Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 12:3 - ಕನ್ನಡ ಸತ್ಯವೇದವು C.L. Bible (BSI)

3-7 ಅವರು ಗಿಬೇಯದ ಶೇಮಾನ ಮಕ್ಕಳಾದ ಅಹೀಯೆಜೆರ್ ಮತ್ತು ಯೋವಾಷ ಎಂಬವರ ನೇತೃತ್ವದಲ್ಲಿ ಇದ್ದರು. ಆ ಸೈನಿಕರ ಹೆಸರುಗಳು :- ಯೇಜೀಯೇಲ್ ಮತ್ತು ಪೆಲೆಟ - ಅಜ್ಮಾವೆತನ ಮಕ್ಕಳು. ಯೇಹು ಮತ್ತು ಬೆರಾಕ - ಅನತೋತ ಊರಿನವರು. ಇಷ್ಮಾಯ - ಗಿಬ್ಯೋನಿನವನು; ಪ್ರಸಿದ್ಧನಾದ ಸೈನಿಕ, ‘ಮೂವತ್ತು ಪ್ರಮುಖರ’ ಪಟಾಲಮಿನಲ್ಲಿ ಒಬ್ಬ. ಯೆರೆಮೀಯ, ಯಹಜೀಯೇಲ್, ಯೋಹಾನಾನ್, ಯೋಜಾಬಾದ್ - ಗೆದೇರಾ ಊರಿನವರು. ಎಲ್ಲೂಜೈ, ಯೆರೀಮೋತ್, ಬೆಯಲ್ಯ, ಶೆಮರ್ಯ, ಶೆಫಟ್ಯ - ಇವರು ಹರೀಫ್ಯದವರು. ಎಲ್ಕಾನ, ಇಷೀಯ, ಅಜರೇಲ್, ಯೋವೆಜೆರ್ ಮತ್ತು ಯಾಷೊಬ್ಬಮ - ಇವರು ಕೋರಹನ ಗೋತ್ರದವರು. ಯೋವೇಲ ಮತ್ತು ಜೆಬದ್ಯ - ಗೆದೋರಿನ ಯೆರೋಹಾಮನ ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸೌಲನ ಕುಲಬಂಧುಗಳಾದ ಬೆನ್ಯಾಮೀನ್ಯರಲ್ಲಿ ಮುಖ್ಯಸ್ಥನಾದ ಅಹೀಯೆಜೆರ್ ಮತ್ತು ಯೋವಾಷ ಎಂಬ ಗಿಬೆಯ ಊರಿನ ಹಷ್ಷೆಮಾಹನ ಮಕ್ಕಳು. ಅಜ್ಮಾವೆತನ ಮಕ್ಕಳಾದ ಯೆಜೀಯೇಲ್ ಪೆಲೆಟರು. ಅನತೋತ್ ಊರಿನವರಾದ ಯೇಹು ಬೇರಾಕಾರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸೌಲನ ಕುಲಬಂಧುಗಳಾದ ಬೆನ್ಯಾಮೀನ್ಯರಲ್ಲಿ - ಮುಖ್ಯಸ್ಥನಾದ ಅಹೀಯೆಜೆರ್ ಮತ್ತು ಯೋವಾಷ ಎಂಬ ಹೆಸರುಗಳುಳ್ಳ ಗಿಬೆಯ ಊರಿನ ಹಷ್ಷೆಮಾಹನ ಮಕ್ಕಳು, ಅಜ್ಮಾವೆತನ ಮಕ್ಕಳಾದ ಯೆಜೀಯೇಲ್ ಪೆಲೆಟರು, ಅನತೋತ ಊರಿನವರಾದ ಯೇಹು ಬೆರಾಕಾರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರ ನಾಯಕರು ಅಹೀಯೆಜೆರ್ ಮತ್ತು ಯೋವಾಷ್ (ಇವರಿಬ್ಬರೂ ಗಿಬೆಯದವನಾದ ಹಷ್ಷೆಮಾಹನ ಗಂಡುಮಕ್ಕಳು); ಅಜ್ಮಾವೆತನ ಗಂಡುಮಕ್ಕಳಾದ ಯೆಜೀಯೇಲ್ ಮತ್ತು ಪೆಲೆಟ; ಅನತೋತ್ ಊರಿನವರಾದ ಬೆರಾಕಾ ಮತ್ತು ಯೇಹು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರ ಮುಖ್ಯಸ್ಥ ಅಹೀಗೆಜೆರ್, ಇವನ ನಂತರ ಯೋವಾಷ್. ಇವರಿಬ್ಬರೂ ಗಿಬೆಯ ಊರಿನ ಶೇಮಾನ ಪುತ್ರರು. ಅಜ್ಮಾವೆತನ ಪುತ್ರರಾದ ಯೆಜಿಯೇಲ್ ಮತ್ತು ಪೆಲೆಟ್, ಅನಾತೋತ್ ಊರಿನವರಾದ ಬೆರಾಕಾ, ಯೇಹು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 12:3
8 ತಿಳಿವುಗಳ ಹೋಲಿಕೆ  

ತೆಕೋವದ ಇಕ್ಕೇಷನ ಮಗ ಈರ, ಅನತೋತಿನ ಅಬೀಯೆಜೆರ್,


ಬಹರೂಮ್ಯದ ಅಜ್ಮಾವೆತ್, ಶಾಲ್ಬೋನ್ಯದ ಎಲೆಯಖ್ಬ,


ಸರ್ವೇಶ್ವರನಿಂದ ಆಯ್ಕೆಯಾದ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು ಸರ್ವೇಶ್ವರನ ಸನ್ನಿಧಿಯಲ್ಲೆ ನೇತುಹಾಕುತ್ತೇವೆ,” ಎಂದರು. ಅರಸನು, “ಆಗಲಿ, ಒಪ್ಪಿಸುತ್ತೇನೆ,” ಎಂದನು.


ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ಈ ವರ್ತಮಾನವನ್ನು ತಿಳಿಸಿದರು. ಎಲ್ಲರೂ ಗಟ್ಟಿಯಾಗಿ ಅಳತೊಡಗಿದರು.


ಸೌಲನೂ ಬೆನ್ಯಾಮೀನ್ ಗೋತ್ರಕ್ಕೆ ಸೇರಿದವನೇ. ದಾವೀದನನ್ನು ಹಿಂಬಾಲಿಸಿದವರು ಎಡಗೈಯಿಂದಾಗಲೀ ಬಲಗೈಯಿಂದಾಗಲೀ ಬಾಣಗಳನ್ನೆಸೆಯುವವರೂ ಕವಣೆಗಳಲ್ಲಿ ಕಲ್ಲುಗಳನ್ನಿಟ್ಟು ಎಸೆಯಲು ಶಕ್ತರೂ ಆಗಿದ್ದರು.


ನಾಲ್ಕನೆಯ ದಿನದಲ್ಲಿ ಬೆರಾಕ ಕಣಿವೆಗೆ ಕೂಡಿಬಂದರು. ಅಲ್ಲಿ ಅವರು ಸರ್ವೇಶ್ವರನನ್ನು ಸ್ತುತಿಸಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ‘ಬೆರಾಕ ಕಣಿವೆ’ ಎಂಬ ಹೆಸರಿದೆ.


ಅರಾಬಾ ತಗ್ಗಿನವನಾದ ಅಬೀಅಲ್ಬೋನ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು