Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 14:3 - ಕನ್ನಡ ಸತ್ಯವೇದವು C.L. Bible (BSI)

3 ಜೆರುಸಲೇಮಿನಲ್ಲೂ ದಾವೀದನು ಹಲವು ಮಹಿಳೆಯರನ್ನು ವಿವಾಹವಾಗಿ ಇನ್ನೂ ಕೆಲವು ಮಂದಿ ಗಂಡು ಮಕ್ಕಳನ್ನೂ ಹೆಣ್ಣು ಮಕ್ಕಳನ್ನೂ ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದಾವೀದನು ಯೆರೂಸಲೇಮಿನಲ್ಲಿಯೂ ಸಹ ಕೆಲವು ಸ್ತ್ರೀಯರನ್ನು ಮದುವೆಮಾಡಿಕೊಂಡು ಇನ್ನೂ ಕೆಲವು ಗಂಡು ಹೆಣ್ಣು ಮಕ್ಕಳನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದಾವೀದನು ಯೆರೂಸಲೇವಿುನಲ್ಲಿ ಸಹ ಕೆಲವು ಮಂದಿ ಸ್ತ್ರೀಯರನ್ನು ಮದುವೆಮಾಡಿಕೊಂಡು ಇನ್ನೂ ಕೆಲವು ಮಂದಿ ಗಂಡು ಹೆಣ್ಣು ಮಕ್ಕಳನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಜೆರುಸಲೇಮಿನಲ್ಲಿ ದಾವೀದನು ಇನ್ನೂ ಹಲವು ಸ್ತ್ರೀಯರನ್ನು ಮದುವೆಯಾದನು. ಅವನಿಗೆ ಅನೇಕ ಗಂಡುಹೆಣ್ಣು ಮಕ್ಕಳು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದಾವೀದನು ಯೆರೂಸಲೇಮಿನಲ್ಲಿ ಸಹ ಕೆಲವು ಸ್ತ್ರೀಯರನ್ನು ಮದುವೆಮಾಡಿಕೊಂಡನು. ಇನ್ನೂ ಹೆಚ್ಚು ಪುತ್ರ, ಪುತ್ರಿಯರನ್ನೂ ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 14:3
13 ತಿಳಿವುಗಳ ಹೋಲಿಕೆ  

“ನಿಮ್ಮ ಹೆಂಡತಿಯನ್ನು ನೀವು ಬಿಟ್ಟುಬಿಡಬಹುದೆಂದು ಮೋಶೆ ಅನುಮತಿ ಇತ್ತದ್ದು ನಿಮ್ಮ ಹೃದಯ ಕಾಠಿಣ್ಯದ ನಿಮಿತ್ತದಿಂದಲೇ. ಆದರೆ ಅದು ಆದಿಯಿಂದಲೇ ಹಾಗಿರಲಿಲ್ಲ.


ಇದಕ್ಕೆ ಕಾರಣವೇನೆಂದು ಕೇಳುತ್ತೀರೋ? ಕಾರಣ ಇದೇ: ನಿನಗೂ ನಿನ್ನ ಹೆಂಡತಿಗೂ ಯೌವನದಲ್ಲಿ ಆದ ವಿವಾಹದ ಒಪ್ಪಂದಕ್ಕೆ ಸರ್ವೇಶ್ವರಸ್ವಾಮಿಯೇ ಸಾಕ್ಷಿ. ಆದರೂ ನಿನ್ನ ಅರ್ಧಾಂಗಿ ಹಾಗು ನ್ಯಾಯವಾದ ಧರ್ಮಪತ್ನಿ ಆದ ಆಕೆಗೆ ದ್ರೋಹಮಾಡಿರುವೆ.


ಲೋಕದಲ್ಲಿ ದೇವರು ವಿಧಿಸಿರುವ ಈ ನಿರರ್ಥಕ ಜೀವಮಾನದ ನಿರರ್ಥಕ ದಿನದಿನವೂ ನಿನ್ನ ಪ್ರಿಯ ಪತ್ನಿಯೊಡನೆ ಸುಖದಿಂದ ಬದುಕು; ಇಹಲೋಕದ ನಿನ್ನ ಬಾಳಿನಲ್ಲಿ ನೀನು ಪಡುವ ಪಾಡಿಗೆ ಇದೇ ನಿನ್ನ ಪಾಲಿಗೆ ಬಂದ ಪಂಚಾಮೃತ.


ಅವನಿಗೆ ರಾಜವಂಶದವರಾದ ಏಳುನೂರು ಮಂದಿ ಪತ್ನಿಯರಲ್ಲದೆ ಮುನ್ನೂರು ಮಂದಿ ಉಪಪತ್ನಿಯರಿದ್ದರು. ಈ ಮಹಿಳೆಯರು ಅವನ ಮನಸ್ಸನ್ನು ಕೆಡಿಸಿಬಿಟ್ಟರು.


ಹೆಬ್ರೋನಿನಿಂದ ಜೆರುಸಲೇಮಿಗೆ ಬಂದ ಮೇಲೆ ದಾವೀದನು ಹೆಚ್ಚುಮಂದಿ ಸ್ತ್ರೀಯರನ್ನು ಪತ್ನಿಯರನ್ನಾಗಿ ಹಾಗು ಉಪಪತ್ನಿಯರನ್ನಾಗಿ ಮಾಡಿಕೊಂಡನು. ಅವನಿಗೆ ಇನ್ನೂ ಕೆಲವು ಮಂದಿ ಗಂಡುಹೆಣ್ಣು ಮಕ್ಕಳು ಹುಟ್ಟಿದರು.


ಅವನು ಅನೇಕ ಸ್ತ್ರೀಯರನ್ನು ಮದುವೆಮಾಡಿಕೊಳ್ಳಬಾರದು; ಮಾಡಿಕೊಂಡರೆ ಅವನ ಮನಸ್ಸು ಸರ್ವೇಶ್ವರನಿಗೆ ವಿಮುಖವಾಗಲು ಅವಕಾಶವಾಗುವುದು. ಅವನು ಬೆಳ್ಳಿಬಂಗಾರವನ್ನು ವಿಶೇಷವಾಗಿ ಗಳಿಸಿಕೊಳ್ಳಬಾರದು.


ಹೀಗೆ ದಾವೀದನು ದೇವಪ್ರಜೆಗಳಾದ ಇಸ್ರಯೇಲರ ನಿಮಿತ್ತ ತನ್ನ ರಾಜ್ಯವನ್ನು ಉನ್ನತ ಸ್ಥಾನಕ್ಕೇರಿಸಿ ತನ್ನನ್ನು ಇಸ್ರಯೇಲ್ ರಾಜನನ್ನಾಗಿ ಸ್ಥಿರಪಡಿಸುವರೆಂದು ತಿಳಿದುಕೊಂಡನು.


ಜೆರುಸಲೇಮಿನಲ್ಲಿ ಅವನಿಗೆ ಹುಟ್ಟಿದ ಗಂಡು ಮಕ್ಕಳು: ಶಮ್ಮೂವ, ಶೋಬಾಬ್, ನಾತಾನ್, ಸೊಲೊಮೋನ್,


ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗ ಸೊಲೊಮೋನನನ್ನು ಸರ್ವೇಶ್ವರನ ರಾಜ್ಯಸಿಂಹಾಸನವಾಗಿರುವ ಇಸ್ರಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೆ ಆರಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು