Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 12:17 - ಕನ್ನಡ ಸತ್ಯವೇದವು C.L. Bible (BSI)

17 ದಾವೀದನು ಅವರನ್ನು ಎದುರುಗೊಂಡು “ಸ್ನೇಹಿತರಂತೆ ನನಗೆ ಸಹಾಯ ಮಾಡಲು ಬಂದಿದ್ದರೆ ನಿಮಗೆ ಇಲ್ಲಿ ಸ್ವಾಗತ. ನಮ್ಮೊಂದಿಗೆ ಸೇರಿಕೊಳ್ಳಿ, ನಾನು ನಿಮಗೆ ಯಾವ ತೊಂದರೆಯನ್ನು ಕೊಟ್ಟಿಲ್ಲ. ಆದರೆ ನೀವು ನನ್ನನ್ನು ನನ್ನ ವೈರಿಗಳಿಗೆ ಹಿಡಿದುಕೊಡಲು ಬಂದಿದ್ದರೆ ನಮ್ಮ ಪಿತೃಗಳ ದೇವರು ಅದನ್ನು ಬಲ್ಲವರಾಗಿದ್ದು ನಿಮ್ಮನ್ನು ದಂಡಿಸುವರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ನೀವು ಸ್ನೇಹಭಾವದಿಂದ ಸಹಾಯ ಮಾಡುವುದಕ್ಕಾಗಿ ನನ್ನ ಬಳಿಗೆ ಬಂದಿರುವುದಾದರೆ ನಿಮ್ಮೊಡನೆ ನನಗೆ ಐಕ್ಯಭಾವವಿರುವುದು. ನಿರಪರಾಧಿಯಾದ ನನ್ನನ್ನು ನನ್ನ ವಿರೋಧಿಗಳಿಗೆ ಒಪ್ಪಿಸುವ ಕುಯುಕ್ತಿಯಿಂದ ಬಂದಿರುವುದಾದರೆ ನಮ್ಮ ಪೂರ್ವಿಕರ ದೇವರು ನಿಮ್ಮನ್ನು ನೋಡಿ ದಂಡಿಸಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನೀವು ಸ್ನೇಹಭಾವದಿಂದ ಸಹಾಯಮಾಡುವದಕ್ಕಾಗಿ ನನ್ನ ಬಳಿಗೆ ಬಂದಿರುವದಾದರೆ ನಿಮ್ಮೊಡನೆ ನನಗೆ ಐಕ್ಯಭಾವವಿರುವದು; ನಿರಪರಾಧಿಯಾದ ನನ್ನನ್ನು ನನ್ನ ವಿರೋಧಿಗಳಿಗೆ ಒಪ್ಪಿಸುವ ಕುಯುಕ್ತಿಯಿಂದ ಬಂದಿರುವದಾದರೆ ನಮ್ಮ ಪಿತೃಗಳ ದೇವರು ನಿಮ್ಮನ್ನು ನೋಡಿ ದಂಡಿಸಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅವರನ್ನು ಎದುರುಗೊಳ್ಳಲು ದಾವೀದನು ಹೊರಬಂದು, “ನೀವು ಸಮಾಧಾನದಿಂದ ನನಗೆ ಸಹಾಯ ಮಾಡಲು ಬಂದಿದ್ದರೆ ನಿಮ್ಮನ್ನು ಸ್ವಾಗತಿಸುತ್ತೇನೆ. ಆದರೆ ನೀವು ನನ್ನ ಮೇಲೆ ಹೊಂಚುಹಾಕಲು ಬಂದಿರುವುದಾದರೆ ನಾನು ನಿರಪರಾಧಿಯಾಗಿರುವ ಕಾರಣ ನಮ್ಮ ಪೂರ್ವಿಕರ ದೇವರು ನಿಮ್ಮನ್ನು ಶಿಕ್ಷಿಸಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ದಾವೀದನು ಅವರನ್ನು ಎದುರುಗೊಳ್ಳಲು ಹೊರಟುಹೋಗಿ ಅವರಿಗೆ ಉತ್ತರವಾಗಿ, “ನನಗೆ ಸಹಾಯವಾಗಿ ನನ್ನ ಬಳಿಗೆ ನೀವು ಸಮಾಧಾನವಾಗಿ ಬಂದರೆ, ನನ್ನ ಹೃದಯವು ನಿಮ್ಮ ಸಂಗಡ ಒಂದಾಗಿರುವುದು. ಆದರೆ ದೋಷವು ನನ್ನ ಕೈಯಲ್ಲಿ ಇಲ್ಲದಿರುವಾಗ, ನೀವು ನನ್ನ ವೈರಿಗಳಿಗೆ ನನ್ನನ್ನು ಮೋಸದಿಂದ ಒಪ್ಪಿಸಿಕೊಡಲು ಬಂದರೆ, ನಮ್ಮ ಪಿತೃಗಳ ದೇವರು ನೋಡಿ ನ್ಯಾಯತೀರಿಸಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 12:17
24 ತಿಳಿವುಗಳ ಹೋಲಿಕೆ  

ಪ್ರಧಾನ ದೇವದೂತ ಮಿಕಾಯೇಲನೂ ಇಂಥ ದೂಷಣೆಯನ್ನು ಆಡಲಿಲ್ಲ. ಮೋಶೆಯ ಪಾರ್ಥಿವ ಶರೀರದ ವಿಷಯದಲ್ಲಿ ಸೈತಾನನೊಡನೆ ವಾಗ್ವಾದ ಮಾಡಿದಾಗಲೂ ಅಂಥ ದೂಷಣೆಯನ್ನು ಆಡಲು ಧೈರ್ಯಗೊಳ್ಳದೆ, “ಸರ್ವೇಶ್ವರ ನಿನ್ನನ್ನು ಖಂಡಿಸಲಿ,” ಎಂದಷ್ಟೇ ಹೇಳಿದನು.


ಅವರು, ಅವಮಾನಪಡಿಸಿದವರನ್ನು ಪ್ರತಿಯಾಗಿ ಅವಮಾನಪಡಿಸಲಿಲ್ಲ. ಅವರು ಯಾತನೆಯನ್ನು ಅನುಭವಿಸುವಾಗಲೂ ಯಾರಿಗೂ ಬೆದರಿಕೆ ಹಾಕಲಿಲ್ಲ. ಬದಲಿಗೆ, ಸತ್ಯಸ್ವರೂಪರೂ ನ್ಯಾಯಾಧಿಪತಿಯೂ ಆದ ದೇವರಿಗೆ ತಮ್ಮನ್ನೇ ಒಪ್ಪಿಸಿಕೊಂಡರು.


ಅದೇನೇ ಇರಲಿ, ನೀವು ಮಾತ್ರ ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯೋಗ್ಯರಾಗಿ ನಡೆದುಕೊಳ್ಳಿರಿ. ನಾನು ನಿಮ್ಮಲ್ಲಿಗೆ ಬಂದರೂ ಸರಿ, ಬಾರದಿದ್ದರೂ ಸರಿ, ಇದು ಮುಖ್ಯವಲ್ಲ. ಶುಭಸಂದೇಶವು ನೀಡುವ ವಿಶ್ವಾಸಕ್ಕಾಗಿ ನೀವು ಒಮ್ಮನಸ್ಸಿನಿಂದ, ಕೆಚ್ಚಿನಿಂದ ಹೋರಾಡುವುದೇ ಮುಖ್ಯ. ಇದು ನನಗೆ ತಿಳಿದುಬಂದರೆ ಅಷ್ಟೇ ಸಾಕು.


ಕೊನೆಯದಾಗಿ ಪ್ರಿಯ ಸಹೋದರರೇ, ಸಂತೋಷದಿಂದಿರಿ, ಪರಿಪೂರ್ಣರಾಗಲು ಪ್ರಯತ್ನಿಸಿರಿ. ನನ್ನ ಬುದ್ಧಿಮಾತುಗಳಿಗೆ ಕಿವಿಗೊಡಿ; ಒಮ್ಮನಸ್ಸಿನಿಂದ ಬಾಳಿರಿ; ಸಮಾಧಾನದಿಂದ ಜೀವಿಸಿರಿ; ಆಗ ಪ್ರೀತಿ ಮತ್ತು ಶಾಂತಿ ಸ್ವರೂಪರಾದ ದೇವರು ನಿಮ್ಮೊಡನೆ ಇರುತ್ತಾರೆ.


ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾನು ಕೇಳಿಕೊಳ್ಳುವುದೇನೆಂದರೆ: ವಾದವಿವಾದವಿಲ್ಲದೆ, ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕಮತ್ಯದಿಂದ ಬಾಳಿರಿ.


ಭಕ್ತವಿಶ್ವಾಸಿಗಳು ಒಗ್ಗಟ್ಟಿನಿಂದಲೂ ಒಮ್ಮನಸ್ಸಿನಿಂದಲೂ ಬಾಳುತ್ತಿದ್ದರು. ಯಾರೂ ತಮ್ಮ ಸೊತ್ತನ್ನು ತನ್ನದೇ ಎಂದು ಭಾವಿಸದೆ ಹುದುವಾಗಿ ಹಂಚಿಕೊಳ್ಳುತ್ತಿದ್ದರು.


ಆಗ ಸರ್ವೇಶ್ವರಸ್ವಾಮಿಯ ದೂತನು ಸೈತಾನನಿಗೆ: “ಸೈತಾನನೇ, ಸರ್ವೇಶ್ವರ ನಿನ್ನನ್ನು ಖಂಡಿಸಲಿ, ಜೆರುಸಲೇಮನ್ನು ಆರಿಸಿಕೊಂಡ ಸರ್ವೇಶ್ವರ ನಿನ್ನನ್ನು ಖಂಡಿಸಲಿ, ಈತ ಒಲೆಯಂತೆ ಹಿರಿದ ಬೆಂಕಿಕೊಳ್ಳಿ” ಎಂದನು.


ಅವರಿಗೆ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು. ಇದರಿಂದ ಅವರು ತಮ್ಮ ಹಿತಕ್ಕಾಗಿಯೂ ತಮ್ಮ ಅನಂತರ ತಮ್ಮ ಸಂತಾನದ ಹಿತಕ್ಕಾಗಿಯೂ ನನ್ನಲ್ಲಿ ಸದಾ ಭಯಭಕ್ತಿ ಉಳ್ಳವರಾಗಿರುವರು.


ನಿನ್ನ ಸತ್ಯಪಥದಲಿ ನಾ ನಡೆವಂತೆ I ಬೋಧಿಸೆನಗೆ ಪ್ರಭು, ನಿನ್ನ ಮಾರ್ಗವನು II ನಿನ್ನ ನಾಮದಲಿ ಭಯಭಕ್ತಿಯಿರುವಂತೆ I ಅನುಗ್ರಹಿಸೆನಗೆ ನೀ ಏಕಾಗ್ರತೆಯನು II


ಹೇ ಪ್ರಭು, ಎಚ್ಚರಗೊಳ್ಳು : ನ್ಯಾಯವನು ದೇವಾ, ನಿರ್ಣಯಿಸು I ಕೋಪದಿಂದೆದ್ದು ವಿರೋಧಿಗಳ ಕ್ರೋಧವನು ಭಂಗಪಡಿಸು II


ಯೇಹುವು ಅಲ್ಲಿಂದ ಮುಂದೆ ಹೋಗುತ್ತಿರುವಾಗ ತನ್ನನ್ನು ಎದುರುಗೊಳ್ಳುವುದಕ್ಕಾಗಿ ಬಂದ ರೇಕಾಬನ ಮಗನಾದ ಯೆಹೋನಾದಾಬನನ್ನು ಕಂಡು ವಂದಿಸಿದನು. “ನಿನ್ನ ವಿಷಯದಲ್ಲಿ ನನ್ನ ಮನಸ್ಸು ಯಥಾರ್ಥವಾಗಿರುವಂತೆ ನಿನ್ನ ಮನಸ್ಸು ಯಥಾರ್ಥವಾಗಿ ಇರುತ್ತದೋ?’ ಎಂದು ಕೇಳಿದನು. ಅವನು, “ಹೌದು,” ಎಂದು ಉತ್ತರಕೊಟ್ಟನು. ಆಗ ಯೇಹುವು, “ಹಾಗಾದರೆ ನಿನ್ನ ಕೈಕೊಡು,” ಎನ್ನಲು ಅವನು ಕೈಕೊಟ್ಟನು. ಯೇಹುವು ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.


ಯೋರಾಮನು ಅವನನ್ನು ಕಂಡ ಕೂಡಲೆ, “ಯೇಹುವೇ, ಶುಭವೋ?’ ಎಂದು ಕೇಳಿದನು. ಅದಕ್ಕೆ ಅವನು, “ನಿನ್ನ ತಾಯಿಯ ದೇವದ್ರೋಹವೂ ಮಂತ್ರತಂತ್ರವೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವುದು?” ಎಂದು ಉತ್ತರಕೊಟ್ಟನು.


ಹಗ್ಗೀತಳ ಮಗ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಯ ದರ್ಶನಕ್ಕೆ ಬಂದನು. ಆಕೆ ಅವನನ್ನು, “ನೀನು ಸಮಾಧಾನದಿಂದ ಬಂದಿರುತ್ತೀಯೋ?” ಎಂದು ಕೇಳಿದಳು. ಅವನು, “ಹೌದು, ಸಮಾಧಾನದಿಂದ ಬಂದಿದ್ದೇನೆ,” ಎಂದನು.


ಯೋನಾತಾನನು ದಾವೀದನನ್ನು ತನ್ನ ಪ್ರಾಣಸ್ನೇಹಿತನನ್ನಾಗಿ ಪ್ರೀತಿಸುತ್ತಿದ್ದುದರಿಂದ ಅವನೊಂದಿಗೆ ಒಂದು ಒಪ್ಪಂದಮಾಡಿಕೊಂಡನು.


ದಾವೀದನ ಮತ್ತು ಸೌಲನ ಸಂಭಾಷಣೆ ಮುಗಿಯಿತು. ಇದಾದ ಕೂಡಲೆ ಯೋನಾತಾನನು ಹಾಗು ದಾವೀದನು ಪ್ರಾಣ ಗೆಳೆಯರಾದರು. ಯೋನಾತಾನನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸತೊಡಗಿದನು.


ಸರ್ವೇಶ್ವರ ಹೇಳಿದಂತೆಯೇ ಸಮುವೇಲನು ಬೆತ್ಲೆಹೇಮಿಗೆ ಹೋದನು. ಆ ಊರಿನ ಹಿರಿಯರು ನಡುನಡುಗುತ್ತಾ ಬಂದು, ಅವನನ್ನು ಎದುರುಗೊಂಡು, “ನಿನ್ನ ಆಗಮನ ನಮಗೆ ಶುಭಕರವಾಗಿದೆಯೇ?’ ಎಂದು ಕೇಳಿದರು. ಅವನು,


ಅಬ್ರಹಾಮನ ದೇವರು. ನಾಹೋರನ ದೇವರು, ಅವರ ತಂದೆಗಳ ದೇವರು ನಿನಗೂ ನನಗೂ ನ್ಯಾಯ ತೀರಿಸಲಿ,” ಎಂದನು. ಅದೇ ಮೇರೆಗೆ ಯಕೋಬನು, ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಆರಾಧಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದನು.


ನನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ಆಗಿರುವಂಥವರು ನನ್ನ ಕಡೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀವು ನನ್ನನ್ನು ಬರಿಗೈಯಾಗಿ ಕಳುಹಿಸುತ್ತಿದ್ದಿರಿ. ದೇವರು ನನ್ನ ಕಷ್ಟದುಃಖವನ್ನೂ ನಾನು ಪಟ್ಟ ಪ್ರಯಾಸವನ್ನೂ ಗಮನಿಸಿದ್ದಾರೆ. ಆದ್ದರಿಂದಲೇ ನಿನ್ನೆಯ ರಾತ್ರಿ ನಿಮಗೆ ಎಚ್ಚರಿಕೆ ನೀಡಿದ್ದಾರೆ,” ಎಂದನು.


ಒಮ್ಮೆ ಬೆನ್ಯಾಮೀನ್ ಹಾಗು ಯೂದ ಗೋತ್ರದ ಜನರ ಒಂದು ಗುಂಪು ದಾವೀದನು ವಾಸವಾಗಿದ್ದ ಕೋಟೆಯಬಳಿಗೆ ಹೋಯಿತು.


ಆಗ ‘ಮೂವತ್ತು ಪ್ರಮುಖ’ರ ಪಡೆಯಲ್ಲಿ ಮುಖ್ಯಸ್ಥನಾದ ಅಮಾಸೈ ಆತ್ಮಾವೇಶವುಳ್ಳವನಾಗಿ ಹೀಗೆ ಕೂಗಿ ಹೇಳಿದನು: “ಜೆಸ್ಸೆಯ ಮಗ ದಾವೀದನಿಗೆ ಶುಭವಾಗಲಿ! ನಾವೆಲ್ಲರು ನಿಮ್ಮವರು; ನಿಮಗೂ ನಿಮ್ಮ ಸಹಾಯಕರಿಗೂ ಶುಭವಾಗಲಿ! ದೇವರು ನಿಮಗೆ ಜಯಪ್ರದರಾಗಿದ್ದಾರೆ.” ದಾವೀದ ಅವರನ್ನು ಸ್ವಾಗತಿಸಿ ತನ್ನ ಸೈನ್ಯದಲ್ಲಿ ಮುಖ್ಯಾಧಿಕಾರಿಗಳನ್ನಾಗಿ ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು