1 ಪೂರ್ವಕಾಲ ವೃತ್ತಾಂತ 14:10 - ಕನ್ನಡ ಸತ್ಯವೇದವು C.L. Bible (BSI)10 “ಫಿಲಿಷ್ಟಿಯರ ಮೇಲೆ ನಾನು ದಾಳಿಮಾಡಬಹುದೊ? ನೀವು ನನಗೆ ಜಯವನ್ನು ಕೊಡುವಿರೋ", ಎಂದು ದಾವೀದನು ದೇವರಾದ ಸರ್ವೇಶ್ವರನನ್ನು ಪ್ರಾರ್ಥಿಸಿದನು. “ಹೌದು, ಅವರನ್ನು ಎದುರಿಸು, ನಾನು ನಿನಗೆ ಜಯವನ್ನು ಕೊಡುವೆನು,” ಎಂದು ಸರ್ವೇಶ್ವರ ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ದಾವೀದನು ದೇವರಾದ ಯೆಹೋವನನ್ನು, “ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿಯೋ” ಎಂದು ಕೇಳಿದನು. ಅದಕ್ಕೆ ಯೆಹೋವನು, “ಹೋಗು ನಾನು ಅವರನ್ನು ನಿನ್ನ ಕೈಗೆ ಒಪ್ಪಿಸುವೆನು” ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿಯೋ ಎಂದು ಕೇಳಲು ಆತನು - ಹೋಗು, ನಾನು ಅವರನ್ನು ನಿನ್ನ ಕೈಗೆ ಒಪ್ಪಿಸುವೆನು ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ದಾವೀದನು ಯೆಹೋವನಿಗೆ, “ನಾನು ಫಿಲಿಷ್ಟಿಯರ ಸಂಗಡ ಯುದ್ಧಕ್ಕೆ ಹೋಗಬಹುದೇ?” ಎಂದು ವಿಚಾರಿಸಲಾಗಿ ಯೆಹೋವನು ಅವನಿಗೆ, “ಹೋಗು, ನಾನು ನಿನಗೆ ಫಿಲಿಷ್ಟಿಯರ ಮೇಲೆ ಜಯ ಕೊಡುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅದಕ್ಕೆ ದಾವೀದನು, “ನಾನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋಗಬಹುದೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವಿರೋ?” ಎಂದು ದೇವರನ್ನು ವಿಚಾರಿಸಿದನು. ಆಗ ಯೆಹೋವ ದೇವರು ಅವನಿಗೆ, “ಹೋಗು, ನಾನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |