Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 14:1 - ಕನ್ನಡ ಸತ್ಯವೇದವು C.L. Bible (BSI)

1 ಟೈರಿನ ಅರಸ ಹೀರಾಮನು ದಾವೀದನ ಬಳಿಗೆ ತನ್ನ ವಾಣಿಜ್ಯ ನಿಯೋಗವನ್ನು ಕಳುಹಿಸಿದನು. ಅರಮನೆಯನ್ನು ಕಟ್ಟಲು ಅವನಿಗೆ ದೇವದಾರು ಮರದ ದಿಮ್ಮಿಗಳನ್ನು, ಶಿಲ್ಪಿಗಳನ್ನು ಹಾಗು ಬಡಗಿಯವರನ್ನು ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತೂರಿನ ಅರಸನಾದ ಹೀರಾಮನು ದಾವೀದನಿಗೆ ಅರಮನೆಯನ್ನು ಕಟ್ಟುವುದಕ್ಕೋಸ್ಕರ ದೂತರನ್ನೂ, ದೇವದಾರುಮರಗಳನ್ನೂ, ಶಿಲ್ಪಿಗಳನ್ನೂ ಮತ್ತು ಬಡಗಿಗಳನ್ನು ಅವನ ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತೂರಿನ ಅರಸನಾದ ಹೀರಾಮನು ದಾವೀದನಿಗೆ ಅರಮನೆಯನ್ನು ಕಟ್ಟುವದಕ್ಕೋಸ್ಕರ ದೂತರನ್ನೂ ದೇವದಾರು ಮರಗಳನ್ನೂ ಶಿಲ್ಪಿಗಳನ್ನೂ ಬಡಗಿಯವರನ್ನೂ ಅವನ ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ತೂರ್ ಪಟ್ಟಣದ ರಾಜನಾದ ಹೀರಾಮನು ದಾವೀದನ ಬಳಿಗೆ ತನ್ನ ಸಂದೇಶಕರನ್ನು ಕಳುಹಿಸಿದನು. ಇವರೊಂದಿಗೆ ದೇವದಾರು ಮರದ ತೊಲೆಗಳನ್ನು, ಕಲ್ಲುಕುಟಿಗರನ್ನು ಮತ್ತು ಬಡಗಿಯರನ್ನು ಕಳುಹಿಸಿದನು. ದಾವೀದನಿಗೊಂದು ಮನೆಯನ್ನು ಕಟ್ಟಲು ಇವರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಟೈರಿನ ಅರಸನಾದ ಹೀರಾಮನು ದಾವೀದನಿಗೆ ಅರಮನೆಯನ್ನು ಕಟ್ಟುವುದಕ್ಕೋಸ್ಕರ ದೂತರನ್ನು, ದೇವದಾರು ಮರಗಳನ್ನು, ಬಡಗಿಯವರನ್ನು ಮತ್ತು ಕಲ್ಲುಕುಟಿಗರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 14:1
16 ತಿಳಿವುಗಳ ಹೋಲಿಕೆ  

ಆದರೆ ಪರ್ಷಿಯ ರಾಜನಾದ ಸೈರಸನಿಂದ ಪಡೆದುಕೊಂಡ ಅಪ್ಪಣೆಯ ಮೇರೆಗೆ ಜನರು ಕಲ್ಲುಕುಟಿಗನಿಗೆ ಹಾಗು ಬಡಗಿಗೆ ಹಣವನ್ನು ಕೊಟ್ಟಿದ್ದರು. ಅಂತೆಯೇ ಲೆಬನೋನಿನಿಂದ ಸಮುದ್ರ ಮಾರ್ಗವಾಗಿ, ಜೊಪ್ಪಕ್ಕೆ ದೇವದಾರು ಮರಗಳನ್ನು ತರತಕ್ಕ ಸಿದೋನ್ಯರಿಗೆ ಹಾಗು ಟೈರಿನವರಿಗೆ ಅನ್ನಪಾನಗಳನ್ನೂ ಎಣ್ಣೆಯನ್ನೂ ಕೊಟ್ಟಿದ್ದರು.


ಇದಲ್ಲದೆ, ಟೈರಿನ ಅರಸ ಹೂರಾಮನಿಗೆ ದೂತರ ಮುಖಾಂತರ, “ನನ್ನ ತಂದೆ ದಾವೀದ ತಮ್ಮ ವಾಸಕ್ಕೆ ಅರಮನೆಯನ್ನು ಕಟ್ಟಿಸಿಕೊಳ್ಳುವುದಕ್ಕಾಗಿ ನೀನು ದೇವದಾರು ಮರಗಳನ್ನು ಕಳುಹಿಸಿದೆ.


ಅನಂತರ ದಾವೀದನು ಇಸ್ರಯೇಲ್ ನಾಡಿನಲ್ಲಿದ್ದ ಅನ್ಯಜನಗಳನ್ನು ಕೂಡಿಸುವುದಕ್ಕೆ ಆಜ್ಞಾಪಿಸಿದನು. ಅವರಲ್ಲಿದ್ದ ಕಲ್ಲುಕುಟಿಗರನ್ನು ದೇವಾಲಯದ ಕಟ್ಟಡಕ್ಕಾಗಿ ಕಲ್ಲುಗಳನ್ನು ಕೆತ್ತುವುದಕ್ಕೆ ನೇಮಿಸಿದನು.


ಆಗ ಅರಸ ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದನು.


ಸೊಲೊಮೋನನ ಮತ್ತು ಹೀರಾಮನ ಶಿಲ್ಪಿಗಳೂ ಗೆಬಾಲ್ಯರೂ ಅವುಗಳನ್ನು ಕೆತ್ತುತ್ತಿದ್ದರು. ದೇವಾಲಯ ಕಟ್ಟುವುದಕ್ಕೆ ಬೇಕಾದ ಕಲ್ಲು, ಮರಗಳನ್ನು ಸಿದ್ಧಪಡಿಸಿದವರು ಇವರೇ.


ನೀನು ನನಗೋಸ್ಕರ ಲೆಬನೋನಿನ ದೇವದಾರು ವೃಕ್ಷಗಳನ್ನು ಕೊಯ್ಯಬೇಕೆಂದು ನಿನ್ನ ಆಳುಗಳಿಗೆ ಆಜ್ಞಾಪಿಸು; ಅವರ ಜೊತೆಯಲ್ಲಿ ನನ್ನ ಆಳುಗಳನ್ನೂ ಕಳುಹಿಸುವೆನು. ಮತ್ತು ನಿನ್ನ ಆಳುಗಳಿಗೆ ನೀನು ಹೇಳುವಷ್ಟು ಸಂಬಳವನ್ನು ಕೊಡುತ್ತೇನೆ. ಸಿದೋನ್ಯರಂತೆ ಮರಕೊಯ್ಯುವುದರಲ್ಲಿ ಜಾಣರು ನಮ್ಮಲ್ಲಿರುವುದಿಲ್ಲವೆಂದು ನಿನಗೆ ಗೊತ್ತಿದೆಯಲ್ಲವೆ?” ಎಂದು ಹೇಳಿಸಿದನು.


ದಾವೀದನಿಗೆ ಜೀವಮಾನದಲ್ಲೆಲ್ಲಾ ಆಪ್ತಮಿತ್ರನಾಗಿದ್ದ ಟೈರಿನ ಅರಸನಾದ ಹೀರಾಮನು, ಸೊಲೊಮೋನನು ತಂದೆಗೆ ಬದಲಾಗಿ ಪಟ್ಟಾಭಿಷೇಕ ಪಡೆದಿದ್ದಾನೆಂದು ಕೇಳಿ, ಅವನ ಬಳಿಗೆ ತನ್ನ ಸೇವಕರನ್ನು ಕಳುಹಿಸಿದನು.


ಒಂದು ದಿನ ಅವನು ಪ್ರವಾದಿ ನಾತಾನನಿಗೆ, “ನೋಡು, ನಾನು ವಾಸಮಾಡುತ್ತಿರುವುದು ದೇವದಾರು ಮರದಿಂದ ಮಾಡಿದ ಅರಮನೆಯಲ್ಲಿ ; ಆದರೆ ದೇವರ ಮಂಜೂಷ ಇರುವುದು ಬಟ್ಟೆಯ ಗುಡಾರದಲ್ಲಿ!” ಎಂದನು.


ಹೀಗೆ ದಾವೀದನು ದೇವಪ್ರಜೆಗಳಾದ ಇಸ್ರಯೇಲರ ನಿಮಿತ್ತ ತನ್ನ ರಾಜ್ಯವನ್ನು ಉನ್ನತ ಸ್ಥಾನಕ್ಕೇರಿಸಿ ತನ್ನನ್ನು ಇಸ್ರಯೇಲ್ ರಾಜನನ್ನಾಗಿ ಸ್ಥಿರಪಡಿಸುವರೆಂದು ತಿಳಿದುಕೊಂಡನು.


ಇದಲ್ಲದೆ, ಸೊಲೊಮೋನನಿಗೆ ಎಪ್ಪತ್ತು ಸಾವಿರಮಂದಿ ಹೊರೆಹೊರುವವರೂ ಎಂಬತ್ತು ಸಾವಿರಮಂದಿ ಕಲ್ಲುಗಣಿಯಲ್ಲಿ ಕೆಲಸಮಾಡುವವರೂ ಇದ್ದರು.


ಇಪ್ಪತ್ತು ಸಾವಿರ ಮಂದಿ ಹೊರೆಹೊರುವವರೂ ಎಂಬತ್ತು ಸಾವಿರ ಮಂದಿ ಕಲ್ಲುಗಣಿಯಲ್ಲಿ ಕೆಲಸಮಾಡುವವರನ್ನೂ ಇವರ ಮೇಲ್ವಿಚಾರಣೆಗಾಗಿ ಮೂರು ಸಾವಿರದ ಆರುನೂರು ಮಂದಿ ಮೇಸ್ತ್ರಿಗಳನ್ನೂ ಎಣಿಸಿ ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು