Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 15:28 - ಕನ್ನಡ ಸತ್ಯವೇದವು C.L. Bible (BSI)

28 ಹೀಗೆ ಎಲ್ಲಾ ಇಸ್ರಯೇಲರು ಜೆರುಸಲೇಮಿನವರೆಗೆ ಆನಂದಘೋಷಣೆಗಳಿಂದಲೂ ತುತೂರಿ, ಕೊಂಬು, ತಾಳ, ತಂತಿ, ವಾದ್ಯಗಳ ಸಂಗೀತದಿಂದಲೂ ಸರ್ವೇಶ್ವರನ ನಿಬಂಧನಾ ಮಂಜೂಷವನ್ನು ಹೊತ್ತುತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಹೀಗೆ ಎಲ್ಲಾ ಇಸ್ರಾಯೇಲರು ಆನಂದ ಘೋಷಣೆಗಳಿಂದಲೂ, ಕೊಂಬು ಮತ್ತು ತುತ್ತೂರಿಗಳನ್ನು, ತಾಳ, ತಂತಿ ವಾದ್ಯಗಳ ಸಂಗೀತದಿಂದ ತಾಳಹಾಕುತ್ತಾ ಕಿನ್ನರಿ ಸ್ವರಮಂಡಲಗಳನ್ನು ನುಡಿಸುತ್ತಾ, ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಹೀಗೆ ಎಲ್ಲಾ ಇಸ್ರಾಯೇಲ್ಯರು ಆರ್ಭಟಿಸುತ್ತಾ ಕೊಂಬು ತುತೂರಿಗಳನ್ನು ಗಟ್ಟಿಯಾಗಿ ಊದುತ್ತಾ ತಾಳಹೊಡೆಯುತ್ತಾ ಕಿನ್ನರಿ ಸ್ವರಮಂಡಲಗಳನ್ನು ಬಾರಿಸುತ್ತಾ ಯೆಹೋವನ ನಿಬಂಧನಮಂಜೂಷವನ್ನು ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಹೀಗೆ ಎಲ್ಲಾ ಇಸ್ರೇಲರು ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಬಂದರು. ಅವರು ಕೊಂಬುಗಳನ್ನೂ ತುತ್ತೂರಿಗಳನ್ನೂ ಊದಿದರು; ಹಾರ್ಪ್ ವಾದ್ಯಗಳನ್ನು, ಲೈರ್ ವಾದ್ಯಗಳನ್ನು ಮತ್ತು ತಾಳಗಳನ್ನು ಬಾರಿಸಿದರು; ಆನಂದದಿಂದ ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಹೀಗೆ ಇಸ್ರಾಯೇಲರೆಲ್ಲರೂ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಆರ್ಭಟದಿಂದಲೂ, ಕೊಂಬಿನ ಶಬ್ದದಿಂದಲೂ, ತುತೂರಿಗಳಿಂದಲೂ, ತಾಳಗಳಿಂದಲೂ ವೀಣೆಗಳನ್ನೂ, ಕಿನ್ನರಿಗಳನ್ನೂ ಬಾರಿಸುತ್ತಾ ತೆಗೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 15:28
16 ತಿಳಿವುಗಳ ಹೋಲಿಕೆ  

ದಾವೀದನೂ ಎಲ್ಲಾ ಜನರೂ ಕಿನ್ನರಿ, ಸ್ವರಮಂಡಲ, ತಮಟೆ, ತಾಳ, ತುತೂರಿ ಮುಂತಾದ ವಾದ್ಯಗಳನ್ನು ಬಾರಿಸುತ್ತಾ ಪೂರ್ಣಶಕ್ತಿಯಿಂದ ಹಾಡುತ್ತಾ ದೇವರ ಮುಂದೆ ನರ್ತಿಸುತ್ತಾ ನಡೆದರು.


ಸ್ವರಮಂಡಲ, ಕಿನ್ನರಿ, ತಾಳಗಳೊಂದಿಗೆ ಸಂಭ್ರಮದಿಂದ ವಾದ್ಯಗಳನ್ನು ಬಾರಿಸುವುದಕ್ಕೂ ಹಾಡುವುದಕ್ಕೂ ವಿವಿಧ ಲೇವಿಯರನ್ನು ನೇಮಿಸಬೇಕೆಂದು ದಾವೀದನು ಲೇವಿಯರ ನಾಯಕನಿಗೆ ಆಜ್ಞಾಪಿಸಿದನು.


ಮುಂಗಡೆಯಲಿದೋ ಹಾಡುಗಾರರು I ಹಿಂಗಡೆಯಲಿದೋ ವಾದ್ಯಗಾರರು I ನಡುವೆ ದಮ್ಮಡಿ ಬಡಿವ ಮಹಿಳೆಯರು II


ಹೀಗೆ ದಾವೀದನು ಹಾಗು ಎಲ್ಲ ಇಸ್ರಯೇಲರೂ ಜಯಕಾರ ಮಾಡುತ್ತಾ ತುತ್ತೂರಿ ಊದುತ್ತಾ ಸರ್ವೇಶ್ವರನ ಮಂಜೂಷವನ್ನು ತಂದರು.


ದಾವೀದನೂ ಎಲ್ಲ ಇಸ್ರಯೇಲರೂ ಕಿನ್ನರಿ, ಸ್ವರಮಂಡಲ, ತಮಟೆ, ಝಲ್ಲರಿ, ತಾಳ ಇವುಗಳನ್ನು ಬಾರಿಸಿಕೊಂಡು, ಪೂರ್ಣಾವೇಶದಿಂದ ಗೀತೆಗಳನ್ನು ಹಾಡುತ್ತಾ, ಸರ್ವೇಶ್ವರನ ಮುಂದೆ ನರ್ತನ ಮಾಡುತ್ತಾ ಹೋದರು.


ದಾವೀದನು, ಮಂಜೂಷ ಹೊತ್ತವರು, ವಾದ್ಯ ಬಾರಿಸುವವರು ಹಾಗು ಅವರ ನಾಯಕ ಕೆನನ್ಯನು ಅತ್ಯುತ್ತಮ ನೂಲಿನಿಂದ ತಯಾರಿಸಿದ ನಿಲುವಂಗಿಗಳನ್ನು ಧರಿಸಿದ್ದರು. ದಾವೀದನು ಏಫೋದನ್ನು ಕೂಡ ಧರಿಸಿಕೊಂಡಿದ್ದನು.


ಆ ಮಂಜೂಷ ಪಟ್ಟಣದೊಳಗೆ ಬರುತ್ತಿದ್ದಂತೆ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಇಣಿಕಿ ನೋಡಿದಳು. ದಾವೀದನು ಸಂತೋಷದಿಂದ ಕುಣಿಯುತ್ತಾ ನರ್ತಿಸುತ್ತಾ ಇದ್ದುದನ್ನು ಕಂಡಳು. ಅದನ್ನು ನೋಡಿ ಅವನ ಬಗ್ಗೆ ಅವಳಲ್ಲಿ ತಿರಸ್ಕಾರ ಭಾವ ಮೂಡಿತು.


ಜೆರುಸಲೇಮಿನ ಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ, ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು ಕೀರ್ತನಗಾಯನಗಳಿಂದಲೂ ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿಗೆ ಕರೆಯಿಸಲಾಯಿತು.


ದಾವೀದನು ಹಾಗೂ ಆರಾಧಕ ಮಂಡಲಿಯ ಮುಖ್ಯಸ್ಥರು ಕಿನ್ನರಿ, ಸ್ವರಮಂಡಲ, ತಾಳ ಇವುಗಳನ್ನು ಬಾರಿಸುತ್ತಾ, ಪರವಶರಾಗಿ ಗಾಯನ ಸೇವೆ ಮಾಡುವುದಕ್ಕಾಗಿ ಆಸಾಫ್ಯರನ್ನೂ ಹೇಮಾನ್ಯರನ್ನೂ ಯೆದುತೂನ್ಯರನ್ನೂ ಆರಿಸಿದರು. ಈ ಸೇವೆಯನ್ನು ಮಾಡಬೇಕಾಗಿದ್ದ ಪುರುಷರ ಪಟ್ಟಿ:


ಕೀರ್ತಿಸಿರಿ, ನಮ್ಮ ದೇವನನು ಸಂಕೀರ್ತಿಸಿರಿ I ಕೀರ್ತಿಸಿರಿ, ನಮ್ಮ ರಾಜನನು ಸಂಕೀರ್ತಿಸಿರಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು