1 ಪೂರ್ವಕಾಲ ವೃತ್ತಾಂತ 14:15 - ಕನ್ನಡ ಸತ್ಯವೇದವು C.L. Bible (BSI)15 ಆ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳುವಾಗ, ದೇವರು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕಾಗಿ ನನಗೆ ಮುಂದಾಗಿ ಹೊರಟಿದ್ದಾರೆಂದು ತಿಳಿದುಕೊಂಡು ಅವರ ಮೇಲೆ ದಾಳಿಮಾಡು,” ಎಂದು ಸರ್ವೇಶ್ವರ ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಬಾಕಾಮರಗಳ ತುದಿಯಲ್ಲಿ ಹೆಜ್ಜೆಗಳ ಶಬ್ದವು ಕೇಳಿಸುವಾಗಲೇ ದೇವರು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕೋಸ್ಕರ ನಿನ್ನನ್ನು ಮುನ್ನಡೆಸುತ್ತಿದ್ದಾನೆ ಎಂದು ತಿಳಿದುಕೊಂಡು ಯುದ್ಧಕ್ಕೆ ಹೊರಡು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳವು ಕೇಳಿಸುವಾಗಲೇ ದೇವರು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವದಕ್ಕೋಸ್ಕರ ನಿನ್ನ ಮುಂದಾಗಿ ಹೊರಟನೆಂದು ತಿಳಿದುಕೊಂಡು ಯುದ್ಧಕ್ಕೆ ಹೊರಡು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಒಬ್ಬ ಕಾವಲುಗಾರನನ್ನು ಮರಕ್ಕೆ ಹತ್ತಿಸು; ಫಿಲಿಷ್ಟಿಯರು ಬರುವ ಸಪ್ಪಳ ಕೇಳಿದೊಡನೆ ಅವರ ಮೇಲೆ ದಾಳಿಮಾಡು. ನಾನು ನಿನ್ನ ಮುಂದಾಗಿ ಹೋಗಿ ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಬಾಕಾಮರಗಳ ತುದಿಗಳಲ್ಲಿ ನಡೆದುಬರುವ ಶಬ್ದವನ್ನು ನೀನು ಕೇಳಿದಾಗಲೇ, ದೇವರು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಟರೆಂದು ತಿಳಿದುಕೊಂಡು ಯುದ್ಧಕ್ಕೆ ಹೊರಡು,” ಎಂದರು. ಅಧ್ಯಾಯವನ್ನು ನೋಡಿ |