1 ಪೂರ್ವಕಾಲ ವೃತ್ತಾಂತ 10:7 - ಕನ್ನಡ ಸತ್ಯವೇದವು C.L. Bible (BSI)7 ತಗ್ಗಿನಲ್ಲಿ ನೆಲೆಸಿದ್ದ ಇಸ್ರಯೇಲರು ತಮ್ಮ ಸೈನ್ಯವು ಪಲಾಯನಗೈಯಿತು ಮತ್ತು ಸೌಲನೂ ಅವನ ಮಕ್ಕಳೂ ಮರಣ ಹೊಂದಿದರು ಎಂಬ ವಾರ್ತೆಯನ್ನು ಕೇಳಿ ಅವರೂ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಅನಂತರ ಫಿಲಿಷ್ಟಿಯರು ಬಂದು ಅವುಗಳನ್ನು ವಶಪಡಿಸಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇಸ್ರಾಯೇಲರು ಸೋತು ಹೋದರು. ಸೌಲನೂ, ಅವನ ಮಕ್ಕಳು ಸತ್ತರು ಎಂಬ ವರ್ತಮಾನವನ್ನು ತಗ್ಗಿನಲ್ಲಿ ವಾಸವಾಗಿದ್ದ ಇಸ್ರಾಯೇಲರೆಲ್ಲರೂ ಕೇಳಿ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇಸ್ರಾಯೇಲ್ ಭಟರು ಸೋತರು, ಸೌಲನೂ ಅವನ ಮಕ್ಕಳೂ ಸತ್ತರು ಎಂಬ ವರ್ತಮಾನವನ್ನು ತಗ್ಗಿನಲ್ಲಿ ವಾಸವಾಗಿದ್ದ ಇಸ್ರಾಯೇಲ್ಯರೆಲ್ಲರೂ ಕೇಳಿ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು; ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ತಗ್ಗಿನಲ್ಲಿ ವಾಸಿಸುತ್ತಿದ್ದ ಇಸ್ರೇಲರು ತಮ್ಮ ಸೈನ್ಯವು ವೈರಿಗಳಿಂದ ಓಡಿಸಲ್ಪಡುವದನ್ನು ನೋಡಿದರು. ಅರಸನಾದ ಸೌಲನು ಮತ್ತು ಅವನ ಗಂಡುಮಕ್ಕಳು ಸತ್ತುಹೋಗಿರುವುದು ಅವರಿಗೆ ತಿಳಿಯಿತು. ಆಗ ಅವರೂ ತಮ್ಮತಮ್ಮ ಮನೆಗಳನ್ನು ಬಿಟ್ಟು ಓಡಿದರು. ಫಿಲಿಷ್ಟಿಯರು ಅವರ ಮನೆಗಳಿಗೆ ಬಂದಾಗ ಯಾರೂ ಇಲ್ಲದ್ದನ್ನು ನೋಡಿ ಅಲ್ಲಿಯೇ ವಾಸಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇಸ್ರಾಯೇಲರ ಸೈನಿಕರು ಸೋತು ಹೋದರೆಂದೂ, ಸೌಲನೂ, ಅವನ ಪುತ್ರರೂ ಸತ್ತರೆಂದೂ ತಗ್ಗಿನಲ್ಲಿ ವಾಸವಾಗಿದ್ದ ಇಸ್ರಾಯೇಲರೆಲ್ಲರು ಕಂಡಾಗ, ಅವರು ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಆಗ ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಿಸಿದರು. ಅಧ್ಯಾಯವನ್ನು ನೋಡಿ |