Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 13:6 - ಕನ್ನಡ ಸತ್ಯವೇದವು C.L. Bible (BSI)

6 ದಾವೀದನೂ ಜನರೂ ಜುದೇಯದಲ್ಲಿ ‘ಬಾಳಾ’ ಎಂದು ಹೆಸರುಗೊಂಡಿದ್ದ ಕಿರ್ಯತ್ಯಾರೀಮ ಪಟ್ಟಣಕ್ಕೆ ಮಂಜೂಷವನ್ನು ತರಲು ಹೋದರು. ಆ ಮಂಜೂಷವು ಕೆರೂಬಿಯರ ನಡುವೆ ಆಸೀನರಾಗಿರುವ ಸರ್ವೇಶ ದೇವರ ನಾಮದಿಂದ ಸುಪ್ರಸಿದ್ಧವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಎಲ್ಲಾ ಇಸ್ರಾಯೇಲ್ಯರನ್ನು ಒಟ್ಟಿಗೆ ಸೇರಿಸಿ ಅವರೆಲ್ಲರೊಡನೆ, ಯೆಹೂದ ದೇಶದ ಬಾಳಾ ಎನ್ನಿಸಿಕೊಳ್ಳುತ್ತಿದ್ದ ಕಿರ್ಯತ್ಯಾರೀಮಿಗೆ ಹೋದನು. ಆ ಮಂಜೂಷವು ಕೆರೂಬಿಯರ ನಡುವೆ ಆಸೀನನಾಗಿರುವ ಯೆಹೋವ ದೇವರ ನಾಮದಿಂದ ಪ್ರಸಿದ್ಧವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರೆಲ್ಲರೊಡನೆ ಯೆಹೂದ ದೇಶದ ಬಾಳಾ ಎನಿಸಿಕೊಳ್ಳುತ್ತಿದ್ದ ಕಿರ್ಯತ್ಯಾರೀವಿುಗೆ ಹೋದನು; ಆ ಮಂಜೂಷವು ಕೆರೂಬಿಯರ ನಡುವೆ ಆಸೀನನಾಗಿರುವ ಯೆಹೋವದೇವರ ನಾಮದಿಂದ ಪ್ರಸಿದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಇಸ್ರೇಲಿನ ಎಲ್ಲಾ ಜನರು ದಾವೀದನೊಂದಿಗೆ ಯೆಹೂದದ ಬಾಳಾ ಎಂಬ ಸ್ಥಳಕ್ಕೆ (ಕೀರ್ಯಾತ್ಯಾರೀಮಿನ ಇನ್ನೊಂದು ಹೆಸರು ಬಾಳಾ.) ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ತರಲು ನಡೆದರು. ಆತನು ಕೆರೂಬಿಗಳ ನಡುವೆ ಆಸೀನನಾಗಿರುತ್ತಾನೆ. ಆ ಪೆಟ್ಟಿಗೆಯು ಯೆಹೋವನ ಹೆಸರಿನಲ್ಲಿ ಕರೆಯಲ್ಪಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಕೆರೂಬಿಗಳ ನಡುವೆ ವಾಸವಾಗಿರುವ ಯೆಹೋವ ದೇವರ ಹೆಸರಿನಿಂದ ಕರೆಯಲಾದ ದೇವರ ಮಂಜೂಷವನ್ನು ತೆಗೆದುಕೊಂಡು ಬರಲು, ದಾವೀದನೂ, ಸಮಸ್ತ ಇಸ್ರಾಯೇಲರೂ ಯೆಹೂದಕ್ಕೆ ಸೇರಿದ ಕಿರ್ಯತ್ ಯಾರೀಮಿನ ಬಾಲಾ ಎಂಬಲ್ಲಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 13:6
16 ತಿಳಿವುಗಳ ಹೋಲಿಕೆ  

ಅದು ಆ ಬೆಟ್ಟದ ತುದಿಯಿಂದ ಮುಂದೆ ನೆಪ್ತೋಹ ಬುಗ್ಗೆ, ಎಫ್ರೋನ್ ಬೆಟ್ಟದ ನಗರಗಳು ಇವುಗಳ ಮೇಲೆ ಕಿರ್ಯತ್ಯಾರೀಮ್ ಎನಿಸಿಕೊಳ್ಳುವ ಬಾಲಾ ಎಂಬ ಊರಿಗೆ ಹೋಗುತ್ತದೆ.


“ಇಸ್ರಯೇಲಿನ ದೇವರೇ, ಸರ್ವೇಶ್ವರಾ, ಕೆರೂಬಿಗಳ ಮೇಲೆ ಆಸೀನಾರೂಢರಾಗಿರುವವರೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀವೊಬ್ಬರೇ; ಪರಲೋಕ ಭೂಲೋಕಗಳನ್ನುಂಟುಮಾಡಿದವರು ನೀವೇ.


ಅಲ್ಲಿಯೇ ನಾನು ನಿಮಗೆ ದರ್ಶನವನ್ನು ಕೊಡುವೆನು. ಕೃಪಾಸನದ ಮೇಲೆ ಅಜ್ಞಾಶಾಸನಗಳನ್ನಿಟ್ಟಿರುವ ಮಂಜೂಷದ ಮೇಲಿನ ಎರಡು ಕೆರೂಬಿಗಳ ನಡುವೆಯೇ ನಾನಿದ್ದು ನಿನ್ನ ಸಂಗಡ ಮಾತಾಡುವೆನು. ನೀನು ಇಸ್ರಯೇಲರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲ ವಿಷಯಗಳನ್ನು ತಿಳಿಸುವೆನು.


ಅಂತೆಯೇ ಜನರನ್ನು ಕಳುಹಿಸಿ ಕೆರೂಬಿಗಳ ಮಧ್ಯದಲ್ಲಿ ಆಸೀನರಾಗಿರುವ ಸೇನಾಧೀಶ್ವರನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.


ಕಿರ್ಯಾತ್ಯಾರಿಮ್ ಅನ್ನಿಸಿಕೊಳ್ಳುವ ಕಿರ್ಯತ್ ಬಾಳ್, ರಬ್ಬಾ ಎಂಬ ಎರಡು ನಗರಗಳು ಮತ್ತು ಅವುಗಳ ಗ್ರಾಮಗಳು.


“ಇಸ್ರಯೇಲಿನ ದೇವರೇ, ಸೇನಾಧೀಶ್ವರ ಸರ್ವೇಶ್ವರಾ, ಕೆರೂಬಿಗಳ ಮೇಲೆ ಆಸೀನಾರೂಢರಾಗಿರುವವರೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀವೊಬ್ಬರೇ; ಪರಲೋಕ ಭೂಲೋಕಗಳನ್ನುಂಟುಮಾಡಿದವರು ನೀವೇ.


ವಹಿಸಿಹನು ಪ್ರಭು ರಾಜ್ಯಾಧಿಕಾರವನು : ನಡುಗುತಿಹುದು ಜನಾಂಗವು I ಕೆರೂಬಿಯರ ಮಧ್ಯೆ ಆಸೀನನಾಗಿಹನು : ಕಂಪಿಸುತಿಹುದು ಜಗವು II


ಕಿವಿಗೊಟ್ಟು ಆಲಿಸೋ, ಇಸ್ರಯೇಲರ ಮೇಷಪಾಲನೇ I ಜೋಸೆಫನ ವಂಶಜರನು ಕುರಿಹಿಂಡಂತೆ ಕರೆತಂದವನೇ I ವಿರಾಜಿಸು, ಕೆರೂಬಿಯರ ಮಧ್ಯೆ ಆಸೀನನಾದವನೇ II


‘ನಾನು ನನ್ನ ಜನರಾದ ಇಸ್ರಯೇಲರನ್ನು ಈಜಿಪ್ಟಿನಿಂದ ಬರಮಾಡಿದಂದಿನಿಂದ ನನ್ನ ನಾಮದ ನಿವಾಸಕ್ಕಾಗಿ ಆಲಯ ಸ್ಥಾನವನ್ನಾಗಲಿ, ಇಸ್ರಯೇಲ್ ಕುಲಗಳ ಯಾವ ಪಟ್ಟಣವನ್ನಾಗಲಿ ಆರಿಸಿಕೊಳ್ಳಲಿಲ್ಲ. ಆದರೆ ನನ್ನ ಪ್ರಜೆ ಇಸ್ರಯೇಲರನ್ನು ಆಳುವುದಕ್ಕೆ ದಾವೀದನನ್ನು ಆರಿಸಿಕೊಂಡೆ’ ಎಂದು ಹೇಳಿದ್ದರು.


ಹೀಗೆ ಅವರು ಇಸ್ರಯೇಲರ ಮೇಲೆ ನನ್ನ ಹೆಸರನ್ನು ಉಚ್ಛರಿಸುವಾಗ ನಾನು ಅವರನ್ನು ಆಶೀರ್ವದಿಸುವೆನು.”


ನೀವು ಆತನಲ್ಲಿ ಲಕ್ಷ್ಯವಿಟ್ಟು ಮಾತಿಗೆ ಕಿವಿಗೊಡಬೇಕು. ಆತನಿಗೆ ಅವಿಧೇಯರಾಗಿ ಇರಬಾರದು. ಏಕೆಂದರೆ ಆತ ಬರುವುದು ನನ್ನ ಹೆಸರಿನಲ್ಲಿ. ನೀವು ಅವಿಧೇಯರಾದರೆ ಆತ ನಿಮ್ಮನ್ನು ಕ್ಷಮಿಸಲಾರನು.


ನನಗಾಗಿ ನೀವು ಮಣ್ಣಿನಿಂದ ಒಂದು ಬಲಿಪೀಠವನ್ನು ಮಾಡಬೇಕು. ಅದರ ಮೇಲೆ ನಿಮ್ಮ ದನಕುರಿಗಳನ್ನು ದಹನ ಬಲಿಯನ್ನಾಗಿಯೂ ಸಮಾಧಾನ ಬಲಿಯನ್ನಾಗಿಯೂ ಸಮರ್ಪಿಸಬೇಕು.


ಹೇಗೆಂದರೆ - ಮೂರನೆಯ ದಿನದಂದು ಇಸ್ರಯೇಲರು ಹೊರಟು ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಊರುಗಳನ್ನು ಸೇರಿದರು. ಆಗ ಆ ಊರುಗಳು ಆ ಜನರದ್ದೇ ಎಂದು ಗೊತ್ತಾಯಿತು.


ಕಿರ್ಯತ್ಯಾರೀಮಿನವರ ಬಳಿಗೆ ದೂತರನ್ನು ಕಳುಹಿಸಿ, “ಫಿಲಿಷ್ಟಿಯರು ಸರ್ವೇಶ್ವರನ ಮಂಜೂಷವನ್ನು ಕಳುಹಿಸಿದ್ದಾರೆ; ನೀವು ಬಂದು ಅದನ್ನು ತೆಗೆದುಕೊಂಡು ಹೋಗಿ,” ಎಂದು ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು