Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 12:28 - ಕನ್ನಡ ಸತ್ಯವೇದವು C.L. Bible (BSI)

28 ಪರಾಕ್ರಮಶಾಲಿಯಾದ ಯುವಕ ಚಾದೋಕ ಮತ್ತು ಅವನ ಬಂಧುಗಳಾದ 22 ಮಂದಿ ಅಧಿಪತಿಗಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಪರಾಕ್ರಮಶಾಲಿಯಾದ ಚಾದೋಕನೆಂಬ ಯೌವನಸ್ಥನೂ, ಅವನ ಕುಟುಂಬದವರಾದ ಇಪ್ಪತ್ತೆರಡು ಅಧಿಪತಿಗಳೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಪರಾಕ್ರಮಶಾಲಿಯಾದ ಚಾದೋಕನೆಂಬ ಯೌವನಸ್ಥನೂ ಅವನ ಕುಟುಂಬದವರಾದ ಇಪ್ಪತ್ತೆರಡು ಮಂದಿ ಅಧಿಪತಿಗಳೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆ ಗುಂಪಿನಲ್ಲಿ ಚಾದೋಕನೂ ಇದ್ದನು. ಇವನೂ ಪರಾಕ್ರಮಶಾಲಿಯಾಗಿದ್ದನು. ಇವನು ತನ್ನ ಇಪ್ಪತ್ತೆರಡು ಮಂದಿ ಅಧಿಕಾರಿಗಳೊಂದಿಗೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಇದಲ್ಲದೆ ಬಲವುಳ್ಳ ಪರಾಕ್ರಮಶಾಲಿಯಾದ ಪ್ರಾಯಸ್ತನಾಗಿದ್ದ ಚಾದೋಕನೂ, ಅವನ ತಂದೆಯ ಮನೆಯಿಂದ 22 ಮಂದಿ ಪ್ರಧಾನರೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 12:28
11 ತಿಳಿವುಗಳ ಹೋಲಿಕೆ  

ಅಹೀಟೂಬನ ಮಗ ಚಾದೋಕನೂ ಹಾಗು ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು; ಸರಾಯನು ಅವನಿಗೆ ಲೇಖಕ ಆಗಿದ್ದನು.


“ಆದರೆ ಇಸ್ರಯೇಲರು ನನ್ನನ್ನು ತೊರೆದಾಗ ಲೇವಿಯರೂ ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದರು. ಆದ್ದರಿಂದ ಅವರು ನನ್ನ ಸೇವೆಮಾಡಲು ನನ್ನ ಸನ್ನಿಧಿಗೆ ಬರುವರು, ನನಗೆ ರಕ್ತಮೇದಸ್ಸುಗಳನ್ನು ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು; ಇದು ಸರ್ವೇಶ್ವರನಾದ ದೇವರ ನುಡಿ.


ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿ ಹಾಗು ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿ ನೇಮಿಸಿದನು.


ಆದರೆ ಯಾಜಕ ಚಾದೋಕ್, ಯೆಹೋಯಾದಾವನ ಮಗ ಬೆನಾಯ, ಪ್ರವಾದಿ ನಾತಾನ್, ಶಿಮ್ಮೀ, ರೇಗೀ ಎಂಬವರೂ ದಾವೀದನ ವಿಶೇಷ ಕಾವಲಾಳುಗಳೂ ಅದೋನಿಯನನ್ನು ಬೆಂಬಲಿಸಲಿಲ್ಲ.


ಯೆಹೋಯಾದಾವನೂ ಅವನ ಹಿಂಬಾಲಕರೂ ಆದ ಆರೋನನ ವಂಶಜರು -3,700 ಸೈನಿಕರು;


ದಾವೀದನು ಯಾಜಕರಾದ ಚಾದೋಕ್ ಹಾಗು ಎಬ್ಯಾತಾರರೆಂಬುವರನ್ನು ಕರೆಯಿಸಿದನು; ಅಂತೆಯೇ ಲೇವಿಯರಾದ ಊರಿಯೇಲ್, ಅಸಾಯ, ಯೋವೇಲ್, ಶೆಮಾಯ, ಎಲೀಯೋಲ್ ಮತ್ತು ಅಮ್ಮೀನಾದಾಬ್ ಎಂಬವರನ್ನೂ ಕರೆಯಿಸಿದನು.


ಕಬ್ಜಯೇಲಿನ ಯೆಹೋಯಾದನ ಮಗ ಬೇನಾಯನು ಪ್ರಖ್ಯಾತಿ ಪಡೆದ ಸೈನಿಕನಾಗಿದ್ದನು. ಅವನು ಅನೇಕ ಶೂರಕೃತ್ಯಗಳನ್ನೆಸಗಿದನು: ಮೋವಾಬ್ಯರ ಇಬ್ಬರು ಬಲಶಾಲಿ ಯುದ್ಧವೀರರನ್ನು ಕೊಂದದ್ದೂ ಈ ಕೃತ್ಯಗಳಲ್ಲಿ ಒಂದಾಗಿದೆ. ಒಮ್ಮೆ ಚಳಿಗಾಲದಲ್ಲಿ ತಗ್ಗುಪ್ರದೇಶದಲ್ಲಿ ಹೋಗಿ ಒಂದು ಸಿಂಹವನ್ನು ಕೊಂದನು.


‘ಮೂವತ್ತು ಪ್ರಮುಖ ವೀರರು’ ಪಡೆಯ ಒಬ್ಬನಾದ ಬೆನಾಯ ಮಾಡಿದ ಶೂರಕೃತ್ಯ ಇದು.


ಯಾಜಕನಾದ ಯೆಹೋಯಾದನ ಮಗನೂ ಪ್ರಧಾನನೂ ಆದ ಬೆನಾಯನು ಮೂರನೆಯ ವರ್ಗದ ನಾಯಕ. ಮೂರನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು