1 ಪೂರ್ವಕಾಲ ವೃತ್ತಾಂತ 11:22 - ಕನ್ನಡ ಸತ್ಯವೇದವು C.L. Bible (BSI)22 ಕಬ್ಜಯೇಲಿನ ಯೆಹೋಯಾದನ ಮಗ ಬೇನಾಯನು ಪ್ರಖ್ಯಾತಿ ಪಡೆದ ಸೈನಿಕನಾಗಿದ್ದನು. ಅವನು ಅನೇಕ ಶೂರಕೃತ್ಯಗಳನ್ನೆಸಗಿದನು: ಮೋವಾಬ್ಯರ ಇಬ್ಬರು ಬಲಶಾಲಿ ಯುದ್ಧವೀರರನ್ನು ಕೊಂದದ್ದೂ ಈ ಕೃತ್ಯಗಳಲ್ಲಿ ಒಂದಾಗಿದೆ. ಒಮ್ಮೆ ಚಳಿಗಾಲದಲ್ಲಿ ತಗ್ಗುಪ್ರದೇಶದಲ್ಲಿ ಹೋಗಿ ಒಂದು ಸಿಂಹವನ್ನು ಕೊಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅನೇಕ ಶೂರಕೃತ್ಯಗಳನ್ನು ನಡಿಸಿದ ಕಬ್ಜಯೇಲನವನಾದ ಪರಾಕ್ರಮಶಾಲಿಯ ಮೊಮ್ಮಗನೂ, ಯೆಹೋಯಾದನ ಮಗನೂ ಆದ ಬೆನಾಯನು ಇನ್ನೊಬ್ಬನು. ಇವನು ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇನ್ನೂರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು, ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅನೇಕ ಶೂರಕೃತ್ಯಗಳನ್ನು ನಡಿಸಿದ ಕಬ್ಜಯೇಲಿನವನಾದ ಪರಾಕ್ರಮಶಾಲಿಯ ಮೊಮ್ಮಗನೂ ಯೆಹೋಯಾದನ ಮಗನೂ ಆದ ಬೆನಾಯನು ಇನ್ನೊಬ್ಬನು. ಇವನು ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಬೆನಾಯನು ಯೆಹೋಯಾದನ ಮಗ. ಇವನು ಕಬ್ಜಯೇಲಿನಿಂದ ಬಂದವನು. ಇವನು ತುಂಬಾ ಶಕ್ತಿಶಾಲಿಯಾಗಿದ್ದನು. ಮೋವಾಬ್ಯರಲ್ಲಿ ಹೆಸರುವಾಸಿಯಾದ ಇಬ್ಬರು ಪರಾಕ್ರಮಶಾಲಿಗಳನ್ನು ಇವನು ಕೊಂದನು. ಒಂದು ದಿವಸ ಹಿಮ ಸುರಿಯುತ್ತಿರುವಾಗಲೇ ಗುಂಡಿಯೊಳಗೆ ಬಿದ್ದಿದ್ದ ಸಿಂಹವನ್ನು ಒಬ್ಬನೇ ಕೊಂದುಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಕಬ್ಜಯೇಲನ ಪರಾಕ್ರಮಶಾಲಿಯ ಮೊಮ್ಮಗನೂ ಯೆಹೋಯಾದಾವನ ಮಗನೂ ಆದ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದನು; ಅವನು ಬಲಶಾಲಿಯಾದ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು. ಅಧ್ಯಾಯವನ್ನು ನೋಡಿ |