Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:9 - ಕನ್ನಡ ಸತ್ಯವೇದವು C.L. Bible (BSI)

9 ಸರ್ವಶಕ್ತ ಸರ್ವೇಶ್ವರಸ್ವಾಮಿ ದಾವೀದನೊಂದಿಗೆ ಇದ್ದುದರಿಂದ ಅವನು ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸೇನಾಧೀಶ್ವರನಾದ ಯೆಹೋವನು ದಾವೀದನ ಸಂಗಡ ಇದ್ದುದರಿಂದ ಅವನು ಅಭಿವೃದ್ಧಿಯಾಗುತ್ತಾ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಸೈನ್ಯಾಧೀಶ್ವರನಾದ ಯೆಹೋವನು ದಾವೀದನ ಸಂಗಡ ಇದ್ದದರಿಂದ ಅವನು ಅಭಿವೃದ್ಧಿಯಾಗುತ್ತಾ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದಾವೀದನು ದಿನದಿಂದ ದಿನಕ್ಕೆ ಬಲಶಾಲಿಯಾದನು. ಸರ್ವಶಕ್ತನಾದ ದೇವರು ಅವನೊಂದಿಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಹೀಗೆಯೇ ಸೇನಾಧೀಶ್ವರ ಯೆಹೋವ ದೇವರು ದಾವೀದನ ಸಂಗಡ ಇದ್ದುದರಿಂದ ಅವನು ದಿನದಿನಕ್ಕೆ ಬಲಗೊಳ್ಳುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:9
13 ತಿಳಿವುಗಳ ಹೋಲಿಕೆ  

ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಬಹುದಿನಗಳವರೆಗೆ ಯುದ್ಧ ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಸೌಲನ ವಂಶ ದುರ್ಬಲವಾಗುತ್ತಾ ಬಂದಿತು.


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


ಸರ್ವೇಶ್ವರ ಇಂತೆನ್ನುತ್ತಾರೆ : “ಹುಳುವಿನಂತಿರುವ ಯಕೋಬೇ, ಇಸ್ರಯೇಲಿನ ಜನತೆಯೇ, ಭಯಪಡಬೇಡ, ನಾನೇ ನಿನಗೆ ಸಹಾಯಕ ಇಸ್ರಯೇಲಿನ ಪರಮಪಾವನ ಸ್ವಾಮಿಯೇ ನಿನಗೆ ವಿಮೋಚಕ.


ಆದುದರಿಂದ ಸಕಲ ಸಂಸ್ಥಾನಾಧಿಕಾರಿಗಳೂ ಉಪರಾಜರೂ ದೇಶಾಧಿಪತಿಗಳೂ ಮತ್ತು ಇತರ ರಾಜಸೇವಕರೂ ಅವನಿಗೆ ಭಯಪಟ್ಟು ಯೆಹೂದ್ಯರಿಗೆ ನೆರವಾದರು.


ಎಲ್ಲಾಜಾರನ ಮಗ ಫೀನೆಹಾಸ ದ್ವಾರಪಾಲಕರ ಮೇಲ್ವಿಚಾರಕನಾಗಿದ್ದನು. ಸರ್ವೇಶ್ವರನ ಆಶೀರ್ವಾದ ಅವನ ಮೇಲಿತ್ತು.


ಸೇನಾಧೀಶ್ವರ ಹಾಗು ಸರ್ವೇಶ್ವರರಾದ ದೇವರು ಅವನೊಂದಿಗೆ ಇದ್ದರು. ಆದ್ದರಿಂದ ಅವನು ಅಭಿವೃದ್ಧಿಹೊಂದುತ್ತಾ ಬಂದನು.


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದೇವರು II


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದುರ್ಗವು II


ಸನ್ಮಾರ್ಗದಲ್ಲಿ ಮುಂದುವರೆವವನು ಸಜ್ಜನನು ಬಲಗೊಳ್ಳುತ್ತಲೇ ಇರುವನು ಶುದ್ಧಹಸ್ತನು.


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಗುಡ್ಡದ ಪೂರ್ವದಿಕ್ಕಿನ ಸ್ಥಳವನ್ನು ಮಟ್ಟಮಾಡಿ ಪಟ್ಟಣವನ್ನು ಪುನಃ ಕಟ್ಟಿದನು. ಯೋವಾಬನು ಪಟ್ಟಣದ ಉಳಿದ ಭಾಗವನ್ನು ಜೀರ್ಣೋದ್ಧಾರ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು