Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 1:32 - ಕನ್ನಡ ಸತ್ಯವೇದವು C.L. Bible (BSI)

32 ಅಬ್ರಹಾಮನಿಗೆ ಕೆಟೂರಳೆಂಬ ಉಪಪತ್ನಿ ಇದ್ದಳು. ಇವಳಿಂದ ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಎಂಬ ಆರು ಜನ ಮಕ್ಕಳು ಜನಿಸಿದರು. ಯೊಕ್ಷಾನ್‍ನಿಗೆ ಶೆಬಾ ಮತ್ತು ದೆದಾನ್ ಎಂಬಿಬ್ಬರು ಮಕ್ಕಳು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅಬ್ರಹಾಮನ ಉಪಪತ್ನಿಯಾದ ಕೆಟೂರಳ ಸಂತಾನದವರು: ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್ ಮತ್ತು ಶೂಹ ಎಂಬವರು. ಯೊಕ್ಷಾನನು ಶೆಬಾ ಮತ್ತು ದೆದಾನ್ ಎಂಬವರನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅಬ್ರಹಾಮನ ಉಪಪತ್ನಿಯಾದ ಕೆಟೂರಳ ಸಂತಾನದವರು - ಜಿಮ್ರಾನ್, ಯೊಕ್ಷಾನ್, ಮೆದಾನ್, ವಿುದ್ಯಾನ್, ಇಷ್ಬಾಕ್, ಶೂಹ ಎಂಬವರು. ಯೊಕ್ಷಾನನು, ಶೆಬ, ದೆದಾನ್ ಎಂಬವರನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಕೆಟೂರಳು ಅಬ್ರಹಾಮನ ದಾಸಿಯಾಗಿದ್ದಳು. ಆಕೆಗೆ ಅಬ್ರಹಾಮನಲ್ಲಿ ಹುಟ್ಟಿದ ಗಂಡುಮಕ್ಕಳು ಯಾರೆಂದರೆ: ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್ ಮತ್ತು ಶೂಹ. ಯೊಕ್ಷಾನನ ಮಕ್ಕಳು ಯಾರೆಂದರೆ: ಶೆಬ ಮತ್ತು ದೆದಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅಬ್ರಹಾಮನಿಗೆ ಕೆಟೂರಳೆಂಬ ಉಪಪತ್ನಿ ಇದ್ದಳು. ಅವಳಿಂದ ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಎಂಬ ಆರು ಜನ ಮಕ್ಕಳು ಜನಿಸಿದರು. ಯೊಕ್ಷಾನನಿಗೆ ಶೆಬಾ ಮತ್ತು ದೆದಾನ್ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 1:32
19 ತಿಳಿವುಗಳ ಹೋಲಿಕೆ  

ದೆದಾನಿನವರು ಹಲ್ಲಣಕ್ಕೆ ಸರಿಯಾದ ಒಳ್ಳೆಯ ಜಮಖಾನೆಗಳನ್ನು ನಿನಗೆ ತರುತ್ತಿದ್ದ ವ್ಯಾಪಾರಿಗಳಾಗಿದ್ದರು.


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ಎದೋಮಿನ ಮೇಲೆ ಕೈಯೆತ್ತಿ, ಅದರೊಳಗಿಂದ ಜನರನ್ನೂ ಪಶುಗಳನ್ನೂ ನಿರ್ಮೂಲಪಡಿಸಿ, ತೇಮೊನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ, ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.


ದೇದಾನಿನವರೇ, ಹಿಂದಿರುಗಿ ಓಡಿಹೋಗಿರಿ. ಒಳ ಪ್ರಾಂತ್ಯವನ್ನು ಸೇರಿ ವಾಸಿಸಿರಿ. ಏಕೆಂದರೆ ನಾನು ಎದೋಮನ್ನು ದಂಡಿಸುವೆನು. ಏಸಾವನಿಗೆ ವಿಧಿಸಿದ್ದ ಆಪತ್ತನ್ನು ಅದರ ಮೇಲೆ ಬರಮಾಡುವೆನು.


ಸಮುದ್ರದ ಆಚಿನ ಕರಾವಳಿಯ ಅರಸರು, ದೆದಾನ್ಯರು, ತೇಮಾ, ಬೂಜ್ ನಾಡಿನವರು, ಮುಂದಲೆಗೂದಲು ಕತ್ತರಿಸಿಕೊಳ್ಳುವವರೆಲ್ಲರು;


ತುಂಬಿರುವುವು ನಿನ್ನೊಳು ಒಂಟೆಗಳ ಗುಂಪುಗಳು ಮಿದ್ಯಾನಿನ, ಏಫದ ಪ್ರಾಯದ ಒಂಟೆಗಳು. ಬರುವರೆಲ್ಲರು ಶೆಬದಿಂದ, ತರುವರು ಬಂಗಾರ, ಧೂಪಗಳನು ಸಾರುವರೆಲ್ಲರು ಸರ್ವೇಶ್ವರನ ಸ್ತುತ್ಯಕಾರ್ಯಗಳನು.


ಅರೇಬಿಯ ವಿಷಯವಾದ ದೈವೋಕ್ತಿ : ದೇದಾದಿನ ಜನರೇ, ಒಂಟೆ ಸವಾರರೇ, ಅರೇಬಿಯದ ಮರುಭೂಮಿಯಲ್ಲಿ ಬೀಡು ಬಿಡುವವರೇ,


ಅರಸ ಬಾಳಲಿ ಚಿರಕಾಲ; ದೊರಕಲಿ ಆತನಿಗೆ ಶೆಬಾದ ಬಂಗಾರ I ಜರುಗಲಿ ಪ್ರಾರ್ಥನೆ ಸದಾಕಾಲ; ಆಶೀರ್ವಾದ ಸಿಗಲಿ ಅನವರತ II


ಕಪ್ಪಗಳನರ್ಪಿಸಲಿ ತಾರ್ಷಿಷ್ ಹಾಗೂ ದ್ವೀಪದ್ವೀಪದ ರಾಜರುಗಳು I ಕಾಣಿಕೆಗಳ ತಂದೊಪ್ಪಿಸಲಿ ಶೆಬಾ ಹಾಗೂ ಸೆಬಾದ ರಾಜರುಗಳು II


ಅವುಗಳಿಗಾಗಿ ಹಂಬಲಿಸುತ್ತದೆ ಆ ತೇಮದ ಪ್ರಯಾಣಿಕರ ತಂಡ ಅವುಗಳಿಗಾಗಿ ಹಾತೊರೆಯುತ್ತದೆ ಶೆಬದ ವರ್ತಕರ ಪಂಗಡ.


ಸರ್ವೇಶ್ವರನ ನಾಮಮಹತ್ತಿನಿಂದ ಸೊಲೊಮೋನನ ಕೀರ್ತಿ ಹರಡಿತು. ಇದನ್ನು ಕೇಳಿದ ಶೆಬದ ರಾಣಿ ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕೆ ಬಂದಳು.


“ಮಿದ್ಯಾನರು ಇಸ್ರಯೇಲರಿಗೆ ಮಾಡಿದ ಹಿಂಸೆಗಾಗಿ ನೀನು ಮುಯ್ಯಿತೀರಿಸಬೇಕು. ಅನಂತರ ನಿನ್ನ ಪೂರ್ವಜರ ಬಳಿಗೆ ನೀನು ಸೇರಬೇಕು,” ಎಂದರು.


ಇಸ್ರಯೇಲರ ಸರ್ವಸಮುದಾಯದವರು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ವಿಲಾಪಿಸುತ್ತಿದ್ದರು. ಇಸ್ರಯೇಲನಾದ ಒಬ್ಬ ವ್ಯಕ್ತಿ ಮೋಶೆಗೂ ಸರ್ವಸಮೂಹದವರಿಗೂ ಕಾಣುವಂತೆ ಒಬ್ಬ ಮಿದ್ಯಾನ್ ಮಹಿಳೆಯನ್ನು ತನ್ನ ಮನೆಯೊಳಗೆ ಕರೆದುಕೊಂಡು ಹೋದನು.


ಅಷ್ಟರಲ್ಲಿ, ಮಿದ್ಯಾನಿನ ವರ್ತಕರು ಹಾದುಹೋಗುತ್ತಿದ್ದರು. ಅವರು ಜೋಸೆಫನನ್ನು ಬಾವಿಯೊಳಗಿಂದ ಎತ್ತಿ ಈ ಇಷ್ಮಾಯೇಲರಿಗೆ ಇಪ್ಪತ್ತು ಬೆಳ್ಳಿನಾಣ್ಯಗಳಿಗೆ ಮಾರಿಬಿಟ್ಟರು. ಇವರು ಅವನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋದರು.


ಯೆಟೂರ್, ನಾಫೀಷ್, ಕೇದೆಮ ಎಂಬವರು.


ಮಿದ್ಯಾನ್ ಗೆ ಏಫಾ, ಏಫೆರ್, ಹನೋಕ್, ಅಬೀದ, ಎಲ್ದಾಯ ಎಂಬ ಐದು ಜನ ಮಕ್ಕಳು ಹುಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು