Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:15 - ಕನ್ನಡ ಸತ್ಯವೇದವು C.L. Bible (BSI)

15 ಅದುಲ್ಲಾಮ್ ಗವಿಯ ಹತ್ತಿರ ದಾವೀದನು ವಾಸಿಸುತ್ತಿದ್ದಾಗ, ಮೂವತ್ತು ಪ್ರಮುಖ ರಣವೀರರಲ್ಲಿ ಮೂವರು ಒಂದು ದಿನ ಒಂದು ಬಂಡೆಯ ಬಳಿಗೆ ಹೋದರು. ಅಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ಕೊಳ್ಳದಲ್ಲಿ ಬೀಡುಬಿಟ್ಟದ್ದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದಾವೀದನು ಅದುಲ್ಲಾಮ್ ಗಿರಿಯ ಗವಿಯಲ್ಲಿದ್ದಾಗ ಅವನ ಮೂವತ್ತು ಜನ ಪ್ರಸಿದ್ಧಶೂರರಲ್ಲಿ ಮೂವರು ಅವನ ಬಳಿಗೆ ಬಂದರು. ಫಿಲಿಷ್ಟಿಯರು ದಂಡೆತ್ತಿ ಬಂದು ರೆಫಾಯೀಮ್ ತಗ್ಗಿನಲ್ಲಿ ಪಾಳೆಯಮಾಡಿಕೊಂಡಿರುವುದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ದಾವೀದನು ಅದುಲ್ಲಾಮ್‍ಗಿರಿಯ ಗವಿಯಲ್ಲಿದ್ದಾಗ ಅವನ ಮೂವತ್ತು ಮಂದಿ ಪ್ರಸಿದ್ಧ ಶೂರರಲ್ಲಿ ಮೂವರು ಅವನ ಬಳಿಗೆ ಬಂದರು. ಫಿಲಿಷ್ಟಿಯರು ದಂಡೆತ್ತಿ ಬಂದು ರೆಫಾಯಿಮ್ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಿದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಒಂದು ಸಲ ದಾವೀದನು ಅದುಲ್ಲಾಮ್ ಗವಿಯೊಳಗಿದ್ದಾಗ, ರೆಫಾಯಿಮ್ ತಗ್ಗಿನಲ್ಲಿ ಫಿಲಿಷ್ಟಿಯರು ಪಾಳೆಯಮಾಡಿದ್ದರು. ಮೂವತ್ತು ಮಂದಿ ಪರಾಕ್ರಮಿಗಳಲ್ಲಿ ಈ ಮೂರು ಮಂದಿ ಗುಹೆಯಲ್ಲಿದ್ದ ದಾವೀದನೊಂದಿಗೆ ಸೇರಿಕೊಳ್ಳಲು ಹೊಟ್ಟೆಯ ಮೇಲೆ ತೆವಳಿಕೊಂಡೇ ಅವನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಮೂವತ್ತು ಮಂದಿ ಪರಾಕ್ರಮಶಾಲಿಗಳ ಮುಖ್ಯಸ್ಥರಲ್ಲಿ ಮೂರು ಮಂದಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿಗೆ ಗುಡ್ಡಕ್ಕೆ ಬಂದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:15
11 ತಿಳಿವುಗಳ ಹೋಲಿಕೆ  

ಫಿಲಿಷ್ಟಿಯರು ರೆಫಾಯಿಮ್ ಕಣಿವೆಯನ್ನು ತಲುಪಿ ಸುಲಿಗೆಮಾಡಲು ಪ್ರಾರಂಭಿಸಿದರು.


ಅದು ಕೊಯ್ದ ಹೊಲದಂತಿರುವುದು, ತೆನೆಕತ್ತರಿಸಿದ ಹುಲ್ಲಿನಂತಿರುವುದು. ಕೂಳೆಯನ್ನೂ ಬಿಡದೆ ಆಯ್ದುಕೊಂಡ ರೆಫಾಯಿಮ್ ಕಣಿವೆಯಂತೆ ಇರುವುದು.


ಫಿಲಿಷ್ಟಿಯರು ನಾಡಿನೊಳಗೆ ನುಗ್ಗಿ ರೆಫಾಯಿಮ್ ತಗ್ಗಿಗೆ ಬಂದು ಪಾಳೆಯ ಮಾಡಿಕೊಂಡರು.


ಮಾರೇಷದವರೇ, ಆಕ್ರಮಣಕಾರನೊಬ್ಬನನ್ನು ನಿಮ್ಮ ಬಳಿಗೆ ಬರಮಾಡುವೆನು. ಇಸ್ರಯೇಲಿನ ವೈಭವವು ಅದುಲ್ಲಾಮಿನ ಪಾಲಾಗುವುದು.


ಫಿಲಿಷ್ಟಿಯರು ಇನ್ನೊಮ್ಮೆ ಹೊರಟುಬಂದು ರೆಫಾಯೀಮ್ ತಗ್ಗಿನಲ್ಲಿ ಇಳಿದುಕೊಂಡರು.


ದಾವೀದನು ಅಲ್ಲಿಂದ ತಪ್ಪಿಸಿಕೊಂಡು ಅದುಲ್ಲಾಮ್ ಎಂಬ ಗವಿಗೆ ಹೋದನು. ಈ ಸಮಾಚಾರ, ಅವನ ಅಣ್ಣಂದಿರಿಗೂ ಬೇರೆ ಎಲ್ಲಾ ಸಂಬಂಧಿಕರಿಗೂ ಮುಟ್ಟಿತು. ಅವರೂ ಬಂದು ಅವನನ್ನು ಸೇರಿಕೊಂಡರು.


ಬೆನ್ ಹಿನ್ನೋಮನ ಕಣಿವೆಗೆ ಹೊಗುತ್ತದೆ. ಅಲ್ಲಿಂದ ಅದು ಜೆರುಸಲೇಮ್ ನಗರವು ಕಟ್ಟಲ್ಪಟ್ಟಿರುವ ಯೆಬೂಸಿಯರ ಬೆಟ್ಟದ ದಕ್ಷಿಣ ಮಾರ್ಗವಾಗಿ ಹಿನ್ನೋಮ್ ಕಣಿವೆಯ ಪಶ್ಚಿಮದಲ್ಲೂ ರೆಫಾಯೀಮ್ ಕಣಿವೆಯ ಉತ್ತರದಲ್ಲೂ ಇರುವ ಬೆಟ್ಟದ ತುದಿಗೆ ಹೋಗುತ್ತದೆ.


ಲಿಬ್ನದ ಅರಸ - 1 ಅದುಲ್ಲಾಮದ ಅರಸ - 1


ಆಗ ಅವನೂ ಅವನ ಸಂಗಡಿಗರೂ ಹೊಲದ ಮಧ್ಯದಲ್ಲಿ ನಿಂತುಕೊಂಡು ಫಿಲಿಷ್ಟಿಯರಿಗೆ ವಿರೋಧವಾಗಿ ಕಾದಾಡಿದರು. ಸರ್ವೇಶ್ವರ ಅವನಿಗೆ ಮಹಾಜಯವನ್ನು ದಯಪಾಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು