1 ಪೂರ್ವಕಾಲ ವೃತ್ತಾಂತ 11:17 - ಕನ್ನಡ ಸತ್ಯವೇದವು C.L. Bible (BSI)17 ದಾವೀದನು ತನ್ನೂರನ್ನು ಜ್ಞಾಪಿಸಿಕೊಂಡು ಅಸ್ವಸ್ಥನಾಗಿ ‘ಬೆತ್ಲೆಹೇಮಿನ ದ್ವಾರದ ಬಳಿಯಿರುವ ಬಾವಿಯಿಂದ ನನಗೆ ಕುಡಿಯಲು ಯಾರಾದರೂ ನೀರನ್ನು ತಂದುಕೊಡಬಲ್ಲಿರೋ!’ ಎಂದು ತನ್ನ ಅಪೇಕ್ಷೆಯನ್ನು ವ್ಯಕ್ತಪಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ದಾವೀದನು ಲವಲವಿಕೆಯಿಂದ, “ಬೇತ್ಲೆಹೇಮ್ ಊರಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದು ಕೊಡುವುದಾದರೆ ಎಷ್ಟೋ ಒಳ್ಳೆಯದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆಗ ದುರ್ಗದಲ್ಲಿದ್ದ ದಾವೀದನು ಲವಲವಿಕೆಯಿಂದ - ಬೇತ್ಲೆಹೇಮ್ ಊರಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದುಕೊಡುವದಾದರೆ ಎಷ್ಟೋ ಒಳ್ಳೇದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ದಾಹಗೊಂಡಿದ್ದ ದಾವೀದನು ತನ್ನ ಊರಿನ ನೀರು ಕುಡಿಯಲು ಬಯಸಿ, “ಬೆತ್ಲೆಹೇಮಿನ ನಗರದ್ವಾರದ ಬಳಿಯಲ್ಲಿರುವ ಬಾವಿಯಿಂದ ಯಾರಾದರೂ ನೀರು ತಂದುಕೊಡುವುದಾದರೆ ಎಷ್ಟೋ ಒಳ್ಳೆಯದು” ಎಂದು ಅವನು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಗ ದಾವೀದನು, “ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ನನಗೆ ಕುಡಿಯಲು ಕೊಡುವವನ್ಯಾರು,” ಎಂದು ಬಹು ಆಶೆಯಿಂದ ಹೇಳಿದನು. ಅಧ್ಯಾಯವನ್ನು ನೋಡಿ |