Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 14:9 - ಕನ್ನಡ ಸತ್ಯವೇದವು C.L. Bible (BSI)

9 ಫಿಲಿಷ್ಟಿಯರು ರೆಫಾಯಿಮ್ ಕಣಿವೆಯನ್ನು ತಲುಪಿ ಸುಲಿಗೆಮಾಡಲು ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಫಿಲಿಷ್ಟಿಯರು ದೇಶದೊಳಗೆ ನುಗ್ಗಿ, ರೆಫಾಯೀಮ್ ತಗ್ಗಿನಲ್ಲಿ ಸುಲಿಗೆಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಫಿಲಿಷ್ಟಿಯರು ದೇಶದೊಳಗೆ ನುಗ್ಗಿ ರೆಫಾಯೀಮ್ ತಗ್ಗಿನಲ್ಲಿ ಸುಲಿಗೆ ಮಾಡುತ್ತಿದ್ದದರಿಂದ ದಾವೀದನು ದೇವರಾದ ಯೆಹೋವನನ್ನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಫಿಲಿಷ್ಟಿಯರು ರೆಫಾಯೀಮ್ ತಗ್ಗಿನಲ್ಲಿ ವಾಸಿಸುತ್ತಿದ್ದ ಇಸ್ರೇಲರ ಮೇಲೆ ದಾಳಿಮಾಡಿ ಅವರದನ್ನೆಲ್ಲಾ ದೋಚಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಫಿಲಿಷ್ಟಿಯರು ಬಂದು ರೆಫಾಯಿಮ್ ತಗ್ಗಿನಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 14:9
7 ತಿಳಿವುಗಳ ಹೋಲಿಕೆ  

ಅದುಲ್ಲಾಮ್ ಗವಿಯ ಹತ್ತಿರ ದಾವೀದನು ವಾಸಿಸುತ್ತಿದ್ದಾಗ, ಮೂವತ್ತು ಪ್ರಮುಖ ರಣವೀರರಲ್ಲಿ ಮೂವರು ಒಂದು ದಿನ ಒಂದು ಬಂಡೆಯ ಬಳಿಗೆ ಹೋದರು. ಅಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ಕೊಳ್ಳದಲ್ಲಿ ಬೀಡುಬಿಟ್ಟದ್ದನ್ನು ಕಂಡರು.


ಸ್ವಲ್ಪವೇ ಸಮಯದ ನಂತರ ಫಿಲಿಷ್ಟಿಯರು ಪುನಃ ಬಂದು ಕಣಿವೆಯಲ್ಲಿ ಕೊಳ್ಳೆ ಹೊಡೆಯಲು ಪ್ರಾರಂಭಿಸಿದರು.


ಅದು ಕೊಯ್ದ ಹೊಲದಂತಿರುವುದು, ತೆನೆಕತ್ತರಿಸಿದ ಹುಲ್ಲಿನಂತಿರುವುದು. ಕೂಳೆಯನ್ನೂ ಬಿಡದೆ ಆಯ್ದುಕೊಂಡ ರೆಫಾಯಿಮ್ ಕಣಿವೆಯಂತೆ ಇರುವುದು.


ಮೂವತ್ತು ಮಂದಿ ಪ್ರಸಿದ್ಧ ಶೂರರಲ್ಲಿ ಮೂರು ಮಂದಿ, ದಾವೀದನು ಅದುಲ್ಲಾಮ್ ಗವಿಯಲ್ಲಿದ್ದಾಗ, ಸುಗ್ಗೀಕಾಲದಲ್ಲಿ ಅವನ ಬಳಿಗೆ ಬಂದರು. ಫಿಲಿಷ್ಟಿಯರು ದಂಡೆತ್ತಿಬಂದು ರೆಫಾಯಿಮ್ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಾಗ


ಫಿಲಿಷ್ಟಿಯರು ನಾಡಿನೊಳಗೆ ನುಗ್ಗಿ ರೆಫಾಯಿಮ್ ತಗ್ಗಿಗೆ ಬಂದು ಪಾಳೆಯ ಮಾಡಿಕೊಂಡರು.


ದಾವೀದನು ಇಸ್ರಯೇಲರೆಲ್ಲರ ಇಡೀ ನಾಡಿಗೆ ಅರಸನಾಗಿ ಅಭಿಷಿಕ್ತನಾಗಿದ್ದಾನೆಂಬ ವರ್ತಮಾನವನ್ನು ಫಿಲಿಷ್ಟಿಯರು ಕೇಳಿದರು. ಅವನನ್ನು ಸೆರೆಹಿಡಿಯಲು ತಮ್ಮ ಸೈನ್ಯವನ್ನು ಕಳುಹಿಸಿದರು. ದಾವೀದನು ಅವರನ್ನು ಎದುರಿಸಲು ಸಿದ್ಧನಾದನು.


“ಫಿಲಿಷ್ಟಿಯರ ಮೇಲೆ ನಾನು ದಾಳಿಮಾಡಬಹುದೊ? ನೀವು ನನಗೆ ಜಯವನ್ನು ಕೊಡುವಿರೋ", ಎಂದು ದಾವೀದನು ದೇವರಾದ ಸರ್ವೇಶ್ವರನನ್ನು ಪ್ರಾರ್ಥಿಸಿದನು. “ಹೌದು, ಅವರನ್ನು ಎದುರಿಸು, ನಾನು ನಿನಗೆ ಜಯವನ್ನು ಕೊಡುವೆನು,” ಎಂದು ಸರ್ವೇಶ್ವರ ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು