Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 12:18 - ಕನ್ನಡ ಸತ್ಯವೇದವು C.L. Bible (BSI)

18 ಆಗ ‘ಮೂವತ್ತು ಪ್ರಮುಖ’ರ ಪಡೆಯಲ್ಲಿ ಮುಖ್ಯಸ್ಥನಾದ ಅಮಾಸೈ ಆತ್ಮಾವೇಶವುಳ್ಳವನಾಗಿ ಹೀಗೆ ಕೂಗಿ ಹೇಳಿದನು: “ಜೆಸ್ಸೆಯ ಮಗ ದಾವೀದನಿಗೆ ಶುಭವಾಗಲಿ! ನಾವೆಲ್ಲರು ನಿಮ್ಮವರು; ನಿಮಗೂ ನಿಮ್ಮ ಸಹಾಯಕರಿಗೂ ಶುಭವಾಗಲಿ! ದೇವರು ನಿಮಗೆ ಜಯಪ್ರದರಾಗಿದ್ದಾರೆ.” ದಾವೀದ ಅವರನ್ನು ಸ್ವಾಗತಿಸಿ ತನ್ನ ಸೈನ್ಯದಲ್ಲಿ ಮುಖ್ಯಾಧಿಕಾರಿಗಳನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ಮೂವತ್ತು ಜನರಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ, “ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯವನ್ನು ಕೊಡುವವನಾಗಿದ್ದಾನೆ” ಎಂದು ಹೇಳಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಗ ಮೂವತ್ತು ಮಂದಿಯಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ - ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯಪ್ರಧನಾಗಿದ್ದಾನೆ ಎಂದು ನುಡಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಮೂವತ್ತು ಮಂದಿ ಶೂರರ ನಾಯಕನಾದ ಅಮಾಸೈಯು ಆತ್ಮನಿಂದ ತುಂಬಿದವನಾಗಿ ಹೇಳಿದ್ದೇನೆಂದರೆ: “ದಾವೀದನೇ, ನಾವು ನಿನ್ನವರು. ಇಷಯನ ಮಗನೇ, ನಾವು ನಿನಗೆ ಸೇರಿದವರು; ನಿನಗೆ ಸಮಾಧಾನ ಕೋರುವವರು; ನಿನಗೆ ಸಹಾಯ ಮಾಡುವವರಿಗೆ ಸಮಾಧಾನ ಕೋರುವೆವು; ಯಾಕೆಂದರೆ ನಿನ್ನ ದೇವರು ನಿನಗೆ ಸಹಾಯಮಾಡುತ್ತಿದ್ದಾನೆ.” ದಾವೀದನು ಇವರನ್ನು ಸ್ವಾಗತಿಸಿ ತನ್ನ ಸೈನ್ಯಾಧಿಪತಿಗಳನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಆತ್ಮವು ಮೂವತ್ತು ಮಂದಿ ಅಧಿಪತಿಗಳ ಮುಖ್ಯಸ್ಥನಾದ ಅಮಾಸೈಯ ಮೇಲೆ ಬಂತು. ಅವನು ಹೀಗೆ ಹೇಳಿದನು, “ದಾವೀದನೇ, ನಾವು ನಿನ್ನವರು. ಇಷಯನ ಮಗನೇ, ನಾವು ನಿನ್ನ ಜೊತೆಯಿದ್ದೇವೆ; ಜಯವು ನಿನ್ನದೇ, ನಿನಗೆ ಸಹಾಯ ಮಾಡುವವರಿಗೆ ಜಯವು; ಏಕೆಂದರೆ ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾರೆ.” ಆಗ ದಾವೀದನು ಅವರನ್ನು ಅಂಗೀಕರಿಸಿ, ಅವರನ್ನು ದಂಡಿನ ಅಧಿಪತಿಗಳಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 12:18
31 ತಿಳಿವುಗಳ ಹೋಲಿಕೆ  

ಆಗ ಗಿದ್ಯೋನನು ಸರ್ವೇಶ್ವರಾತ್ಮಭರಿತನಾಗಿ ಕೊಂಬನ್ನು ಊದಲು ಅಬೀಯೆಜೆರನ ಗೋತ್ರದವರು ಬಂದು ಅವನನ್ನು ಹಿಂಬಾಲಿಸಿದರು.


ಸರ್ವೇಶ್ವರನ ಆತ್ಮ ಅವನ ಮೇಲೆ ಬಂದುದರಿಂದ ಅವನು ಇಸ್ರಯೇಲರಿಗೆ ನ್ಯಾಯ ದೊರಕಿಸಲು ಯುದ್ಧಕ್ಕೆ ಹೊರಟನು. ಎರಡು ನದಿಗಳ ಮಧ್ಯೆಯಿರುವ ಅರಾಮ್ ರಾಜ್ಯದ ಅರಸ ಕೂಷನ್ ರಿಷಾತಯಿಮನನ್ನು ಸರ್ವೇಶ್ವರ ಆತನ ಕೈಗೊಪ್ಪಿಸಿದ್ದರಿಂದ ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು.


ಅವನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೇನಾಪತಿಯನ್ನಾಗಿ ನೇಮಿಸಿದನು. ಇಸ್ರಯೇಲನಾದ ಇತ್ರನು ನಾಹಾಷನ ಮಗಳೂ ಯೋವಾಬನ ತಾಯಿಯಾದ ಚೆರೂಯಳ ತಂಗಿಯೂ ಆದ ಅಬೀಗಲ್ ಎಂಬುವಳನ್ನು ಕೂಡಿದ್ದರಿಂದ ಹುಟ್ಟಿದವನು ಈ ಅಮಾಸನು.


ಅದಕ್ಕೆ ರೂತಳು: “ನಿಮ್ಮನ್ನು ಬಿಟ್ಟು ಹೋಗುವಂತೆ ಒತ್ತಾಯಪಡಿಸಬೇಡಿ. ನೀವು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುತ್ತೇನೆ. ನೀವು ಎಲ್ಲಿ ವಾಸಿಸಿದರೂ ನಾನು ಅಲ್ಲೇ ವಾಸಿಸುತ್ತೇನೆ.


ಈ ನಿಯಮವನ್ನು ಅನುಸರಿಸುವ ಎಲ್ಲರಿಗೂ, ಅಂದರೆ ನಿಜ ಇಸ್ರಯೇಲರಾದ ದೇವಜನರೆಲ್ಲರಿಗೂ ಶಾಂತಿಸಮಾಧಾನವೂ ಕೃಪಾಶೀರ್ವಾದವೂ ಲಭಿಸಲಿ!


ನನ್ನ ಪರವಾಗಿ ಇಲ್ಲದವನು ನನಗೆ ವಿರೋಧಿಯೇ ಸರಿ. ನನ್ನೊಡನೆ ಶೇಖರಿಸದವನು ಚದರಿಸುತ್ತಾನೆ.


ಅವರು ನ್ಯಾಯನೀತಿಯನ್ನು ವಜ್ರಕವಚವನ್ನಾಗಿ ತೊಟ್ಟುಕೊಳ್ಳುವರು. ರಕ್ಷಣೆ ಎಂಬ ಶಿರಸ್ತ್ರಾಣವನ್ನು ಧರಿಸಕೊಳ್ಳುವರು. ಪ್ರತೀಕಾರವೆಂಬ ಉಡುಪನ್ನು ಉಟ್ಟುಕೊಳ್ಳುವರು. ಆಗ್ರಹ ಎಂಬ ನಿಲುವಂಗಿಯನ್ನು ಹಾಕಿಕೊಳ್ಳುವರು.


ಅವನ ಇನ್ನೊಬ್ಬ ಮಗಳು ಅಬೀಗೈಲಳು ಇಷ್ಮಾಯೇಲನ ವಂಶಜ ಯೆತೆರ್ ಎಂಬವನನ್ನು ವಿವಾಹವಾಗಿ ಅಮಾಸ ಎಂಬ ಮಗನನ್ನು ಪಡೆದಳು.


ಅನಂತರ ರಾಜಗೃಹಾಧಿಪತಿ, ಪುರಾಧಿಕಾರಿ, ಹಿರಿಯರು, ರಾಜಪುತ್ರಪಾಲಕರು ಇವರು ಎಲ್ಲರು ಕೂಡಿ ಯೇಹುವಿಗೆ, “ನಾವು ನಿಮ್ಮ ಆಜ್ಞಾಧಾರಕರಾದ ಸೇವಕರು, ನಾವಾಗಿ ನಮಗೊಬ್ಬ ಅರಸನನ್ನು ನೇಮಿಸಿಕೊಳ್ಳುವುದಿಲ್ಲ; ನಿಮ್ಮ ಚಿತ್ತವೇ ನೆರವೇರಲಿ,” ಎಂದು ಹೇಳಿಕಳುಹಿಸಿದರು.


ಅವನು ಕಣ್ಣೆತ್ತಿ ಕಿಟಕಿಯ ಕಡೆಗೆ ನೋಡಿ, “ಅಲ್ಲಿ ನನ್ನ ಪಕ್ಷದವರು ಯಾರು?” ಎಂದು ಕೂಗಿದನು. ಕೂಡಲೆ ಆ ಕಿಟಕಿಯಿಂದ ಇಬ್ಬರು ಮೂವರು ಕಂಚುಕಿಗಳು ಅವನ ಕಡೆಗೆ ನೋಡಿದರು.


ಆದರೆ ಅವನು ಇಸ್ರಯೇಲರನ್ನು ಬಿಟ್ಟಿಹಿಡಿಯಲಿಲ್ಲ; ಅವರನ್ನು ಸೈನಿಕರನ್ನಾಗಿ, ಪರಿವಾರದವರನ್ನಾಗಿ, ಅಧಿಪತಿಗಳನ್ನಾಗಿ, ಸರದಾರರನ್ನಾಗಿ, ಹಾಗೂ ರಥಾಶ್ವಬಲಗಳ ನಾಯಕರನ್ನಾಗಿ ನೇಮಿಸಿಕೊಂಡನು.


ಆ ದಿನದಲ್ಲಿ ವಿವಿಧ ಭಾಷೆಗಳನ್ನಾಡುವ ರಾಷ್ಟ್ರಗಳಿಂದ ಹತ್ತು ಹತ್ತು ಮಂದಿ ಬಂದು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವೂ ನಿಮ್ಮೊಂದಿಗೆ ಬರುತ್ತೇವೆ. ಏಕೆಂದರೆ ದೇವರು ನಿಮ್ಮೊಡನೆ ಇದ್ದಾರೆ ಎಂಬ ಸುದ್ದಿಯನ್ನು ಕೇಳಿದ್ದೇವೆ’ ಎಂದು ಹೇಳುವರು. ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.”


ಎಂಬುದಾಗಿ ತಿಳಿಸಿರಿ. ಅದಲ್ಲದೆ ಅಮಾಸನಿಗೆ, ‘ನೀನೂ ನನ್ನ ರಕ್ತಸಂಬಂಧಿಯಾಗಿದ್ದಿ; ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯಸೇನಾಪತಿಯನ್ನಾಗಿ ಮಾಡುತ್ತೇನೆ. ಹಾಗೆ ಮಾಡದಿದ್ದರೆ ಸರ್ವೇಶ್ವರ ನನಗೆ ಮಾಡಬೇಕಾದದ್ದನ್ನು ಮಾಡಲಿ,’ ಎಂಬುದಾಗಿಯೂ ತಿಳಿಸಿರಿ,” ಎಂದು ಹೇಳಿ ಕಳುಹಿಸಿದನು.


ಅದಕ್ಕೆ ಇತ್ತೈ, “ಸರ್ವೇಶ್ವರನಾಣೆ, ನನ್ನ ಒಡೆಯರಾದ ಅರಸರ ಜೀವದಾಣೆ, ಪ್ರಾಣಹೋದರೂ ಉಳಿದರೂ ನನ್ನ ಒಡೆಯರಾದ ಅರಸರಿರುವಲ್ಲಿಗೇ ಹೋಗುವೆನು,” ಎಂದು ಉತ್ತರಕೊಟ್ಟನು.


ಹಿಂದಿನ ದಿವಸಗಳಲ್ಲಿ, ಅಂದರೆ ಸೌಲನ ಆಳ್ವಿಕೆಯಲ್ಲಿ, ಇಸ್ರಯೇಲರ ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವರು ನೀವೇ. ನಿಮ್ಮನ್ನು ಕುರಿತು ಸರ್ವೇಶ್ವರಸ್ವಾಮಿ, ‘ನೀನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನೂ ಪಾಲಕನೂ ಆಗಿರುವೆ,’ ಎಂದು ವಾಗ್ದಾನಮಾಡಿದ್ದಾರೆ,” ಎಂದರು.


ಆಗ ಅವನು ತನ್ನ ಸುತ್ತಲೂ ನಿಂತಿದ್ದ ಪರಿವಾರದವರಿಗೆ, “ಬೆನ್ಯಾಮೀನನ ಕುಲಪುತ್ರರೇ ಕೇಳಿ; ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ಮಾಡುವುದೇಕೆ? ಜೆಸ್ಸೆಯನ ಮಗನು ನಿಮ್ಮೆಲ್ಲರಿಗೂ ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ಕೊಡುತ್ತಾನೆಯೇ? ಎಲ್ಲರನ್ನು ಸಹಸ್ರಾಧಿಪತಿಗಳನ್ನಾಗಲಿ, ಶತಾಧಿಪತಿಗಳನ್ನಾಗಲಿ ಮಾಡುತ್ತಾನೆಯೆ?


ಕೆಲವರನ್ನು ಸಹಸ್ರಾಧಿಪತಿಗಳನ್ನಾಗಿಯೂ ಕೆಲವರನ್ನು ಪಂಚಾಶದಾಧಿಪತಿಗಳನ್ನಾಗಿಯೂ ನೇಮಿಸುವನು. ಇನ್ನು ಕೆಲವರು ಅವನ ಭೂಮಿಯನ್ನು ಉಳುವವರೂ, ಪೈರನ್ನು ಕೊಯ್ಯುವವರೂ, ಯುದ್ಧಾಯುಧ, ರಥಸಾಮಗ್ರಿಗಳನ್ನು ಮಾಡುವವರೂ ಆಗಬೇಕು.


ಇದಲ್ಲದೆ, ಅವನು ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿರುವ ದಾನ್ ಕುಲದ ಪಾಳೆಯದಲ್ಲಿದ್ದಾಗ ಸರ್ವೇಶ್ವರನ ಆತ್ಮ ಅವನನ್ನು ಚೇತನಗೊಳಿಸತೊಡಗಿತು.


ಸರ್ವೇಶ್ವರ ಹೇಳಿದಂತೆಯೇ ಸಮುವೇಲನು ಬೆತ್ಲೆಹೇಮಿಗೆ ಹೋದನು. ಆ ಊರಿನ ಹಿರಿಯರು ನಡುನಡುಗುತ್ತಾ ಬಂದು, ಅವನನ್ನು ಎದುರುಗೊಂಡು, “ನಿನ್ನ ಆಗಮನ ನಮಗೆ ಶುಭಕರವಾಗಿದೆಯೇ?’ ಎಂದು ಕೇಳಿದರು. ಅವನು,


ಹಕ್ಮೋನ ಗೋತ್ರದ ಯಾಷೊಬ್ಬಾಮ ಮೊದಲನೆಯವನು. ಇವನು ‘ಮೂವರು ಪ್ರಮುಖ ವೀರರು’ ಎಂಬ ಪಡೆಯ ನಾಯಕ. ಇವನು ತನ್ನ ಈಟಿಯಿಂದ ಮುನ್ನೂರು ಜನರ ಮೇಲೆ ಹೋರಾಡಿ ಅವರೆಲ್ಲರನ್ನೂ ಒಂದೇ ಕಾಳಗದಲ್ಲಿ ಕೊಂದುಹಾಕಿದನು.


ದಾವೀದನು ಅವರನ್ನು ಎದುರುಗೊಂಡು “ಸ್ನೇಹಿತರಂತೆ ನನಗೆ ಸಹಾಯ ಮಾಡಲು ಬಂದಿದ್ದರೆ ನಿಮಗೆ ಇಲ್ಲಿ ಸ್ವಾಗತ. ನಮ್ಮೊಂದಿಗೆ ಸೇರಿಕೊಳ್ಳಿ, ನಾನು ನಿಮಗೆ ಯಾವ ತೊಂದರೆಯನ್ನು ಕೊಟ್ಟಿಲ್ಲ. ಆದರೆ ನೀವು ನನ್ನನ್ನು ನನ್ನ ವೈರಿಗಳಿಗೆ ಹಿಡಿದುಕೊಡಲು ಬಂದಿದ್ದರೆ ನಮ್ಮ ಪಿತೃಗಳ ದೇವರು ಅದನ್ನು ಬಲ್ಲವರಾಗಿದ್ದು ನಿಮ್ಮನ್ನು ದಂಡಿಸುವರು,” ಎಂದು ಹೇಳಿದನು.


ಹೌದು, ಶುಭಕರವಾಗಿದೆ; ಸರ್ವೇಶ್ವರನಿಗೆ ಬಲಿಯನ್ನರ್ಪಿಸುವುದಕ್ಕೆ ಬಂದಿದ್ದೇನೆ. ನೀವು ಶುದ್ಧರಾಗಿ ನನ್ನ ಜೊತೆಯಲ್ಲಿ ಬಲಿಯರ್ಪಣೆಗೆ ಬನ್ನಿ,” ಎಂದು ಹೇಳಿ ಜೆಸ್ಸೆಯನನ್ನೂ ಅವನ ಮಕ್ಕಳನ್ನೂ ಶುದ್ಧೀಕರಿಸಿ ಅವರನ್ನೂ ಬಲಿಯರ್ಪಣೆಗೆ ಆಮಂತ್ರಿಸಿದನು. ಅವರು ಬಂದರು.


ಸರ್ವೇಶ್ವರನೇ ನಮ್ಮ ಉಭಯರ ವ್ಯಾಜ್ಯವನ್ನು ತೀರಿಸಲಿ; ಅವರೇ ನನಗಾಗಿ ನಿಮಗೆ ಮುಯ್ಯಿಸಲ್ಲಿಸಲಿ; ನಾನಂತೂ ನಿಮಗೆ ವಿರೋಧವಾಗಿ ಕೈಯೆತ್ತುವುದಿಲ್ಲ.


ಇಸ್ರಯೇಲರಲ್ಲಿ ‘ಕೆಟ್ಟವರಿಂದಲೇ ಕೇಡು’ ಎಂಬುದಾಗಿ ಹಿರಿಯರಿಂದ ಬಂದ ಗಾದೆಯುಂಟು. ನಾನು ನಿಮಗೆ ವಿರೋಧವಾಗಿ ಕೈಯೆತ್ತುವುದಿಲ್ಲ.


ದಾವೀದನ ಮಾತುಗಳು ಮುಗಿದನಂತರ ಸೌಲನು, “ದಾವೀದನೇ, ನನ್ನ ಮಗನೇ, ಇದು ನಿಜವಾಗಿಯೂ ನಿನ್ನ ಸ್ವರವೇ?” ಎಂದು ಗಟ್ಟಿಯಾಗಿ ಅತ್ತನು.


ಯೇಹುವು ಅಲ್ಲಿಂದ ಮುಂದೆ ಹೋಗುತ್ತಿರುವಾಗ ತನ್ನನ್ನು ಎದುರುಗೊಳ್ಳುವುದಕ್ಕಾಗಿ ಬಂದ ರೇಕಾಬನ ಮಗನಾದ ಯೆಹೋನಾದಾಬನನ್ನು ಕಂಡು ವಂದಿಸಿದನು. “ನಿನ್ನ ವಿಷಯದಲ್ಲಿ ನನ್ನ ಮನಸ್ಸು ಯಥಾರ್ಥವಾಗಿರುವಂತೆ ನಿನ್ನ ಮನಸ್ಸು ಯಥಾರ್ಥವಾಗಿ ಇರುತ್ತದೋ?’ ಎಂದು ಕೇಳಿದನು. ಅವನು, “ಹೌದು,” ಎಂದು ಉತ್ತರಕೊಟ್ಟನು. ಆಗ ಯೇಹುವು, “ಹಾಗಾದರೆ ನಿನ್ನ ಕೈಕೊಡು,” ಎನ್ನಲು ಅವನು ಕೈಕೊಟ್ಟನು. ಯೇಹುವು ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು