Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 15:14 - ಕನ್ನಡ ಸತ್ಯವೇದವು C.L. Bible (BSI)

14 ಆಗ ಯಾಜಕರೂ ಲೇವಿಯರೂ ಇಸ್ರಯೇಲರ ದೇವರಾದ ಸರ್ವೇಶ್ವರನ ಮಂಜೂಷವನ್ನು ತರುವುದಕ್ಕಾಗಿ ತಮ್ಮನ್ನೇ ಶುದ್ಧೀಕರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಯಾಜಕರೂ ಮತ್ತು ಲೇವಿಯರೂ ಇಸ್ರಾಯೇಲರ ದೇವರಾದ ಯೆಹೋವನ ಮಂಜೂಷವನ್ನು ತರುವುದಕ್ಕೋಸ್ಕರ ತಮ್ಮನ್ನು ಶುದ್ಧಪಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯಾಜಕರೂ ಲೇವಿಯರೂ ಇಸ್ರಾಯೇಲ್ ದೇವರಾದ ಯೆಹೋವನ ಮಂಜೂಷವನ್ನು ತರುವದಕ್ಕೋಸ್ಕರ ತಮ್ಮನ್ನು ಶುದ್ಧಿಪಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಗ ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಿಮಾಡಿಕೊಂಡರು. ಇಸ್ರೇಲರ ದೇವರಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ತರಲು ತಮ್ಮನ್ನು ಸಿದ್ಧಪಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇಸ್ರಾಯೇಲಿನ ದೇವರಾದ ಯೆಹೋವ ದೇವರ ಮಂಜೂಷವನ್ನು ತರುವುದಕ್ಕೆ ಯಾಜಕರೂ, ಲೇವಿಯರೂ ತಮ್ಮನ್ನು ಪರಿಶುದ್ಧ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 15:14
8 ತಿಳಿವುಗಳ ಹೋಲಿಕೆ  

ಈ ಎಲ್ಲಾ ಪ್ರಾಣಿಗಳನ್ನು ವಧಿಸುವ ಕೆಲಸಕ್ಕೆ ಯಾಜಕರು ಸಾಲದೆಹೋದುದರಿಂದ ಆ ಕಾರ್ಯ ಮುಗಿವ ತನಕ, ಅವರ ಬಂಧುಗಳಾದ ಲೇವಿಯರು ಅವರಿಗೆ ಸಹಾಯ ಮಾಡುತ್ತಿದ್ದರು; ಅಷ್ಟರಲ್ಲಿ ಮಿಕ್ಕ ಯಾಜಕರು ತಮ್ಮನ್ನೇ ಶುದ್ಧೀಪಡಿಸಿಕೊಳ್ಳುತ್ತಿದ್ದರು. ತಮ್ಮನ್ನು ಶುದ್ಧಪಡಿಸಿಕೊಳ್ಳುವುದರಲ್ಲಿ ಯಾಜಕರಿಗಿಂತ ಲೇವಿಯರೇ ಹೆಚ್ಚು ಶ್ರದ್ಧೆಯುಳ್ಳವರಾಗಿದ್ದರು.


ಎಂಬ ಲೇವಿಯರು ಮುಂದೆ ಬಂದು ತಮ್ಮ ಸಹೋದರರನ್ನು ಒಂದುಗೂಡಿಸಿದರು. ಅವರು ಅರಸನ ಆಜ್ಞಾಧಾರಕರಾಗಿ ಸರ್ವೇಶ್ವರನ ಧರ್ಮಶಾಸ್ತ್ರವಿಧಿಯ ಮೇರೆಗೆ ತಮ್ಮನ್ನು ಶುದ್ಧಪಡಿಸಿಕೊಂಡು ಸರ್ವೇಶ್ವರನ ಆಲಯವನ್ನು ಶುದ್ಧೀಕರಿಸುವುದಕ್ಕೆ ಸಿದ್ಧರಾದರು.


ಆಗ ಮೋಶೆ ಆರೋನನಿಗೆ: “’ನನ್ನ ಬಳಿಯಿರುವವರ ಮುಖಾಂತರವೆ ನನ್ನ ಪರಿಶುದ್ಧತೆಯನ್ನು ತೋರ್ಪಡಿಸುವೆ ಜನರೆಲ್ಲರ ಸಮ್ಮುಖದಲೆ ನನ್ನ ಮಹಿಮೆಯನು ಶೃತಪಡಿಸುವೆ, ಎಂಬ ಸರ್ವೇಶ್ವರನ ನುಡಿಗೆ ಇದೊಂದು ದೃಷ್ಟಾಂತವೇ ಸರಿ,” ಎಂದನು. ಅದಕ್ಕೆ ಆರೋನನು ಮೌನವಾಗಿದ್ದನು.


“ನೀವು ಲೇವಿಯರ ಗೋತ್ರಗಳ ನಾಯಕರು; ನಾನು ಸಿದ್ಧಪಡಿಸಿದ ಸ್ಥಳಕ್ಕೆ ಇಸ್ರಯೇಲರ ದೇವರಾದ ಸರ್ವೇಶ್ವರನ ಮಂಜೂಷವನ್ನು ತರುವುದಕ್ಕಾಗಿ ನೀವು ಹಾಗು ನಿಮ್ಮ ಜೊತೆಯಲ್ಲಿ ಲೇವಿಯರೂ ನಿಮ್ಮನ್ನೇ ಶುದ್ಧಪಡಿಸಿಕೊಳ್ಳಿರಿ.


ಲೇವಿಯರು ಅದನ್ನು ಗುದಿಗೆಗಳ ಮೇಲಿಟ್ಟು, ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ, ತಮ್ಮ ಹೆಗಲಮೇಲೆ ಹೊತ್ತುಕೊಂಡು ನಡೆದರು.


ಕೂಡಿಬಂದಿದ್ದ ಯಾಜಕರು, ವರ್ಗವ್ಯತ್ಯಾಸವಿಲ್ಲದೆ ಎಲ್ಲರೂ ತಮ್ಮನ್ನು ಶುದ್ಧಪಡಿಸಿಕೊಂಡಿದ್ದರು.


ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಿಪಡಿಸಿಕೊಂಡ ಮೇಲೆ ಜನರನ್ನೂ ಊರುಬಾಗಿಲುಗಳನ್ನೂ ಗೋಡೆಯನ್ನೂ ಶುದ್ಧಪಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು