Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 13:12 - ಕನ್ನಡ ಸತ್ಯವೇದವು C.L. Bible (BSI)

12 ಸರ್ವೇಶ್ವರನ ಭಯದಿಂದ ದಾವೀದನು, “ದೇವರ ಮಂಜೂಷವನ್ನು ನಾನಿರುವಲ್ಲಿಗೆ ಈಗ ಹೇಗೆ ತಾನೆ ತೆಗೆದುಕೊಂಡು ಹೋಗಲಿ?” ಎಂದು ಕಳವಳಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆ ದಿನ ದಾವೀದನು ದೇವರಿಗೆ ಭಯಪಟ್ಟು, “ದೇವರ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ” ಎಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆ ದಿವಸ ದಾವೀದನು ದೇವರಿಗೆ ಭಯಪಟ್ಟು - ದೇವರ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವದು ಹೇಗೆ ಎಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ದಿವಸದಲ್ಲಿ ದಾವೀದನು ಯೆಹೋವನಿಗೆ ತುಂಬಾ ಭಯಪಟ್ಟು, “ನಾನು ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಜೆರುಸಲೇಮಿಗೆ ತರಲು ಆಗುವುದಿಲ್ಲ” ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದಾವೀದನು ಆ ದಿನ ಯೆಹೋವ ದೇವರಿಗೆ ಭಯಪಟ್ಟು, “ದೇವರ ಮಂಜೂಷವನ್ನು ನಾನಿರುವಲ್ಲಿಗೆ ಹೇಗೆ ತೆಗೆದುಕೊಂಡು ಹೋಗುವದು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 13:12
12 ತಿಳಿವುಗಳ ಹೋಲಿಕೆ  

ನಡುಗುತ್ತಿದೆ ದೇಹ ನಿನ್ನ ಭಯದಿಂದ I ಬಾಳಿದೆ ನಿನ್ನ ವಿಧಿಗಳ ಭೀತಿಯಿಂದ II


“ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವರೋ? ಆಕಾಶವೂ, ಉನ್ನತೋನ್ನತ ಆದ ಆಕಾಶವೂ, ನಿಮ್ಮ ವಾಸಕ್ಕೆ ಸಾಲದು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ತಾನೆ ಸಾಕಾದೀತು?


“ಪರಮಪಾವನ ದೇವರಾದ ಸರ್ವೆಶ್ವರನ ಮುಂದೆ ಯಾರು ತಾನೆ ನಿಂತಾರು? ಇನ್ನು ಮುಂದೆ ಇವರು ಹೋಗತಕ್ಕ ಸ್ಥಳ ಯಾವುದು?” ಎಂದು ಮಾತಾಡಿಕೊಂಡರು ಜನರು.


ತರುವಾಯ ಒಂದು ತಲೆಂತು ಪಡೆದವನೂ ಮುಂದೆ ಬಂದ; ‘ಒಡೆಯಾ, ನಿಮ್ಮ ಮನಸ್ಸು ಕಠಿಣ ಎಂಬುದನ್ನು ನಾನು ಬಲ್ಲೆ. ನೀವು ಬಿತ್ತದ ಎಡೆಯಲ್ಲಿ ಕೊಯ್ಲುಮಾಡುವವರು; ನೀವು ತೂರದ ಎಡೆಯಲ್ಲಿ ರಾಶಿಮಾಡುವವರು;


ಆಗ ನಾನು “ಅಯ್ಯೋ, ನನ್ನ ಗತಿಯೇನು? ನನ್ನ ಕಥೆ ಮುಗಿಯಿತು. ಅಶುದ್ಧ ವದನದವನು ನಾನು. ಅಶುದ್ಧ ವದನದವರ ಮಧ್ಯೆ ಬಾಳುವವನು. ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರ ಸರ್ವೇಶ್ವರನನ್ನು ಕಂಡೆವಲ್ಲಾ !” ಎಂದು ಕೂಗಿಕೊಂಡೆನು.


ಆ ಸ್ಥಳಕ್ಕೆ ಅಂದಿನಿಂದ ‘ಪೆರೆಚ್ ಉಜ್ಜ’ ಎಂಬ ಹೆಸರು ಬಂತು. ಸರ್ವೇಶ್ವರ ಕೋಪದಿಂದ ಉಜ್ಜನನ್ನು ಶಿಕ್ಷಿಸಿದ್ದಕ್ಕಾಗಿ ದಾವೀದನು ಭಯದಿಂದ ಕಂಗೆಟ್ಟನು.


ಅದನ್ನು ಜೆರುಸಲೇಮಿಗೆ ತನ್ನೊಂದಿಗೆ ತೆಗೆದುಕೊಂಡು ಹೋಗಲಿಲ್ಲ. ಗತ್ ಊರಿನ ನಿವಾಸಿ ಓಬೇದೆದೋಮನ ಮನೆಯಲ್ಲಿ ಅದನ್ನು ಇರಿಸಿದನು.


ಆ ಕಾಲದಲ್ಲಿ ದಾವೀದನಿಗೆ ಸರ್ವೇಶ್ವರನಿಂದ ಸದುತ್ತರ ದೊರಕಿದ್ದರಿಂದ ಅವನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು