Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 12:39 - ಕನ್ನಡ ಸತ್ಯವೇದವು C.L. Bible (BSI)

39 ಅವರುದಾವೀದನೊಂದಿಗೆ, ತಮ್ಮ ಸಹಬಾಂಧವರು ಸಿದ್ಧಪಡಿಸಿದ ಆಹಾರ ಪಾನೀಯಗಳನ್ನು ಸೇವಿಸುತ್ತಾ, ಮೂರು ದಿನಗಳನ್ನು ಕಳೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅವರು ಅಲ್ಲಿ ಮೂರು ದಿನ ದಾವೀದನ ಸಂಗಡ ಇದ್ದು ಅನ್ನ ಪಾನಗಳನ್ನು ತೆಗೆದುಕೊಂಡರು. ಅವರ ಸಹೋದರರು ಅವರಿಗೋಸ್ಕರ ಎಲ್ಲವನ್ನೂ ಸಿದ್ಧಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಅವರು ಅಲ್ಲಿ ಮೂರು ದಿವಸ ದಾವೀದನ ಸಂಗಡ ಇದ್ದು ಅನ್ನಪಾನಗಳನ್ನು ತೆಗೆದುಕೊಂಡರು; ಅವರ ಸಹೋದರರು ಅವರಿಗೋಸ್ಕರ ಎಲ್ಲವನ್ನೂ ಸಿದ್ಧಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಈ ಜನರೆಲ್ಲಾ ದಾವೀದನೊಂದಿಗೆ ಮೂರು ದಿನಗಳನ್ನು ಕಳೆದರು. ಅವರ ಕುಟುಂಬದವರು ತಯಾರಿಸಿದ ಆಹಾರವನ್ನು ಅವರು ಊಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಅವರು ಅಲ್ಲಿ ದಾವೀದನ ಸಂಗಡ ಮೂರು ದಿವಸ ಅವರ ಕುಟುಂಬದವರು ಅವರಿಗೋಸ್ಕರ ಸಿದ್ಧಮಾಡಿದ ಆಹಾರವನ್ನು ತಿನ್ನುತ್ತಾ, ಕುಡಿಯುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 12:39
8 ತಿಳಿವುಗಳ ಹೋಲಿಕೆ  

ಅದಕ್ಕೆ ಯೆಹೂದ್ಯರೆಲ್ಲರು, “ಅರಸರು ನಮಗೆ ಸಮೀಪಬಂಧು; ನೀವು ಅದಕ್ಕಾಗಿ ಸಿಟ್ಟುಗೊಳ್ಳುವುದೇಕೆ? ನಾವೇನು ಅರಸರ ಖರ್ಚಿನಿಂದ ಊಟಮಾಡಿದೆವೋ? ಅವರು ನಮಗೆ ಏನಾದರೂ ಕೊಟ್ಟಿರುವರೋ?’ ಎಂದು ಉತ್ತರಕೊಟ್ಟರು.


ನೆರೆದುಬಂದು ಸಭೆ ಸೇರಿದ್ದ ಇಸ್ರಯೇಲರಲ್ಲಿ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಮಾಂಸವನ್ನು ಹಾಗು ದ್ರಾಕ್ಷಿ ಹಣ್ಣಿನಿಂದ ಮಾಡಿದ ಉಂಡೆಯನ್ನು ಕೊಡಿಸಿದನು. ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.


ಅಲ್ಲದೆ, ಯಕೋಬನು ಆ ಬೆಟ್ಟದ ಮೇಲೆ ಬಲಿಯನ್ನರ್ಪಿಸಿ ಬಂಧುಗಳನ್ನು ತನ್ನೊಡನೆ ಸಹಭೋಜನಕ್ಕೆ ಕರೆಸಿದನು. ಅವರು ಸಹಭೋಜನ ಮಾಡಿ ಆ ರಾತ್ರಿಯೆಲ್ಲಾ ಬೆಟ್ಟದ ಮೇಲಿದ್ದರು.


ಆಗ ಇಸಾಕನು ಅವರಿಗೆ ಔತಣವನ್ನು ಏರ್ಪಡಿಸಿದನು; ಅವರೆಲ್ಲರು ತಿಂದು ಕುಡಿದರು.


ಯುದ್ಧಸನ್ನದ್ಧರಾದ ಈ ಎಲ್ಲಾ ಸೈನಿಕರು ಸಮಸ್ತ ಇಸ್ರಯೇಲರ ಮೇಲೆ ದಾವೀದನನ್ನು ಅರಸನನ್ನಾಗಿ ಮಾಡಲು ದೃಢನಿರ್ಧಾರ ಮಾಡಿಕೊಂಡು ಹೆಬ್ರೋನಿಗೆ ಹೋದರು. ಇಸ್ರಯೇಲರಲ್ಲಿ ಉಳಿದವರೆಲ್ಲರೂ ಇದೇ ಉದ್ದೇಶದಿಂದ ಒಂದಾಗಿದ್ದರು.


ದೂರದ ಉತ್ತರದಲ್ಲಿದ್ದ ಇಸ್ಸಾಕಾರ್, ಜೆಬುಲೂನ್, ನಫ್ತಾಲಿ ಗೋತ್ರಗಳ ಜನರು ತಮ್ಮ ಎತ್ತು, ಕತ್ತೆ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ರೊಟ್ಟಿ, ಅಂಜೂರ, ಒಣದ್ರಾಕ್ಷಿ, ದ್ರಾಕ್ಷಾರಸ, ಎಣ್ಣೆಗಳನ್ನು ಹೊತ್ತುತಂದರು. ಭೋಜನಕ್ಕೆ ಕುರಿದನಗಳನ್ನು ಸಹ ತೆಗೆದುಕೊಂಡು ಬಂದರು. ನಾಡಿನಲ್ಲೆಲ್ಲಾ ಸಂತೋಷ ಸಂಭ್ರಮವಿತ್ತು.


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ದಾವೀದನ ಸುಪ್ರಸಿದ್ಧ ರಣವೀರರ ಪಟ್ಟಿ ಇದು: ಸರ್ವೇಶ್ವರ ಮಾಡಿದ ವಾಗ್ದಾನಕ್ಕೆ ಅನುಗುಣವಾಗಿ ದಾವೀದನು ಅರಸನಾಗಲು ಇತರ ಇಸ್ರಯೇಲರೊಂದಿಗೆ ಸಹಾಯ ಮಾಡಿದವರು ಹಾಗೂ ಅವನ ರಾಜ್ಯ ಶಕ್ತಿಯುತವಾಗಿರುವಂತೆ ಮಾಡಿದವರು ಇವರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು