Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 13:2 - ಕನ್ನಡ ಸತ್ಯವೇದವು C.L. Bible (BSI)

2 “ನೀವು ಎಲ್ಲರು ಸಮ್ಮತಿಸಿದರೆ, ಇದು ನಮ್ಮ ದೇವರಾದ ಸರ್ವೇಶ್ವರಸ್ವಾಮಿಯ ಚಿತ್ತವಾಗಿದ್ದರೆ, ಇಲ್ಲಿ ನಮ್ಮೊಂದಿಗೆ ಶೀಘ್ರವಾಗಿ ಬಂದು ಸೇರಬೇಕೆಂದು ಉಳಿದ ಎಲ್ಲಾ ನಮ್ಮ ದೇಶಬಾಂಧವರಿಗೆ, ಯಾಜಕ-ಲೇವಿಯರಿಗೆ ಹಾಗು ಅವರ ಪಟ್ಟಣಗಳಿಗೆ ಸಂದೇಶವನ್ನು ಕಳುಹಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನಿಮ್ಮ ಸಮ್ಮತಿಯೂ ಮತ್ತು ನಮ್ಮ ದೇವರಾದ ಯೆಹೋವನ ಚಿತ್ತವೂ ಇರುವುದಾದರೆ, ನಾವು ಎಲ್ಲಾ ಇಸ್ರಾಯೇಲ್ ಪ್ರಾಂತ್ಯಗಳಲ್ಲಿರುವ ನಮ್ಮ ಸಹೋದರರನ್ನೂ ಗೋಮಾಳಸಹಿತವಾದ ತಮ್ಮ ಪಟ್ಟಣಗಳಲ್ಲಿರುವ ಯಾಜಕ ಲೇವಿಯರನ್ನೂ ಬೇಗನೆ ಕರೆಕಳುಹಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಸ್ರಾಯೇಲ್ ಸಮಸ್ತಸಮೂಹದವರಿಗೆ - ನಿಮ್ಮ ಸಮ್ಮತಿಯೂ ನಮ್ಮ ದೇವರಾದ ಯೆಹೋವನ ಚಿತ್ತವೂ ಇರುವದಾದರೆ ನಾವು ಎಲ್ಲಾ ಇಸ್ರಾಯೇಲ್‍ಪ್ರಾಂತಗಳಲ್ಲಿರುವ ನಮ್ಮ ಸಹೋದರರನ್ನೂ ಗೋಮಾಳಸಹಿತವಾದ ತಮ್ಮ ಪಟ್ಟಣಗಳಲ್ಲಿರುವ ಯಾಜಕ ಲೇವಿಯರನ್ನೂ ಶೀಘ್ರವಾಗಿ ಕರೇಕಳುಹಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಮೇಲೆ ಇಸ್ರೇಲ್ ಜನರನ್ನು ಕರೆದು ಅವರಿಗೆ ಹೀಗೆಂದನು: “ಇದು ನಿಮಗೆ ಒಳ್ಳೆಯ ಆಲೋಚನೆ ಎನಿಸಿದರೆ ಮತ್ತು ಇದು ಯೆಹೋವನ ಚಿತ್ತಕ್ಕನುಸಾರವಾಗಿದ್ದರೆ, ಇಸ್ರೇಲಿನ ಎಲ್ಲಾ ಸ್ಥಳಗಳಲ್ಲಿರುವ ನಮ್ಮ ಸಹೋದರರಿಗೆ ಒಂದು ಸಂದೇಶವನ್ನು ಕಳುಹಿಸೋಣ. ನಮ್ಮ ಸಹೋದರರೊಂದಿಗೆ ಊರುಗಳಲ್ಲಿಯೂ ಊರುಗಳ ಸಮೀಪದಲ್ಲಿರುವ ಹೊಲಗಳಲ್ಲಿಯೂ ವಾಸವಾಗಿರುವ ಯಾಜಕರಿಗೂ ಲೇವಿಯರಿಗೂ ಈ ಸಂದೇಶವನ್ನು ಕಳುಹಿಸಿಕೊಡೋಣ: ನೀವು ಬಂದು ನಮ್ಮೊಂದಿಗೆ ಸೇರಿಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದಾವೀದನು ಇಸ್ರಾಯೇಲಿನ ಸಮಸ್ತ ಜನರಿಗೆ, “ನಿಮಗೆ ಒಳ್ಳೆಯದಾಗಿ ಕಂಡರೆ, ನಮ್ಮ ದೇವರಾದ ಯೆಹೋವ ದೇವರ ಚಿತ್ತವಾದರೆ, ನಮ್ಮ ಬಳಿಯಲ್ಲಿ ಕೂಡಿಬರುವ ಹಾಗೆ ಇಸ್ರಾಯೇಲಿನ ದೇಶವೆಲ್ಲದರಲ್ಲಿ ಉಳಿದಿರುವ ನಮ್ಮ ಸಹೋದರರನ್ನೂ, ತಮ್ಮ ಪಟ್ಟಣಗಳಲ್ಲಿ ಮತ್ತು ಉಪನಗರಗಳಲ್ಲಿ ಇರುವ ಯಾಜಕರನ್ನೂ, ಲೇವಿಯರನ್ನೂ ಎಲ್ಲಾ ಕಡೆಯಿಂದ ಕರೆಯಕಳುಹಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 13:2
16 ತಿಳಿವುಗಳ ಹೋಲಿಕೆ  

ಫಿಲಿಷ್ಟಿಯರು ಇಸ್ರಯೇಲರೊಡನೆ ಯುದ್ಧಮಾಡಿದರು. ಇಸ್ರಯೇಲರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಹತರಾದರು.


ಅಸ್ಸೀರಿಯದ ಅರಸನಿಂದ ಬಂದಿರುವ ಸೇನಾಪತಿ ಆಡಿದ ಮಾತುಗಳನ್ನು ನಿನ್ನ ದೇವರಾದ ಸರ್ವೇಶ್ವರ ಕೇಳಿದ್ದಾರೆ. ಆ ಸೇನಾಪತಿ ತನ್ನ ಒಡೆಯನ ಹೆಸರಿನಲ್ಲಿ ಜೀವಸ್ವರೂಪರಾದ ಆ ದೇವರನ್ನು ದೂಷಿಸಿದ್ದಾನೆ. ಅವನಿಗೆ ತಕ್ಕ ದಂಡನೆಯಾಗಬೇಕು. ಹೀಗಿರಲು ಅಳಿದುಳಿದಿರುವ ಜನರಿಗಾಗಿ ದೇವರನ್ನು ನೀನು ಪ್ರಾರ್ಥನೆ ಮಾಡಬೇಕೆಂದು ಹಿಜ್ಕೀಯ ಕೇಳಿಕೊಂಡಿದ್ದಾನೆ,’ ಎಂದು ತಿಳಿಸಿ.”


ಆಲೋಚನೆಯಿಲ್ಲದೆ ಉದ್ದೇಶಗಳು ಈಡೇರವು; ಹಲವಾರು ಆಲೋಚನಾಪರರಿರುವಲ್ಲಿ ಅವು ಕೈಗೂಡುವುವು.


ತಗ್ಗಿನಲ್ಲಿ ನೆಲೆಸಿದ್ದ ಇಸ್ರಯೇಲರು ತಮ್ಮ ಸೈನ್ಯವು ಪಲಾಯನಗೈಯಿತು ಮತ್ತು ಸೌಲನೂ ಅವನ ಮಕ್ಕಳೂ ಮರಣ ಹೊಂದಿದರು ಎಂಬ ವಾರ್ತೆಯನ್ನು ಕೇಳಿ ಅವರೂ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಅನಂತರ ಫಿಲಿಷ್ಟಿಯರು ಬಂದು ಅವುಗಳನ್ನು ವಶಪಡಿಸಿಕೊಂಡರು.


ಆಗ ಗಾಯಗೊಂಡು ಅದನ್ನು ಮಾಗಿಸಿಕೊಳ್ಳುವುದಕ್ಕಾಗಿ ಹಿಂದಿರುಗಿ ಜೆಸ್ರೀಲಿಗೆ ಬಂದಿದ್ದನು.) ಯೇಹುವು ತನ್ನ ಜೊತೆಗಾರನಿಗೆ, “ನೀವು ನನ್ನವರಾಗಿದ್ದರೆ, ಈ ಸುದ್ದಿ ಜೆಸ್ರೀಲನ್ನು ಮುಟ್ಟದಂತೆ, ಒಬ್ಬನನ್ನೂ ಈ ಪಟ್ಟಣದಿಂದ ಹೊರಗೆ ಬಿಡಬೇಡಿ,” ಎಂದು ಹೇಳಿದನು.


ಅವರು, “ನೀವು ಈ ದಿನ ಜನರ ಮಾತನ್ನು ಕೇಳಿ ಅವರಿಗೆ ವಿನಯರಾಗಿ, ಒಳ್ಳೆಯ ಉತ್ತರಕೊಟ್ಟರೆ ಅವರು ಯಾವಾಗಲೂ ನಿಮಗೆ ಅಧೀನರಾಗಿರುವರು,” ಎಂದರು.


ಹೀಗೆ ಮಾಡಲು ದೇವರು ನಿನಗೆ ಅಪ್ಪಣೆ ಕೊಡಲಿ; ಮಾಡಿದರೆ ಈ ಹೊಣೆಯನ್ನು ನಿರ್ವಹಿಸಲು ಶಕ್ತನಾಗುವೆ; ಈ ಜನರೂ ಕೂಡ ಸಂತುಷ್ಟರಾಗಿ ತಮ್ಮ ತಮ್ಮ ಮನೆಗಳಿಗೆ ಹಿಂದಿರುಗುವರು,” ಎಂದನು.


ಅರಸ ದಾವೀದನು ಸರ್ವಸಹಸ್ರಾಧಿಪತಿಗಳೊಂದಿಗೂ ಶತಾಧಿಪತಿಗಳೊಂದಿಗೂ ಸಮಾಲೋಚನೆ ನಡೆಸಿದನು.


ಅನಂತರ ನಾವು ಹೋಗಿ ಅರಸ ಸೌಲ ನಿರ್ಲಕ್ಷಿಸಿದ್ದ ದೇವಮಂಜೂಷವನ್ನು ತೆಗೆದುಕೊಂಡು ಬರೋಣ,” ಎಂದು ಜನರೆಲ್ಲರಿಗೆ ಸಲಹೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು