Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 1:34 - ಕನ್ನಡ ಸತ್ಯವೇದವು C.L. Bible (BSI)

34 ಅಬ್ರಹಾಮನ ಮಗ ಇಸಾಕನಿಗೆ ಇಬ್ಬರು ಮಕ್ಕಳು - ಏಸಾವ ಮತ್ತು ಯಕೋಬ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅಬ್ರಹಾಮನು ಸಾರಳಿಂದ ಇಸಾಕನನ್ನು ಪಡೆದನು. ಏಸಾವ ಮತ್ತು ಇಸ್ರಾಯೇಲ್ ಇಸಾಕನ ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅಬ್ರಹಾಮನು ಇಸಾಕನನ್ನು ಪಡೆದನು; ಏಸಾವ ಇಸ್ರಾಯೇಲರು ಇಸಾಕನ ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಅಬ್ರಹಾಮನು ಇಸಾಕನ ತಂದೆ. ಇಸಾಕನ ಗಂಡುಮಕ್ಕಳು ಯಾರೆಂದರೆ: ಏಸಾವ ಮತ್ತು ಇಸ್ರೇಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅಬ್ರಹಾಮನು ಸಾರಳಿಂದ ಇಸಾಕನನ್ನು ಪಡೆದನು. ಇಸಾಕನಿಗೆ ಇಬ್ಬರು ಮಕ್ಕಳು ಏಸಾವ ಮತ್ತು ಯಾಕೋಬ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 1:34
12 ತಿಳಿವುಗಳ ಹೋಲಿಕೆ  

ಅವನು ಯಕೋಬನಿಗೆ, “ಇನ್ನು ಮೇಲೆ ನೀನು ಯಕೋಬ ಎನಿಸಿಕೊಳ್ಳುವುದಿಲ್ಲ; ದೇವರ ಸಂಗಡ ಹಾಗು ಮನುಷ್ಯರ ಸಂಗಡ ಹೋರಾಡಿ ಗೆದ್ದವನಾದ್ದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರುಂಟಾಗುವುದು,” ಎಂದು ಹೇಳಿದನು.


ಆಮೇಲೆ ದೇವರು ಅಬ್ರಹಾಮನೊಡನೆ ಒಡಂಬಡಿಕೆಯನ್ನು ಮಾಡಿಕೊಂಡರು; ಆ ಒಡಂಬಡಿಕೆಯ ಚಿಹ್ನೆಯನ್ನಾಗಿ ಸುನ್ನತಿಯನ್ನು ವಿಧಿಸಿದರು.ಅದರಂತೆ ಅಬ್ರಹಾಮನು ತನ್ನ ಮಗ ಇಸಾಕನಿಗೆ ಹುಟ್ಟಿದ ಎಂಟನೆಯ ದಿನ ಸುನ್ನತಿಯನ್ನು ಮಾಡಿದನು. ಇಸಾಕನು ತನ್ನ ಮಗ ಯಕೋಬನಿಗೂ, ಯಕೋಬನು ತನ್ನ ಹನ್ನೆರಡು ಮಕ್ಕಳಾದ ನಮ್ಮ ಪಿತಾಮಹರಿಗೂ ಹಾಗೆಯೇ ಮಾಡಿದನು.


ಯೂದ ಯಕೋಬನಿಗೆ, ಯಕೋಬ್ ಇಸಾಕನಿಗೆ, ಇಸಾಕ ಅಬ್ರಹಾಮನಿಗೆ, ಅಬ್ರಹಾಮ ತೇರನಿಗೆ, ತೇರ ನಹೋರನಿಗೆ ಹುಟ್ಟಿದರು.


ಅಬ್ರಹಾಮನಿಗೆ ಇಸಾಕನು, ಇಸಾಕನಿಗೆ ಯಕೋಬನು, ಯಕೋಬನಿಗೆ ಯೂದ ಹಾಗೂ ಆತನ ಸಹೋದರರು ಹುಟ್ಟಿದರು.


ಅಬ್ರಹಾಮನಿಗೆ ಇಬ್ಬರು ಮಕ್ಕಳು - ಇಸಾಕ್ ಮತ್ತು ಇಷ್ಮಾಯೇಲ್.


ಮಿದ್ಯಾನ್ ಗೆ ಏಫಾ, ಏಫೆರ್, ಹನೋಕ್, ಅಬೀದ, ಎಲ್ದಾಯ ಎಂಬ ಐದು ಜನ ಮಕ್ಕಳು ಹುಟ್ಟಿದರು.


ಅಬ್ರಹಾಮನ ಮಗ ಇಸಾಕನ ವಂಶಾವಳಿ: ಅಬ್ರಹಾಮನು ಇಸಾಕನನ್ನು ಪಡೆದನು.


ಯಕೋಬನು, “ನಿಮ್ಮ ಹೆಸರನ್ನು ದಯವಿಟ್ಟು ನನಗೆ ತಿಳಿಸಬೇಕು,” ಎಂದಾಗ ಆ ಪುರುಷ, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಅಲ್ಲೇ ಅವನನ್ನು ಆಶೀರ್ವದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು