರಿತ್ ರ್‍ಹಾವ್ಚೆ. ಅಮಿ ವಿಶ್ವಾಸ್ ಅನಿ ಪ್ರೆಮ್ ಹಿರ್ದ್ಯಾಚೆ ಕವಚ್ ಕರುನ್ ಘೆವ್ನ್ ನೆಸುಚೆ ಅನಿ ಅಮ್ಚ್ಯಾ ಸುಟ್ಕೆಚೊ ಬರೊಸೊ ಅಮ್ಚ್ಯಾ ಟಕ್ಲ್ಯಾಚೆ ಕವಚ್ ಕರುನ್ ಘೆವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 5:8
25 ತಿಳಿವುಗಳ ಹೋಲಿಕೆ  

ಆದ್ದರಿಂದ ನೀವು ಸ್ವಸ್ಥಚಿತ್ತರಾಗಿರಿ. ನಿಮ್ಮ ಮನಸ್ಸು ಕಾರ್ಯೋನ್ಮುಖವಾಗಿರಲಿ. ಯೇಸುಕ್ರಿಸ್ತರು ಪ್ರತ್ಯಕ್ಷವಾಗುವಾಗ ನಿಮಗೆ ಲಭಿಸಲಿರುವ ಸೌಭಾಗ್ಯದಲ್ಲಿ ಪೂರ್ಣ ನಿರೀಕ್ಷೆ ಉಳ್ಳವರಾಗಿರಿ.


ಸೈತಾನನು ನಿಮಗೆ ಒಡ್ಡುವ ಕುತಂತ್ರಗಳ ವಿರುದ್ಧ ಅಚಲರಾಗಿ ನಿಲ್ಲಲು ನೀವು ಸಮರ್ಥರಾಗುವಂತೆ ದೇವರು ನೀಡುವ ಸಕಲ ಶಸ್ತ್ರಾಸ್ತ್ರಗಳನ್ನು ಧರಿಸಿಕೊಳ್ಳಿರಿ.


ಅವರು ನ್ಯಾಯನೀತಿಯನ್ನು ವಜ್ರಕವಚವನ್ನಾಗಿ ತೊಟ್ಟುಕೊಳ್ಳುವರು. ರಕ್ಷಣೆ ಎಂಬ ಶಿರಸ್ತ್ರಾಣವನ್ನು ಧರಿಸಕೊಳ್ಳುವರು. ಪ್ರತೀಕಾರವೆಂಬ ಉಡುಪನ್ನು ಉಟ್ಟುಕೊಳ್ಳುವರು. ಆಗ್ರಹ ಎಂಬ ನಿಲುವಂಗಿಯನ್ನು ಹಾಕಿಕೊಳ್ಳುವರು.


ಈ ನಂಬಿಕೆ, ನಿರೀಕ್ಷೆ, ನಮ್ಮ ಬಾಳನೌಕೆಯ ಸ್ಥಿರವಾದ ಹಾಗೂ ಸುರಕ್ಷಿತವಾದ ಲಂಗರಿನಂತಿದೆ. ಇದು ತೆರೆಯ ಹಿಂದಿರುವ ಸ್ವರ್ಗೀಯ ಗರ್ಭಗುಡಿಯನ್ನು ಪ್ರವೇಶಿಸುವಂಥದ್ದು.


ನಿಲ್ಲುವುವು ನಂಬಿಕೆ, ನಿರೀಕ್ಷೆ, ಪ್ರೀತಿ ನೆಲೆಯಾಗಿ; ಈ ಮೂರಲಿ ಪ್ರೀತಿಯೇ ಪರಮೋನ್ನತವೆಂಬುದ ನೀನರಿ.


ನೀವೆಲ್ಲರೂ ಬೆಳಕಿನ ಹಾಗೂ ಹಗಲಿನ ಮಕ್ಕಳು. ನಾವು ಕತ್ತಲೆಗಾಗಲಿ, ರಾತ್ರಿಗಾಗಲಿ ಸೇರಿದವರಲ್ಲ.


ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ಸತ್ಯೋಕ್ತಿ, ದೈವಶಕ್ತಿ, ಇವುಗಳಿಂದಲೂ ನಾವು ದೇವರ ದಾಸರೆಂದು ತೋರ್ಪಡಿಸುತ್ತೇವೆ. ರಕ್ಷಿಸಲೂ ಎದುರಿಸಲೂ ಧರ್ಮವೆಂಬ ಆಯುಧವನ್ನು ಕೈಯಲ್ಲಿ ಹಿಡಿದಿದ್ದೇವೆ.


ಸರ್ವೇಶ್ವರನು ನಮ್ಮನ್ನು ಉದ್ಧರಿಸುವನೆಂದು ಎದುರುನೋಡುತ್ತಾ ತಾಳ್ಮೆಯಿಂದಿರುವುದು ಒಳಿತು.


ಪಿತನಾದ ದೇವರೂ ಪ್ರಭುವಾದ ಯೇಸುಕ್ರಿಸ್ತರೂ ಸಹೋದರರಿಗೆ ಶಾಂತಿಸಮಾಧಾನವನ್ನು ಮತ್ತು ಪ್ರೀತಿವಿಶ್ವಾಸವನ್ನು ದಯಪಾಲಿಸಲಿ.


ನಾವಾದರೋ ಪವಿತ್ರಾತ್ಮರ ಮುಖಾಂತರ ವಿಶ್ವಾಸದಿಂದ ದೇವರೊಂದಿಗೆ ಸತ್ಸಂಬಂಧವನ್ನು ಹೊಂದುತ್ತೇವೆಂಬ ನಿರೀಕ್ಷೆ ಉಳ್ಳವರಾಗಿದ್ದೇವೆ; ಈ ನಿರೀಕ್ಷೆ ಸಫಲವಾಗುವುದನ್ನು ಎದುರುನೋಡುತ್ತಿದ್ದೇವೆ.


ಎನ್ನ ಮನವೆ, ಚಿಂತಿಸುವೆಯೇಕೆ? ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ ಪರಮಾತ್ಮ ಆತನೆನಗೆ II


ಎನ್ನ ಮನವೆ, ಚಿಂತಿಸುವೆಯೇಕೆ? ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II


ಎನ್ನ ಮನವೆ, ಚಿಂತಿಸುವೆಯೇಕೆ? I ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II


ನಮ್ಮನ್ನು ಪ್ರೀತಿಸಿ ನಿತ್ಯಾದರಣೆಯನ್ನೂ ಉತ್ತಮ ನಿರೀಕ್ಷೆಯನ್ನೂ ಅನುಗ್ರಹವಾಗಿ ಕೊಟ್ಟಿರುವ ನಮ್ಮ ಪ್ರಭುವಾದ ಯೇಸುಕ್ರಿಸ್ತರು ಹಾಗೂ ಪಿತನಾದ ದೇವರು ನಿಮ್ಮ ಹೃನ್ಮನಗಳನ್ನು ಉತ್ತೇಜನಗೊಳಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು