1 ಪೂರ್ವಕಾಲ ವೃತ್ತಾಂತ 12:2 - ಕನ್ನಡ ಸತ್ಯವೇದವು C.L. Bible (BSI)2 ಸೌಲನೂ ಬೆನ್ಯಾಮೀನ್ ಗೋತ್ರಕ್ಕೆ ಸೇರಿದವನೇ. ದಾವೀದನನ್ನು ಹಿಂಬಾಲಿಸಿದವರು ಎಡಗೈಯಿಂದಾಗಲೀ ಬಲಗೈಯಿಂದಾಗಲೀ ಬಾಣಗಳನ್ನೆಸೆಯುವವರೂ ಕವಣೆಗಳಲ್ಲಿ ಕಲ್ಲುಗಳನ್ನಿಟ್ಟು ಎಸೆಯಲು ಶಕ್ತರೂ ಆಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಬಿಲ್ಲುಗಾರರೂ, ಎಡಗೈ ಬಲಗೈಗಳಿಂದ ಕಲ್ಲುಗಳನ್ನೂ ಮತ್ತು ಬಾಣಗಳನ್ನೂ ಎಸೆಯಬಲ್ಲವರೂ ಆಗಿದ್ದು ಯುದ್ಧದಲ್ಲಿ ಸಹಾಯಮಾಡುವುದಕ್ಕಾಗಿ ಅವನ ಬಳಿಗೆ ಬಂದ ಯುದ್ಧವೀರರ ಪಟ್ಟಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಬಿಲ್ಲುಗಾರರೂ ಎಡಬಲ ಕೈಗಳಿಂದ ಕಲ್ಲುಗಳನ್ನೂ ಬಾಣಗಳನ್ನೂ ಎಸೆಯಬಲ್ಲವರೂ ಆಗಿದ್ದು ಯುದ್ಧದಲ್ಲಿ ಸಹಾಯಮಾಡುವದಕ್ಕಾಗಿ ಅವನ ಬಳಿಗೆ ಬಂದ ರಣವೀರರ ಪಟ್ಟಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಇವರು ತಮ್ಮ ಎಡಗೈಯಿಂದಲೂ ಬಲಗೈಯಿಂದಲೂ ಬಿಲ್ಲುಗಳಿಂದ ಬಾಣಗಳನ್ನೂ ಕವಣೆಗಳಿಂದ ಕಲ್ಲುಗಳನ್ನೂ ಗುರಿಯಿಟ್ಟು ಹೊಡೆಯಬಲ್ಲವರಾಗಿದ್ದರು. ಇವರೆಲ್ಲರೂ ಬೆನ್ಯಾಮೀನನ ಕುಲದವನಾದ ಸೌಲನ ಕುಟುಂಬದವರು. ಅವರ ಹೆಸರುಗಳು ಇಂತಿವೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಎಡಬಲ ಕೈಗಳಿಂದ ಕಲ್ಲುಗಳನ್ನು ಎಸೆಯಲೂ, ಬಿಲ್ಲುಗಳಿಂದ ಬಾಣಗಳನ್ನು ಎಸೆಯಲೂ, ಇವರು ಬೆನ್ಯಾಮೀನನ ಗೋತ್ರದ ಸೌಲನ ಸಂಬಂಧಿಕರೂ ಆಗಿದ್ದರು. ಅಧ್ಯಾಯವನ್ನು ನೋಡಿ |
ಅವರು ಗಿಬೇಯದ ಶೇಮಾನ ಮಕ್ಕಳಾದ ಅಹೀಯೆಜೆರ್ ಮತ್ತು ಯೋವಾಷ ಎಂಬವರ ನೇತೃತ್ವದಲ್ಲಿ ಇದ್ದರು. ಆ ಸೈನಿಕರ ಹೆಸರುಗಳು :- ಯೇಜೀಯೇಲ್ ಮತ್ತು ಪೆಲೆಟ - ಅಜ್ಮಾವೆತನ ಮಕ್ಕಳು. ಯೇಹು ಮತ್ತು ಬೆರಾಕ - ಅನತೋತ ಊರಿನವರು. ಇಷ್ಮಾಯ - ಗಿಬ್ಯೋನಿನವನು; ಪ್ರಸಿದ್ಧನಾದ ಸೈನಿಕ, ‘ಮೂವತ್ತು ಪ್ರಮುಖರ’ ಪಟಾಲಮಿನಲ್ಲಿ ಒಬ್ಬ. ಯೆರೆಮೀಯ, ಯಹಜೀಯೇಲ್, ಯೋಹಾನಾನ್, ಯೋಜಾಬಾದ್ - ಗೆದೇರಾ ಊರಿನವರು. ಎಲ್ಲೂಜೈ, ಯೆರೀಮೋತ್, ಬೆಯಲ್ಯ, ಶೆಮರ್ಯ, ಶೆಫಟ್ಯ - ಇವರು ಹರೀಫ್ಯದವರು. ಎಲ್ಕಾನ, ಇಷೀಯ, ಅಜರೇಲ್, ಯೋವೆಜೆರ್ ಮತ್ತು ಯಾಷೊಬ್ಬಮ - ಇವರು ಕೋರಹನ ಗೋತ್ರದವರು. ಯೋವೇಲ ಮತ್ತು ಜೆಬದ್ಯ - ಗೆದೋರಿನ ಯೆರೋಹಾಮನ ಮಕ್ಕಳು.