Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 10:1 - ಕನ್ನಡ ಸತ್ಯವೇದವು C.L. Bible (BSI)

1 ಗಿಲ್ಬೋವ ಬೆಟ್ಟದಲ್ಲಿ ಇಸ್ರಯೇಲ್ ಅವರಿಗೂ ಫಿಲಿಷ್ಟಿಯರಿಗೂ ಘೋರಯುದ್ಧ ನಡೆಯಿತು. ಅನೇಕ ಜನ ಇಸ್ರಯೇಲರು ಯುದ್ಧದಲ್ಲಿ ಹತರಾದರು. ಅರಸ ಸೌಲನೂ ಅವನ ಮಕ್ಕಳೂ ಇನ್ನುಳಿದವರೂ ತಪ್ಪಿಸಿಕೊಂಡು ಓಡಿಹೋಗಲು ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡಿದರು. ಇಸ್ರಾಯೇಲರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಫಿಲಿಷ್ಟಿಯರು ಇಸ್ರಾಯೇಲ್ಯರೊಡನೆ ಯುದ್ಧಮಾಡಿದರು. ಇಸ್ರಾಯೇಲ್ಯರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಫಿಲಿಷ್ಟಿಯರು ಇಸ್ರೇಲರ ವಿರೋಧವಾಗಿ ಕಾದಾಡಿದರು. ಆದರೆ ಇಸ್ರೇಲರು ಫಿಲಿಷ್ಟಿಯರ ಎದುರಿನಿಂದ ಓಡಿಹೋಗಬೇಕಾಯಿತು. ಇಸ್ರೇಲರಲ್ಲಿ ಬಹಳ ಮಂದಿ ಗಿಲ್ಬೋವ ಬೆಟ್ಟದ ಮೇಲೆ ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಫಿಲಿಷ್ಟಿಯರು ಇಸ್ರಾಯೇಲರ ವಿರುದ್ಧ ಯುದ್ಧಮಾಡಿದರು. ಆಗ ಇಸ್ರಾಯೇಲರು ಫಿಲಿಷ್ಟಿಯರಿಂದ ಸೋತು ಓಡಿಹೋಗಿ, ಗಿಲ್ಬೋವ ಬೆಟ್ಟದಲ್ಲಿ ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 10:1
9 ತಿಳಿವುಗಳ ಹೋಲಿಕೆ  

ಕಾಳಗದ ಮರುದಿನ ಫಿಲಿಷ್ಟಿಯರು ಸತ್ತವರ ಒಡವೆವಸ್ತುಗಳನ್ನು ಸುಲಿಗೆಮಾಡಲು ಹೋದಾಗ, ಗಿಲ್ಬೋವ ಬೆಟ್ಟದಲ್ಲಿ ಸೌಲ ಹಾಗೂ ಅವನ ಮಕ್ಕಳು ಸತ್ತುಬಿದ್ದಿರುವುದನ್ನು ಕಂಡರು.


ಆಗ ಅವನು ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ತರುವುದಕ್ಕಾಗಿ ಯಾಬೇಷ್ ಗಿಲ್ಯಾದಿಗೆ ಹೋದನು. ಫಿಲಿಷ್ಟಿಯರು ಸೌಲನನ್ನು ಗಿಲ್ಬೋವದಲ್ಲಿ ಸೋಲಿಸಿದ ನಂತರ ಅವನ ಮತ್ತು ಯೋನಾತಾನನ ಶವಗಳನ್ನು ಬೇತ್ ಷೆಯಾನಿನ ಬೀದಿಗಳಲ್ಲಿ ತೂಗುಹಾಕಿದ್ದರು. ಯಾಬೇಷ್ ಗಿಲ್ಯಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು.


ಮಳೆಯಾಗಲಿ, ಮಂಜಾಗಲಿ ಬೀಳದಿರಲಿ ಆ ಗಿಲ್ಬೋವ ಗುಡ್ಡಗಳ ಮೇಲೆ ಅದರ ಮೇಲಿನ ಹೊಲಗಳು ಬೆಳೆಕೊಡದಿರಲಿ ನೈವೇದ್ಯಕೆ. ಏಕೆನೆ ಅಲ್ಲಿ ಬಿದ್ದಿವೆ ಯುದ್ಧವೀರರ ಕತ್ತಿಗುರಾಣಿ ಅಭಿಷಿಕ್ತನಲ್ಲದವನ ಗುರಾಣಿಯಂತೆ ಆ ಸೌಲನ ಗುರಾಣಿ!


ಅವನು, “ನಾನು ಅಕಸ್ಮಾತ್ತಾಗಿ ಗಿಲ್ಬೋವ ಪರ್ವತಪ್ರದೇಶಕ್ಕೆ ಹೋದಾಗ ಸೌಲ ತಮ್ಮ ಭರ್ಜಿಯನ್ನೂರಿಕೊಂಡು ನಿಂತಿದ್ದರು. ರಥಿಕರೂ ರಾಹುತರೂ ಅವರನ್ನು ಹಿಂದಟ್ಟಿಬರುತ್ತಿರುವುದನ್ನೂ ಕಂಡೆ.


ಫಿಲಿಷ್ಟಿಯರು ಸೈನ್ಯಕೂಡಿಸಿಕೊಂಡು ಬಂದು ಶೂನೇಮಿನಲ್ಲಿ ಪಾಳೆಯಮಾಡಿಕೊಂಡಿದ್ದರು. ಸೌಲನು ಸಮಸ್ತ ಇಸ್ರಯೇಲರೊಡನೆ ಬಂದು ಗಿಲ್ಬೋವದಲ್ಲಿ ಇಳಿದುಕೊಂಡನು.


ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಯೇಲರೊಡನೆ ಯುದ್ಧಮಾಡುವುದಕ್ಕಾಗಿ ಸೈನ್ಯವನ್ನು ಕೂಡಿಸತೊಡಗಿದರು. ಆಗ ಆಕೀಷನು ದಾವೀದನಿಗೆ, “ನೀನೂ ನಿನ್ನ ಜನರೂ ಯುದ್ಧಕ್ಕೆ ನನ್ನ ಜೊತೆಯಲ್ಲೇ ಬರಬೇಕೆಂಬುದು ನಿನಗೆ ಗೊತ್ತಿದೆಯಲ್ಲವೇ?’ ಎಂದನು.


ಆಚೇಲನಿಗೆ ಆರು ಜನ ಮಕ್ಕಳು - ಅಜ್ರೀಕಾಮ್, ಬೋಕೆರೂ, ಇಷ್ಮಾಯೇಲ್, ಶೆಯರ, ಓಬದ್ಯ ಹಾಗು ಹಾನಾನ್ ಎಂಬವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು