Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 13:13 - ಕನ್ನಡ ಸತ್ಯವೇದವು C.L. Bible (BSI)

13 ಅದನ್ನು ಜೆರುಸಲೇಮಿಗೆ ತನ್ನೊಂದಿಗೆ ತೆಗೆದುಕೊಂಡು ಹೋಗಲಿಲ್ಲ. ಗತ್ ಊರಿನ ನಿವಾಸಿ ಓಬೇದೆದೋಮನ ಮನೆಯಲ್ಲಿ ಅದನ್ನು ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮಂಜೂಷವನ್ನು ದಾವೀದ ನಗರಕ್ಕೆ ತಾರದೇ, ಗತ್ ಊರಿನ ಓಬೇದೆದೋಮನ ಮನೆಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದನ್ನು ದಾವೀದನಗರಕ್ಕೆ ತಾರದೆ ಗತ್ ಊರಿನ ಓಬೇದೆದೋಮನ ಮನೆಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದಾವೀದನು ದೇವರಿಗೆ ಭಯಪಟ್ಟನು. ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ಓಬೇದೆದೋಮನ ಮನೆಯಲ್ಲಿಯೇ ಬಿಟ್ಟನು. ಓಬೇದೆದೋಮನು ಗತ್ ಊರಿನವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹಾಗೆಯೇ ದಾವೀದನು ಮಂಜೂಷವನ್ನು ದಾವೀದನ ಪಟ್ಟಣಕ್ಕೆ ತನ್ನ ಬಳಿಗೆ ಸೇರಿಸಿಕೊಳ್ಳದೆ, ಗಿತ್ತೀಯನಾದ ಓಬೇದ್ ಏದೋಮನ ಮನೆಗೆ ತೆಗೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 13:13
9 ತಿಳಿವುಗಳ ಹೋಲಿಕೆ  

ಓಬೇದೆದೋಮನ ಮಕ್ಕಳಲ್ಲಿ ಶೆಮಾಯನು ಚೊಚ್ಚಲನು; ಯೆಹೋಜಾಬಾದನು ಮರಚಲನು; ಯೋವಾಹನು ಮೂರನೆಯವನು; ಸಾಕಾರನು ನಾಲ್ಕನೆಯವನು; ನೆತನೇಲನು ಐದನೆಯವನು;


ಇವರೆಲ್ಲರೂ ಓಬೇದೆದೋಮನ ಸಂತಾನದವರು. ಸಮರ್ಥರೂ ಸೇವೆಯಲ್ಲಿ ಗಟ್ಟಿಗರೂ ಆಗಿದ್ದ ಇವರೂ ಇವರ ಮಕ್ಕಳೂ ಸಹೋದರರೂ ಕೂಡಿ ಅರವತ್ತೆರಡು ಮಂದಿ ಇದ್ದರು.


ಅವರಲ್ಲಿ ಆಸಾಫನು ಮುಖ್ಯಸ್ಥನಾಗಿಯೂ ಜೆಕರ್ಯ ಅವನ ಸಹಾಯಕನಾಗಿಯೂ ನೇಮಕಗೊಂಡರು. ಯೇಗೀಯೇಲ್, ಶೆಮೀರಾಮೋತ್, ಯೆಹೀಯೇಲ್, ಮತ್ತಿತ್ಯ, ಎಲೀಯಾಬ್, ಬೆನಾಯ, ಓಬೇದೆದೋಮ್ ಹಾಗು ಯೆಗೀಯೇಲ್ ಸ್ವರಮಂಡಲಗಳನ್ನು ಬಾರಿಸಲು ನೇಮಕವಾದರು. ಆಸಾಫನು ತಾಳಗಳನ್ನು ಬಾರಿಸಬೇಕಾಗಿತ್ತು.


ಆದರೆ ಬೇರೋತ್ಯರು ಗಿತ್ತಯಿಮಿಗೆ ಓಡಿಹೋಗಿ ಅಂದಿನವರೆಗೂ ಅಲ್ಲೇ ಪ್ರವಾಸಿಗಳಾಗಿ ಇದ್ದರು.)


ಸರ್ವೇಶ್ವರನ ಭಯದಿಂದ ದಾವೀದನು, “ದೇವರ ಮಂಜೂಷವನ್ನು ನಾನಿರುವಲ್ಲಿಗೆ ಈಗ ಹೇಗೆ ತಾನೆ ತೆಗೆದುಕೊಂಡು ಹೋಗಲಿ?” ಎಂದು ಕಳವಳಪಟ್ಟನು.


ಹೀಗೆ ಅರಸ ದಾವೀದನು, ಇಸ್ರಯೇಲಿನ ನಾಯಕರು ಹಾಗು ಸೈನ್ಯದ ಅಧಿಕಾರಿಗಳು ನಿಬಂಧನ ಮಂಜೂಷವನ್ನು ತರಲು ಓಬೇದೆದೋಮನ ಮನೆಗೆ ಹೋದರು. ಇದನ್ನು ಒಂದು ದೊಡ್ಡ ಜಾತ್ರೆಯಂತೆಯೇ ಆಚರಿಸಲಾಯಿತು.


ಪುನಃ ದಾವೀದನು ಇಸ್ರಯೇಲರಲ್ಲಿ ಮೂವತ್ತು ಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಆರಿಸಿಕೊಂಡು ದೇವರ ಮಂಜೂಷವನ್ನು ತರುವುದಕ್ಕಾಗಿ ಅವರೆಲ್ಲರ ಸಹಿತ ಜುದೇಯ ನಾಡಿನ ಬಾಳಾ ಎಂಬಲ್ಲಿಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು