1 ಪೂರ್ವಕಾಲ ವೃತ್ತಾಂತ 15:17 - ಕನ್ನಡ ಸತ್ಯವೇದವು C.L. Bible (BSI)17-21 ಗಾಯಕರ ಮಂಡಳಿಯಿಂದ ಕಂಚಿನ ತಾಳಗಳನ್ನು ಬಾರಿಸಲು ಆಯ್ಕೆಹೊಂದಿದವರು: ಯೋವೇಲನ ಮಗ ಹೇಮಾನ್, ಅವನ ಬಂಧು ಬೆರೆಕ್ಯನ ಮಗ ಆಸಾಫ್, ಮೆರಾರೀ ಕುಟುಂಬಕ್ಕೆ ಸೇರಿದ ಕೂಷಾಯನ ಮಗ ಏತಾನ್ ಎಂಬವರು. ತಮಗೆ ಸಹಾಯ ಮಾಡಲು ತಾರಸ್ಥಾಯಿಯ ತಂತಿವಾದ್ಯಗಳನ್ನು ಬಾರಿಸಲು ಜೆಕರ್ಯ, ಬೇನ್, ಯಾಜೀಯೇಲ್, ಶಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ ಹಾಗು ಮಸೇಯ ಎಂಬವರನ್ನು ಆರಿಸಿಕೊಂಡರು. ಮಂದ್ರಸ್ಥಾಯಿಯ ಕಿನ್ನರಿಗಳನ್ನು ಬಾರಿಸಲು ಮತಿತ್ಯ, ಎಲೀಫೆಲೇಹು, ಮಿಕ್ನೇಯ, ದೇವಾಲಯದ ದ್ವಾರಪಾಲಕರಾದ ಓಬೇದೆದೋಮ್ ಮತ್ತು ಯೆಗೀಯೇಲರನ್ನೂ ನೇಮಿಸಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆಗ ಅವರು ಯೋವೇಲನ ಮಗನಾದ ಹೇಮಾನ್, ಅವನ ಗೋತ್ರಬಂಧುವೂ ಬೆರೆಕ್ಯನ ಮಗನೂ ಆದ ಆಸಾಫ್, ತಮ್ಮ ಸಹೋದರರಾದ ಮೆರಾರೀಯರ ಕುಟುಂಬಕ್ಕೆ ಸೇರಿದ ಕೂಷಾಯನ ಮಗನಾದ ಏತಾನ್ ಎಂಬುವರನ್ನಲ್ಲದೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವರು ಯೋವೇಲನ ಮಗನಾದ ಹೇಮಾನ್, ಅವನ ಗೋತ್ರ ಬಂಧುವೂ ಬೆರೆಕ್ಯನ ಮಗನೂ ಆದ ಆಸಾಫ್, ತಮ್ಮ ಸಹೋದರರಾದ ಮೆರಾರೀಯರ ಕುಟುಂಬಕ್ಕೆ ಸೇರಿದ ಕೂಷಾಯನ ಮಗನಾದ ಏತಾನ್ ಎಂಬವರನ್ನಲ್ಲದೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಲೇವಿಯರು ಹೋಗಿ ಹೇಮಾನನನ್ನೂ ಅವನ ಸಹೋದರರನ್ನೂ ಆಸಾಫನನ್ನೂ ಏತಾನನನ್ನೂ ಕರೆತಂದರು. ಹೇಮಾನನು ಯೋವೇಲನ ಮಗ. ಆಸಾಫನು ಬೆರೆಕ್ಯನ ಮಗ. ಏತಾನನು ಕೂಷಾಯನ ಮಗ. ಇವರೆಲ್ಲಾ ಮೆರಾರೀಯ ಸಂತತಿಯವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಹಾಗೆಯೇ ಲೇವಿಯರು ಯೋಯೇಲನ ಮಗನಾದ ಹೇಮಾನನನ್ನೂ, ಅವನ ಸಹೋದರರಲ್ಲಿ ಬೆರೆಕ್ಯನ ಮಗನಾದ ಆಸಾಫನನ್ನೂ, ಮೆರಾರೀಯ ಪುತ್ರರ ಸಂಬಂಧಿಕರಲ್ಲಿ ಕೂಷಾಯನ ಮಗ ಏತಾನನನ್ನೂ ನೇಮಿಸಿದರು. ಅಧ್ಯಾಯವನ್ನು ನೋಡಿ |