Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 10:8 - ಕನ್ನಡ ಸತ್ಯವೇದವು C.L. Bible (BSI)

8 ಕಾಳಗದ ಮರುದಿನ ಫಿಲಿಷ್ಟಿಯರು ಸತ್ತವರ ಒಡವೆವಸ್ತುಗಳನ್ನು ಸುಲಿಗೆಮಾಡಲು ಹೋದಾಗ, ಗಿಲ್ಬೋವ ಬೆಟ್ಟದಲ್ಲಿ ಸೌಲ ಹಾಗೂ ಅವನ ಮಕ್ಕಳು ಸತ್ತುಬಿದ್ದಿರುವುದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮರುದಿನ ಬೆಳಿಗ್ಗೆ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳುವುದಕ್ಕಾಗಿ ಬಂದಾಗ, ಸೌಲನೂ ಅವನ ಮೂರು ಮಕ್ಕಳೂ ಗಿಲ್ಬೋವ ಬೆಟ್ಟದಲ್ಲಿ ಸತ್ತುಬಿದ್ದಿರುವುದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮರುದಿನ ಬೆಳಿಗ್ಗೆ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲುಕೊಳ್ಳುವದಕ್ಕೆ ಬಂದಾಗ ಸೌಲನೂ ಅವನ ಮೂರು ಮಂದಿ ಮಕ್ಕಳೂ ಗಿಲ್ಬೋವ ಬೆಟ್ಟದಲ್ಲಿ ಸತ್ತುಬಿದ್ದಿರುವದನ್ನು ಕಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮರುದಿವಸ ಫಿಲಿಷ್ಟಿಯರು ಹೆಣಗಳ ಮೇಲಿರುವ ಬೆಲೆಬಾಳುವ ವಸ್ತುಗಳನ್ನು ದೋಚಲು ಬಂದರು. ಆಗ ಅವರಿಗೆ ಗಿಲ್ಬೋವ ಬೆಟ್ಟದ ಮೇಲೆ ಸೌಲ ಮತ್ತು ಅವನ ಗಂಡುಮಕ್ಕಳ ಶರೀರಗಳು ದೊರಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಮಾರನೆಯ ದಿವಸದಲ್ಲಿ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳಲು ಬಂದಾಗ, ಗಿಲ್ಬೋವ ಬೆಟ್ಟದಲ್ಲಿ ಸತ್ತುಬಿದ್ದಿರುವ ಸೌಲನನ್ನೂ, ಅವನ ಪುತ್ರರನ್ನೂ ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 10:8
6 ತಿಳಿವುಗಳ ಹೋಲಿಕೆ  

ಯೆಹೋಷಾಫಾಟನೂ ಅವನ ಜನರೂ ಸುಲಿಗೆಮಾಡುವುದಕ್ಕಾಗಿ ಅಲ್ಲಿಗೆ ಹೋದರು. ಅವರಿಗೆ ದ್ರವ್ಯ, ವಸ್ತ್ರ, ಶ್ರೇಷ್ಠಾಯುಧ, ಇವುಗಳು ರಾಶಿರಾಶಿಯಾಗಿ ಸಿಕ್ಕಿದವು. ಅವರು ಹೊರಲಾರದಷ್ಟನ್ನೂ ಸುಲಿದುಕೊಂಡರು. ಕೊಳ್ಳೆಯ ಮೊತ್ತ ಹೆಚ್ಚಾಗಿದ್ದುದರಿಂದ ಅವರು ಮೂರು ದಿನಗಳವರೆಗೂ ಕೂಡಿಸುತ್ತಿದ್ದರು.


ಆದ್ದರಿಂದ, “ಅದು ರಕ್ತ; ಅರಸರು ತಮ್ಮ ತಮ್ಮೊಳಗೆ ಜಗಳವಾಡಿ ಹತರಾಗಿರಬೇಕು; ಮೋವಾಬ್ಯರೇ, ಏಳಿ, ಸುಲಿಗೆಗೆ ಹೋಗೋಣ,” ಎಂದು ಕೂಗಿಕೊಂಡು ಇಸ್ರಯೇಲರ ಪಾಳೆಯಕ್ಕೆ ಹೋದರು.


ಮರುದಿನ ಬೆಳಿಗ್ಗೆ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳುವುದಕ್ಕೆ ಬಂದಾಗ ಸೌಲನೂ ಅವನ ಮೂರು ಮಂದಿ ಮಕ್ಕಳೂ ಗಿಲ್ಬೋವ ಬೆಟ್ಟದಲ್ಲಿ ಸತ್ತು ಬಿದ್ದಿರುವುದನ್ನು ಕಂಡರು.


ಅಲ್ಲಿ ಅದನ್ನು ದಾಗೋನನ ಮಗ್ಗುಲಲ್ಲೇ ಇಟ್ಟರು.


ತಗ್ಗಿನಲ್ಲಿ ನೆಲೆಸಿದ್ದ ಇಸ್ರಯೇಲರು ತಮ್ಮ ಸೈನ್ಯವು ಪಲಾಯನಗೈಯಿತು ಮತ್ತು ಸೌಲನೂ ಅವನ ಮಕ್ಕಳೂ ಮರಣ ಹೊಂದಿದರು ಎಂಬ ವಾರ್ತೆಯನ್ನು ಕೇಳಿ ಅವರೂ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಅನಂತರ ಫಿಲಿಷ್ಟಿಯರು ಬಂದು ಅವುಗಳನ್ನು ವಶಪಡಿಸಿಕೊಂಡರು.


ಸೌಲನ ತಲೆಯನ್ನು ಕಡಿದು ದೇಹದಿಂದ ಬೇರ್ಪಡಿಸಿದರು. ಅವನ ಆಯುಧಗಳನ್ನು ಬಿಚ್ಚಿಕೊಂಡರು. ಅವುಗಳೊಂದಿಗೆ ಸುದ್ದಿವಾಹಕರನ್ನು ತಮ್ಮ ನಾಡಿನ ಎಲ್ಲೆಡೆಗೂ ಕಳುಹಿಸಿ, ಈ ಜಯವಾರ್ತೆಯನ್ನು ತಮ್ಮ ದೇವತೆಗಳಿಗೂ ಜನರಿಗೂ ಮುಟ್ಟಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು