Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 13:3 - ಕನ್ನಡ ಸತ್ಯವೇದವು C.L. Bible (BSI)

3 ಅನಂತರ ನಾವು ಹೋಗಿ ಅರಸ ಸೌಲ ನಿರ್ಲಕ್ಷಿಸಿದ್ದ ದೇವಮಂಜೂಷವನ್ನು ತೆಗೆದುಕೊಂಡು ಬರೋಣ,” ಎಂದು ಜನರೆಲ್ಲರಿಗೆ ಸಲಹೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ನಮ್ಮ ಬಳಿಗೆ ಕೂಡಿ ಬಂದ ಮೇಲೆ ನಾವು ಸೌಲನ ಕಾಲದಲ್ಲಿ ಅಲಕ್ಷ್ಯಮಾಡಿದ್ದ ನಮ್ಮ ದೇವರ ಮಂಜೂಷವನ್ನು ತೆಗೆದುಕೊಂಡು ಬರೋಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರು ನಮ್ಮ ಬಳಿಗೆ ಕೂಡಿಬಂದ ಮೇಲೆ ನಾವು ಸೌಲನ ಕಾಲದಲ್ಲಿ ಅಲಕ್ಷ್ಯಮಾಡಿದ ನಮ್ಮ ದೇವಮಂಜೂಷವನ್ನು ತೆಗೆದುಕೊಂಡು ಬರೋಣ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾವೆಲ್ಲರೂ ಹೋಗಿ ಒಡಂಬಡಿಕೆಯ ಪೆಟ್ಟಿಗೆಯನ್ನು ಜೆರುಸಲೇಮಿಗೆ ತರೋಣ. ಸೌಲನು ಅರಸನಾಗಿದ್ದಾಗ ನಾವು ಒಡಂಬಡಿಕೆಯ ಪೆಟ್ಟಿಗೆಯ ಬಗ್ಗೆ ಆಸಕ್ತಿವಹಿಸಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಮ್ಮ ದೇವರ ಮಂಜೂಷವನ್ನು ನಮ್ಮ ಬಳಿಗೆ ತಿರುಗಿ ತರಿಸೋಣ. ಸೌಲನ ದಿವಸಗಳಲ್ಲಿ ಅದನ್ನು ವಿಚಾರಿಸಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 13:3
11 ತಿಳಿವುಗಳ ಹೋಲಿಕೆ  

ಅವನು, “ನಾನು ಹೋಗಿ ಆ ಫಿಲಿಷ್ಟಿಯರ ಮೇಲೆ ದಾಳಿಮಾಡಲೆ?” ಎಂದು ಸರ್ವೇಶ್ವರನನ್ನು ಕೇಳಿದನು. ಸರ್ವೇಶ್ವರ ಅವನಿಗೆ, “ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ ಕೆಯೀಲಾ ಊರನ್ನು ರಕ್ಷಿಸು,” ಎಂದು ಉತ್ತರಕೊಟ್ಟರು.


ನಾನು ಅವರ ಪರವಾಗಿ ದೇವರ ಸನ್ನಿಧಿಯಲ್ಲಿ ವಿಚಾರಮಾಡಿದ್ದು ಇದೇ ಮೊದಲನೆಯ ಸಾರಿಯೇ? ಇಲ್ಲವೇ ಇಲ್ಲ, ಅರಸರು ತಮ್ಮ ಸೇವಕನಾದ ನನ್ನ ಮೇಲೆ ಹಾಗು ನನ್ನ ಮನೆಯವರ ಮೇಲೆ ಇಂಥ ಅಪವಾದವನ್ನು ಹೊರಿಸಬಾರದು. ಈ ವಿಷಯದಲ್ಲಿ ತಮ್ಮ ಸೇವಕನಾದ ನನಗೆ ಸ್ವಲ್ಪವೂ ಗೊತ್ತಿರಲಿಲ್ಲ,” ಎಂದು ಉತ್ತರಕೊಟ್ಟನು.


ಆ ಯಾಜಕ ಇವನಿಗೆ ಸರ್ವೇಶ್ವರನ ಚಿತ್ತವನ್ನು ತಿಳಿಸಿ, ಆಹಾರವನ್ನೂ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನೂ ಕೊಟ್ಟನು,” ಎಂದು ಹೇಳಿದನು.


ಸೌಲನು ತನ್ನ ಸೈನಿಕರನ್ನು, “ಬನ್ನಿ, ನಾವು ಈ ರಾತ್ರಿಯಲ್ಲೇ ಫಿಲಿಷ್ಟಿಯರನ್ನು ಬೆನ್ನಟ್ಟಿ ಬೆಳಗಾಗುವವರೆಗೆ ಅವರನ್ನು ಸುಲಿದುಕೊಂಡು ಒಬ್ಬನನ್ನೂ ಉಳಿಸದೆ ಕೊಂದುಹಾಕೋಣ,” ಎಂದು ಕರೆದನು. ಅವರು, “ನಿಮ್ಮ ಇಷ್ಟದಂತೆ ಆಗಲಿ,” ಎಂದು ಹೇಳಿದರು. ಆದರೆ ಯಾಜಕನು, “ಇತ್ತ ಬನ್ನಿ; ನಾವು ದೇವರನ್ನು ವಿಚಾರಿಸೋಣ,” ಎಂದನು.


ಅನಂತರ ಸೌಲನು ಅಹೀಯನಿಗೆ, “’ಏಫೋದ’ನ್ನು ತೆಗೆದುಕೊಂಡು ಬಾ,” ಎಂದು ಆಜ್ಞಾಪಿಸಿದನು. (ಆ ದಿನದಂದು ಅಹೀಯನು ಇಸ್ರಯೇಲರ ಮುಂದೆ ಏಫೋದನ್ನು ಹೊತ್ತು ನಡೆಯುತ್ತಿದ್ದನು).


ಮಂಜೂಷವನು ಕುರಿತು ಕೇಳಿದೆವು ಎಫ್ರಾತಾದಲಿ I ನಮಗದು ಕಾಣಬಂದಿತು ಆ ಯಹಾರ್ ಮೈದಾನದಲಿ II


“ನೀವು ಎಲ್ಲರು ಸಮ್ಮತಿಸಿದರೆ, ಇದು ನಮ್ಮ ದೇವರಾದ ಸರ್ವೇಶ್ವರಸ್ವಾಮಿಯ ಚಿತ್ತವಾಗಿದ್ದರೆ, ಇಲ್ಲಿ ನಮ್ಮೊಂದಿಗೆ ಶೀಘ್ರವಾಗಿ ಬಂದು ಸೇರಬೇಕೆಂದು ಉಳಿದ ಎಲ್ಲಾ ನಮ್ಮ ದೇಶಬಾಂಧವರಿಗೆ, ಯಾಜಕ-ಲೇವಿಯರಿಗೆ ಹಾಗು ಅವರ ಪಟ್ಟಣಗಳಿಗೆ ಸಂದೇಶವನ್ನು ಕಳುಹಿಸೋಣ.


ಈ ಸಲಹೆಯನ್ನು ಸರ್ವರೂ ಮೆಚ್ಚಿ ಅನುಮೋದಿಸಿದರು.


ಮೊದಲೊಂದು ಸಾರಿ, ಅದನ್ನು ತರಲು ನೀವು ಇಲ್ಲದೇ ಹೋದುದರಿಂದ ಹಾಗು ನಾವು ತಕ್ಕ ರೀತಿಯಲ್ಲಿ ಅವರನ್ನು ಆರಾಧಿಸದೇ ಹೋದುದಕ್ಕಾಗಿ ನಮ್ಮ ದೇವರಾದ ಸರ್ವೇಶ್ವರ ನಮ್ಮನ್ನು ಶಿಕ್ಷಿಸಿದರು,” ಎಂದು ಅವರನ್ನು ಎಚ್ಚರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು