Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:10 - ಕನ್ನಡ ಸತ್ಯವೇದವು C.L. Bible (BSI)

10 ಹೆಮ್ಮೆಪಡಿ, ನೆನೆದು ಆತನ ಶ್ರೀನಾಮವನು I ಹಿಗ್ಗಲಿ ಹೃದಯ, ಕೋರಿ ಆತನ ದರ್ಶನವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆತನ ಪರಿಶುದ್ಧನಾಮದಲ್ಲಿ ಸಂತೋಷಪಡಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ನಿತ್ಯವೂ ಅಪೇಕ್ಷಿಸಿ ಹರ್ಷಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆತನ ಪರಿಶುದ್ಧನಾಮದಲ್ಲಿ ಹಿಗ್ಗಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ಹರ್ಷಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನ ಪರಿಶುದ್ಧನಾಮದಲ್ಲಿ ಹಿಗ್ಗಿರಿ; ಆತನ ದರ್ಶನಕ್ಕಾಗಿ ಬರುವವರೇ, ಸಂತೋಷಪಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದೇವರ ಪರಿಶುದ್ಧ ನಾಮವನ್ನು ಹೊಗಳಿರಿ, ಯೆಹೋವ ದೇವರನ್ನು ಹುಡುಕುವವರ ಹೃದಯವು ಸಂತೋಷಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:10
16 ತಿಳಿವುಗಳ ಹೋಲಿಕೆ  

ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ ಹಂಬಲಿಸಿ ಹುಡುಕುವವರು ನನ್ನನ್ನು ಕಂಡುಕೊಳ್ಳುತ್ತಾರೆ.


ಪ್ರಭುವಿನಲ್ಲಿದೆ ನನ್ನ ಮನದಭಿಮಾನ I ದೀನರಿದನು ಕೇಳಿ, ಪಡೆಯಲಿ ಸುಮ್ಮಾನ I


ನೀವು ನನ್ನನ್ನು ಹುಡುಕುವಿರಿ. ಮನಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.


ಪಡೆವರು ಇಸ್ರಯೇಲಿನ ವಂಶಜರೆಲ್ಲರು ಸರ್ವೇಶ್ವರನಲ್ಲೇ ಜೀವೋದ್ಧಾರವನು, ಆನಂದವನು.”


ನಾನು ಗುಟ್ಟುಗುಟ್ಟಾಗಿ ಮಾತಾಡಿದವನಲ್ಲ ಕಗ್ಗತ್ತಲೆಯೊಳಗಿನಿಂದ ನುಡಿದವನಲ್ಲ ಶೂನ್ಯದಲ್ಲಿ ನನ್ನ ಹುಡುಕಿರಿ ಎಂದು ಯಕೋಬ ವಂಶಕ್ಕೆ ಹೇಳಿದವನಲ್ಲ. ಸರ್ವೇಶ್ವರನಾದ ನಾನು ಸತ್ಯಾನುಸಾರ ನುಡಿಯುವವನು, ನೆಟ್ಟನೆಯ ಮಾತುಗಳನ್ನೆ ಸ್ಪಷ್ಟವಾಗಿ ಹೇಳುವವನು.”


“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


ಹಾಡಿ ಪಾಡಿ ಹೊಗಳಿರಿ ಆತನನು I ಧ್ಯಾನಿಸಿ ಆತನ ಪವಾಡಗಳನು II


ಆಶ್ರಯಿಸಿರಿ ಸರ್ವೇಶನನೂ ಆತನ ಶಕ್ತಿಯನೂ I ಅಪೇಕ್ಷಿಸಿ ನಿತ್ಯವೂ ಆತನ ದರ್ಶನವನು II


ಆದುದರಿಂದ ನೀವು ಪೂರ್ಣಮನಸ್ಸಿನಿಂದ, ಪೂರ್ಣಪ್ರಾಣದಿಂದ ನಿಮ್ಮ ದೇವರಾದ ಸರ್ವೇಶ್ವರನ ದರ್ಶನವನ್ನು ಬಯಸಿರಿ. ಏಳಿ, ನಿಮ್ಮ ದೇವರಾದ ಸರ್ವೇಶ್ವರನ ನಿಬಂಧನ ಮಂಜೂಷವನ್ನೂ ದೇವಾರಾಧನೆಗೆ ಬೇಕಾದ ಸಾಮಗ್ರಿಗಳನ್ನೂ ಸರ್ವೇಶ್ವರನ ಹೆಸರಿಗಾಗಿ ಕಟ್ಟಲಾಗುವ ಮಂದಿರದಲ್ಲಿ ಇಡಿ,” ಎಂದು ಹೇಳಿದನು.


ಈ ಪ್ರಮಾಣದ ನಿಮಿತ್ತ ಯೆಹೂದ್ಯರೆಲ್ಲರಿಗೆ ಸಂತೋಷವಾಯಿತು. ಅವರು ಪೂರ್ಣಮನಸ್ಸಿನಿಂದ ಪ್ರಮಾಣಮಾಡಿ ತುಂಬಾ ಲವಲವಿಕೆಯಿಂದ ಸರ್ವೇಶ್ವರನನ್ನು ಬಯಸಿದ ಕಾರಣ, ಸರ್ವೇಶ್ವರ ಅವರಿಗೆ ಪ್ರಸನ್ನರಾಗಿ ಎಲ್ಲಾ ಕಡೆಗಳಲ್ಲೂ ಶಾಂತಿಸಮಾಧಾನವನ್ನು ಅನುಗ್ರಹಿಸಿದರು.


ಎಚ್ಚೆತ್ತು ಅಭಿಮುಖವಾಗುವುದು ಜಗದಾದ್ಯಂತ ಪ್ರಭುಗೆ I ಸಾಷ್ಟಾಂಗವೆರಗುವುವು ಧರೆಯ ಸರ್ವಜನಾಂಗಗಳು ಆತನಿಗೆ II


ಬನ್ನಿ, ಕೊಂಡಾಡುವ ಪ್ರಭು ದೇವನನು II ಘನಪಡಿಸೋಣ ಅವನ ಶ್ರೀನಾಮವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು