Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 13:14 - ಕನ್ನಡ ಸತ್ಯವೇದವು C.L. Bible (BSI)

14 ಅದು ಅಲ್ಲಿ ಮೂರು ತಿಂಗಳು ಇತ್ತು. ಸರ್ವೇಶ್ವರ ಆ ಅವಧಿಯಲ್ಲಿ ಓಬೇದೆದೋಮನ ಕುಟುಂಬವನ್ನೂ ಅವನಿಗೆ ಇದ್ದುದೆಲ್ಲವನ್ನೂ ಆಶೀರ್ವದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ದೇವರ ಮಂಜೂಷವು ಓಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇತ್ತು. ಆ ಕಾಲದಲ್ಲಿ ಯೆಹೋವನು ಓಬೇದೆದೋಮನ ಮನೆಯನ್ನೂ ಮತ್ತು ಅವನಿಗಿದ್ದ ಸರ್ವಸ್ವವನ್ನೂ ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ದೇವರ ಮಂಜೂಷವು ಓಬೇದೆದೋಮನ ಮನೆಯ ಬಳಿಯಲ್ಲಿ ಸ್ವಂತ ಆಲಯದೊಳಗೆ ಮೂರು ತಿಂಗಳು ಇತ್ತು. ಆ ಕಾಲದಲ್ಲಿ ಯೆಹೋವನು ಓಬೇದೆದೋಮನ ಮನೆಯನ್ನೂ ಅವನಿಗಿದ್ದದ್ದೆಲ್ಲವನ್ನೂ ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆ ಮನೆಯಲ್ಲಿ ದೇವರ ಒಡಂಬಡಿಕೆಯ ಪೆಟ್ಟಿಗೆಯು ಮೂರು ತಿಂಗಳ ಕಾಲವಿತ್ತು. ಯೆಹೋವನು ಆ ಮನೆಯನ್ನು ಆಶೀರ್ವದಿಸಿ ಅಭಿವೃದ್ಧಿಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ದೇವರ ಮಂಜೂಷವು ಓಬೇದ್ ಏದೋಮನ ಮನೆಯಲ್ಲಿ ಮೂರು ತಿಂಗಳು ಇದ್ದುದರಿಂದ, ಯೆಹೋವ ದೇವರು ಓಬೇದ್ ಎದೋಮನನ್ನೂ, ಅವನ ಮನೆಯವರೆಲ್ಲರನ್ನೂ, ಅವನಿಗಿದ್ದದ್ದೆಲ್ಲವನ್ನೂ ಆಶೀರ್ವದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 13:14
8 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ಆಶೀರ್ವಾದ ಭಾಗ್ಯದಾಯಕ; ಅದಕ್ಕೆ ಬಾಹಿರವಾದುದು ಕಷ್ಟದುಃಖ.


ಅದಕ್ಕೆ ಲಾಬಾನನು, “ನನ್ನ ಮೇಲೆ ದಯವಿಟ್ಟು ನನ್ನ ಬಳಿಯಲ್ಲೇ ತಂಗಿರು. ಸರ್ವೇಶ್ವರ ಸ್ವಾಮಿ ನಿನ್ನ ನಿಮಿತ್ತ ನನ್ನನ್ನು ಅಭಿವೃದ್ಧಿಗೊಳಿಸಿದ್ದಾರೆಂದು ಶಾಸ್ತ್ರೋಕ್ತವಾಗಿ ತಿಳಿದುಕೊಂಡಿದ್ದೇನೆ.


ಹೀಗೆ ತನ್ನ ಮನೆಮಂದಿರದ ಮೇಲೂ ಆಸ್ತಿಪಾಸ್ತಿಯ ಮೇಲೂ ಜೋಸೆಫನನ್ನೇ ಆಡಳಿತಗಾರನನ್ನಾಗಿ ನೇಮಿಸಿದ. ಜೋಸೆಫನ ಪ್ರಯುಕ್ತ ಸರ್ವೇಶ್ವರ ಆ ಈಜಿಪ್ಟಿನವನ ಮನೆತನವನ್ನು ಹರಸಿದರು. ಮನೆಯಲ್ಲೂ ಸರ್ವೇಶ್ವರ ಸ್ವಾಮಿಯ ಆಶೀರ್ವಾದವಿತ್ತು.


ಅದನ್ನು ದಾವೀದನಗರಕ್ಕೆ ತರಲೊಲ್ಲದೆ ಗತ್ ಊರಿನ ಓಬೇದೆದೋಮನ ಮನೆಗೆ ಕಳುಹಿಸಿದನು.


ಯೆದುತೂನನ ಮಗ ಓಬೇದೆದೋಮನೂ ಅವನ ಗೋತ್ರದ ಅರವತ್ತ ಎಂಟು ಜನರೂ ಅವರಿಗೆ ಸಹಾಯಕರು ಆಗಿದ್ದರು. ಹೋಸ ಮತ್ತು ಓಬೇದೆದೋಮರು ದ್ವಾರಪಾಲಕರ ಮೇಲ್ವಿಚಾರಕರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು