Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 13:7 - ಕನ್ನಡ ಸತ್ಯವೇದವು C.L. Bible (BSI)

7 ಅಬೀನಾದಾಬಿನ ಮನೆಯಿಂದ ಆ ದೇವಮಂಜೂಷವನ್ನು ಹೊರಗೆ ತಂದು, ಒಂದು ಹೊಸ ಎತ್ತಿನ ಬಂಡಿಯ ಮೇಲಿಟ್ಟರು. ಉಜ್ಜನೂ ಅಹಿಯೋವನೂ ಬಂಡಿಯನ್ನು ನಡೆಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ದೇವರ ಮಂಜೂಷವನ್ನು ಅಬೀನಾದಾಬನ ಮನೆಯಿಂದ ಹೊರಗೆ ತಂದು, ಒಂದು ಹೊಸ ಬಂಡಿಯ ಮೇಲೆ ಇಟ್ಟರು. ಉಜ್ಜನೂ ಮತ್ತು ಅಹಿಯೋವನೂ ಬಂಡಿಯನ್ನು ಓಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ದೇವಮಂಜೂಷವನ್ನು ಅಬೀನಾದಾಬನ ಮನೆಯಿಂದ ಹೊರಗೆ ತಂದು ಒಂದು ಹೊಸ ಬಂಡಿಯ ಮೇಲೆ ಏರಿಸಿದರು. ಉಜ್ಜನೂ ಅಹಿಯೋವನೂ ಬಂಡಿಯನ್ನು ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅಬೀನಾದಾಬನ ಮನೆಯಲ್ಲಿದ್ದ ಒಡಂಬಡಿಕೆಯ ಪೆಟ್ಟಿಗೆಯನ್ನು ಜನರು ಎತ್ತಿ ಒಂದು ಹೊಸ ಬಂಡಿಯಲ್ಲಿಟ್ಟರು. ಉಜ್ಜನೂ ಅಹಿಯೋವನೂ ಆ ಬಂಡಿಯನ್ನು ನಡೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಅಬೀನಾದಾಬನ ಮನೆಯೊಳಗಿಂದ ದೇವರ ಮಂಜೂಷವನ್ನು ತೆಗೆದುಕೊಂಡು, ಅದನ್ನು ಹೊಸ ಬಂಡಿಯ ಮೇಲೆ ಏರಿಸಿದರು. ಉಜ್ಜನು ಹಾಗೂ ಅಹಿಯೋವನು ಆ ಹೊಸ ಬಂಡಿಯನ್ನು ನಡೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 13:7
7 ತಿಳಿವುಗಳ ಹೋಲಿಕೆ  

ಆರೋನನು ಮತ್ತು ಅವನ ಮಕ್ಕಳು ದಂಡು ಹೊರಡುವ ಕಾಲದಲ್ಲಿ ದೇವಸ್ಥಾನದ ಎಲ್ಲ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು. ಮುಟ್ಟಿದರೆ ಬದುಕಲಾರರು. ಕೆಹಾತ್ಯರು ದೇವದರ್ಶನದ ಗುಡಾರದ ಸಲಕರಣೆಗಳಲ್ಲಿ ಹೊರಬೇಕಾದವುಗಳು ಇವೇ.


ಮೊದಲೊಂದು ಸಾರಿ, ಅದನ್ನು ತರಲು ನೀವು ಇಲ್ಲದೇ ಹೋದುದರಿಂದ ಹಾಗು ನಾವು ತಕ್ಕ ರೀತಿಯಲ್ಲಿ ಅವರನ್ನು ಆರಾಧಿಸದೇ ಹೋದುದಕ್ಕಾಗಿ ನಮ್ಮ ದೇವರಾದ ಸರ್ವೇಶ್ವರ ನಮ್ಮನ್ನು ಶಿಕ್ಷಿಸಿದರು,” ಎಂದು ಅವರನ್ನು ಎಚ್ಚರಿಸಿದನು.


‘ಲೇವಿಯರು ಮಾತ್ರವೇ ದೇವಮಂಜೂಷವನ್ನು ಹೊರಬೇಕು. ಏಕೆಂದರೆ ಸದಾಕಾಲ ತಮ್ಮ ಸೇವೆಮಾಡುವುದಕ್ಕೂ ಮಂಜೂಷವನ್ನು ಹೊರುವುದಕ್ಕೂ ಸರ್ವೇಶ್ವರನಿಂದ ಆಯ್ಕೆಯಾದವರು ಅವರೇ’ ಎಂದು ನಿಶ್ಚಯಿಸಿಕೊಂಡನು.


ದೇವರ ಆ ಮಂಜೂಷವನ್ನು ಗುಡ್ಡದ ಮೇಲಿರುವ ಅಬೀನಾದಾಬನ ಮನೆಯಿಂದ ಹೊರಗೆ ತಂದು ಅದನ್ನು ಒಂದು ಹೊಸ ಬಂಡಿಯ ಮೇಲೆ ಏರಿಸಿದರು. ಅಬೀನಾದಾಬನ ಮಕ್ಕಳಾದ ಉಜ್ಜನು ಹಾಗು ಅಹೀಯೋವನು ಆ ಬಂಡಿಯನ್ನು ನಡೆಸಿದರು.


ಈಗ ನೀವು ಒಂದು ಹೊಸ ಒಡಂಬಡಿಕೆಯನ್ನು ಮಾಡಿಸಿರಿ. ಅದಕ್ಕೆ ಹಾಲುಕರೆಯುವ ಮತ್ತು ಎಂದೂ ನೊಗಹೊರದ ಎರಡು ಹಸುಗಳನ್ನು ಹೂಡಿಸಿರಿ.


ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಿಂದ ತೆಗೆಯಲಾದ ಆ ದೇವರ ಮಂಜೂಷದ ಮುಂದೆ ಅಹೀಯೋವನು ನಡೆಯುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು