Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:2 - ಕನ್ನಡ ಸತ್ಯವೇದವು C.L. Bible (BSI)

2 ಅರಸ ಸೌಲ ನಮ್ಮನ್ನು ಆಳುತ್ತಿದ್ದಾಗ ನೀವು ಇಸ್ರಯೇಲರ ದಳಪತಿಯಾಗಿ ಯುದ್ಧ ನಡೆಸಿದಿರಿ. ನಮ್ಮ ದೇವರಾದ ಸರ್ವೇಶ್ವರ, ‘ನೀನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನೂ ಪಾಲಕನೂ ಆಗುವೆ,’ ಎಂದು ವಾಗ್ದಾನ ಮಾಡಿದ್ದು ನಿಮ್ಮನ್ನು ಕುರಿತೇ” ಎಂದು ಹೇಳಿ ವಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸೌಲನ ಆಳ್ವಿಕೆಯಲ್ಲಿ ಇಸ್ರಾಯೇಲರ ದಳಾಧಿಪತಿಯಾಗಿ ಇದ್ದವನು ನೀನೇ. ನಿನ್ನ ಕುರಿತು ನಿನ್ನ ದೇವರಾದ ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ, ಪಾಲಕನೂ ಆಗಿರುವಿ’ ಎಂದು ವಾಗ್ದಾನ ಮಾಡಿದ್ದಾನೆ.” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾವು ನಿನ್ನ ರಕ್ತಸಂಬಂಧಿಗಳಾಗಿದ್ದೇವೆ; ಹಿಂದಿನ ದಿವಸಗಳಲ್ಲಿ ಅಂದರೆ ಸೌಲನ ಆಳಿಕೆಯಲ್ಲಿ ಇಸ್ರಾಯೇಲ್ಯರ ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ನಿನ್ನ ದೇವರಾದ ಯೆಹೋವನು - ನೀನು ನನ್ನ ಪ್ರಜೆಗಳಾದ ಇಸ್ರಾಯೇಲ್ಯರ ನಾಯಕನೂ ಪಾಲಕನೂ ಆಗಿರುವಿ ಎಂದು ಹೇಳಿದ್ದಾನಷ್ಟೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಹಿಂದೆ ನೀನು ನಮ್ಮನ್ನು ಯುದ್ಧದಲ್ಲಿ ನಡೆಸಿರುವೆ. ಆಗ ಸೌಲನು ಅರಸನಾಗಿದ್ದರೂ ನೀನು ನಮ್ಮ ಯುದ್ಧದಲ್ಲಿ ನಾಯಕನಾಗಿದ್ದೆ. ಯೆಹೋವನು ನಿನಗೆ, ‘ದಾವೀದನೇ, ನೀನು ನಿನ್ನ ಜನರಾದ ಇಸ್ರೇಲರ ಪಾಲಕನಾಗಿರಬೇಕು. ನನ್ನ ಜನರಿಗೆ ನೀನು ನಾಯಕನಾಗಿರಬೇಕು’” ಎಂದು ಹೇಳಿದ್ದಾನಲ್ಲವೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ, ನೀನು ದಳಪತಿಯಾಗಿ ಇಸ್ರಾಯೇಲನ್ನು ಹೊರಗೆ ನಡೆಸುವವನಾಗಿಯೂ, ಒಳಗೆ ತರುವವನಾಗಿಯೂ ಇದ್ದವನು. ಆದ್ದರಿಂದ ನಿನ್ನ ದೇವರಾದ ಯೆಹೋವ ದೇವರು ನಿನಗೆ, ‘ನೀನು ನನ್ನ ಜನರಾದ ಇಸ್ರಾಯೇಲರ ನಾಯಕನೂ, ಪಾಲಕನೂ ಆಗಿರುವೆ,’ ಎಂದು ವಾಗ್ದಾನ ಮಾಡಿದ್ದು ನಿಮ್ಮನ್ನು ಕುರಿತೇ,” ಎಂದು ಹೇಳಿ ವಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:2
16 ತಿಳಿವುಗಳ ಹೋಲಿಕೆ  

ಹಿಂದಿನ ದಿವಸಗಳಲ್ಲಿ, ಅಂದರೆ ಸೌಲನ ಆಳ್ವಿಕೆಯಲ್ಲಿ, ಇಸ್ರಯೇಲರ ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವರು ನೀವೇ. ನಿಮ್ಮನ್ನು ಕುರಿತು ಸರ್ವೇಶ್ವರಸ್ವಾಮಿ, ‘ನೀನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನೂ ಪಾಲಕನೂ ಆಗಿರುವೆ,’ ಎಂದು ವಾಗ್ದಾನಮಾಡಿದ್ದಾರೆ,” ಎಂದರು.


ತನ್ನ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ನಂತರ ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಹಿಂದೆ ಹೋಗುತ್ತವೆ. ಏಕೆಂದರೆ ಅವುಗಳಿಗೆ ಅವನ ಸ್ವರ ಗೊತ್ತು.


ಕುರಿಮೇಯಿಸುವಾ ಕಸಬಿನಿಂದವನನು ಬಿಡಿಸಿದನು I ಸ್ವಪ್ರಜೆ ಯಕೋಬ್ಯರನು, ಸ್ವಜನ ಇಸ್ರಯೇಲರನು I ಪರಿಪಾಲಿಸುವಂತೆ ನೇಮಕ ಮಾಡಿದನು ಆತನನು II


ಹೀಗೆ ಇಸ್ರಯೇಲರ ಮಧ್ಯೆ ಸಂಚರಿಸುತ್ತಿದ್ದಾಗ ನನ್ನ ಜನರಾದ ಅವರನ್ನು ಪಾಲಿಸುವುದಕ್ಕೆ ಕುಲನಾಯಕನನ್ನು ನೇಮಿಸಿದೆ. ಅವರಾರಿಂದಲೂ ‘ನೀವೇಕೆ ನನಗೆ ದೇವದಾರು ಮರದಿಂದ ದೇವಾಲಯವನ್ನು ಕಟ್ಟಿಸಲಿಲ್ಲ?’ ಎಂದು ಕೇಳಿದ್ದಿಲ್ಲ!”


‘ಜುದೇಯ ನಾಡಿನ ಬೆತ್ಲೆಹೇಮೇ, ಜುದೇಯದ ಪ್ರಮುಖ ಪಟ್ಟಣಗಳಲ್ಲಿ ನೀನು ಅಲ್ಪಳೇನೂ ಅಲ್ಲ. ಕಾರಣ ನನ್ನ ಪ್ರಜೆ ಇಸ್ರಯೇಲನ್ನು ಪರಿಪಾಲಿಸುವವನು ನಿನ್ನಿಂದಲೇ ಉದಯಿಸಲಿರುವನು’. ಎಂದು ಪ್ರವಾದಿ ಬರೆದಿದ್ದಾನೆ” ಎಂದು ಉತ್ತರವಿತ್ತರು.


ಆತನು ಸರ್ವೇಶ್ವರನಿಂದ ಬರುವ ಶಕ್ತಿಯಿಂದಲೂ ಆ ಸ್ವಾಮಿ ದೇವರ ನಾಮದ ಪ್ರಭಾವದಿಂದಲೂ ತನ್ನ ಜನರನ್ನು ಪರಿಪಾಲಿಸುವನು. ಆ ಜನರು ಸುರಕ್ಷಿತವಾಗಿ ಬಾಳುವರು. ಆತನು ಜಗದ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.


ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.


ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ಕೊಡುವೆನು. ಅವರು ನಿಮ್ಮನ್ನು ಜ್ಞಾನವಿವೇಕಗಳಿಂದ ಪೋಷಿಸುವರು.


ನೇಮಿಸಿರುವೆ ಆತನನು ಜನಗಳಿಗೆ ಸಾಕ್ಷಿಯನ್ನಾಗಿ ಜನಾಂಗಗಳಿಗೆ ನಾಯಕನನ್ನಾಗಿ, ಅಧಿಪತಿಯನ್ನಾಗಿ.


ಆತ ಮೇಯಿಸುವನು ತನ್ನ ಮಂದೆಯನ್ನು ಕುರುಬನ ಹಾಗೆ ಮರಿಗಳನ್ನು ಕೈಗೆ ಎತ್ತಿಕೊಳ್ಳುವನು, ಅಪ್ಪಿಕೊಳ್ಳುವನು ಎದೆಗೆ ನಡೆಸುವನು ಹಾಲೂಡಿಸುವ ಕುರಿಗಳನ್ನು ಮೆಲ್ಲಗೆ.


ನೀನು ಹೋಗಿ ಯಾರೊಬ್ಬಾಮನಿಗೆ ಇಸ್ರಯೇಲ್ ದೇವರಾದ ಸರ್ವೇಶ್ವರನ ಅಪ್ಪಣೆಯನ್ನು ತಿಳಿಸು. ಅವರು ಅವನಿಗೆ, ‘ನಾನು ನಿನ್ನನ್ನು ಜನಸಾಮಾನ್ಯರ ಮಧ್ಯದಿಂದ ಉನ್ನತ ಸ್ಥಾನಕ್ಕೆ ಏರಿಸಿದೆ; ನಿನ್ನನ್ನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನನ್ನಾಗಿ ಮಾಡಿದೆ.


ಆದುದರಿಂದ ಅದನ್ನು ಆಳುವುದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸಿರಿ. ಈ ಮಹಾಜನಾಂಗವನ್ನು ಆಳಲು ಯಾರೂ ಸಮರ್ಥರಲ್ಲ,” ಎಂದು ಬೇಡಿಕೊಂಡನು.


ಅವನನ್ನು ತನ್ನ ಸಾನ್ನಿಧ್ಯ ಸೇವೆಯಿಂದ ತೆಗೆದು ಸೈನ್ಯದ ಒಬ್ಬ ಸಹಸ್ರಾಧಿಪತಿಯನ್ನಾಗಿ ನೇಮಿಸಿದನು. ದಾವೀದನು ದಳಪತಿಯಾಗಿ ಯುದ್ಧಕ್ಕೆ ಹೋಗುತ್ತಾ ಬರುತ್ತಾ ಇದ್ದನು.


ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕಿಸಿದನು. ಕೂಡಲೆ ಸರ್ವೇಶ್ವರನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಾಕ್ಕೆ ಹೊರಟುಹೋದನು.


ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು.


ಆದುದರಿಂದ ಅವರ ಕೆಲಸಕಾರ್ಯಗಳನ್ನು ನಿರ್ವಹಿಸುವುದಕ್ಕೂ ಅವರನ್ನು ಮುನ್ನಡೆಸುವುದಕ್ಕೂ ಹಿಂದಕ್ಕೆ ಕರೆದುತರುವುದಕ್ಕೂ ಒಬ್ಬ ನಾಯಕನನ್ನು ನೇಮಿಸಿ,” ಎಂದು ಮನವಿಮಾಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು