Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:12 - ಕನ್ನಡ ಸತ್ಯವೇದವು C.L. Bible (BSI)

12 ಪ್ರಸಿದ್ಧರಾದ ‘ಮೂವರು ಪ್ರಮುಖರು’ ಎಂಬ ಪಡೆಯಲ್ಲಿ ಎರಡನೆಯವನು ಅಹೋಹ್ಯ ಗೋತ್ರದ ದೋದೋ ಎಂಬವನ ಮಗ ಎಲ್ಲಾಜಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಎರಡನೆಯವನು ಅಹೋಹ್ಯನಾದ ದೋದೋ ಎಂಬುವವನ ಮಗನಾಗಿರುವ ಎಲ್ಲಾಜಾರನು. ಇವನೂ ಆ ಮೂವರು ಶೂರರಲ್ಲಿ ಒಬ್ಬನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಎರಡನೆಯವನು ಅಹೋಹ್ಯನಾದ ದೋದೋ ಎಂಬವನ ಮಗನಾಗಿರುವ ಎಲ್ಲಾಜಾರನು; ಇವನೂ ಆ ಮೂರು ಮಂದಿ ಶೂರರಲ್ಲಿ ಒಬ್ಬನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಎರಡನೆಯವನು, ಅಹೋಹ್ಯನಾದ ದೋದೋವನ ಮಗನಾದ ಎಲ್ಲಾಜಾರ. ಇವನು ಮೂರು ಮಂದಿ ಪರಾಕ್ರಮಶಾಲಿಗಳಲ್ಲಿ ಒಬ್ಬನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇವನ ತರುವಾಯ ಅಹೋಹ್ಯನಾಗಿರುವ ದೋದೋ ಎಂಬವನ ಮಗನಾಗಿರುವ ಎಲಿಯಾಜರನು, ಮೂವರು ಪರಾಕ್ರಮಶಾಲಿಗಳಲ್ಲಿ ಒಬ್ಬನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:12
7 ತಿಳಿವುಗಳ ಹೋಲಿಕೆ  

ಅಹೋಹಿಯನಾದ ದೋದೈಯು ಎರಡನೆಯ ತಿಂಗಳಿನ ವರ್ಗದ ನಾಯಕ; ಆ ವರ್ಗದಲ್ಲಿ ಮಿಕ್ಲೋತನೆಂಬವನೂ ನಾಯಕನು. ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.


ಅವನು ಈ ‘ಮೂವತ್ತು ಪ್ರಮುಖ ವೀರರ’ ಪಡೆಯಲ್ಲಿ ಪ್ರಸಿದ್ಧನಾದುದಲ್ಲದೇ ಅದರ ನಾಯಕನೂ ಆದನು. ಆದರೆ ‘ಮೂವರು ಪ್ರಮುಖ ವೀರರು’ ಎಂಬ ಪಡೆಯವರಷ್ಟು ಪ್ರಸಿದ್ಧನಾಗಲಿಲ್ಲ.


ದಾವೀದನು ಆ ನೀರನ್ನು ಕುಡಿಯದೇ ಸರ್ವೇಶ್ವರನಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದನು. ಈ ಮೂರು ಮಂದಿ ರಣವೀರರು ಸಾಧಿಸಿದ ಪರಾಕ್ರಮವಿದು.


ಮೂವತ್ತು ಮಂದಿಯಲ್ಲಿ ಇವನು ವಿಶೇಷ ಕೀರ್ತಿಯನ್ನು ಹೊಂದಿದ್ದರೂ ಮೊದಲಿನ ಮೂವರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ನೇಮಿಸಿದ್ದನು.


ಎರಡನೆಯವನು ಅಹೋಹ್ಯನಾದ ದೋದೋ ಎಂಬವನ ಮಗ ಎಲ್ಲಾಜಾರನು. ಫಿಲಿಷ್ಟಿಯರು ಅಲ್ಲಿ ಯುದ್ಧಕ್ಕೆ ಕೂಡಿಕೊಂಡಾಗ ಅವರನ್ನು ಪ್ರತಿಭಟಿಸಲು ದಾವೀದನ ಜೊತೆಯಲ್ಲಿ ಹೋದ ಮೂರು ಮಂದಿ ಶೂರರಲ್ಲಿ ಇವನೂ ಒಬ್ಬನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು