Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:15 - ಕನ್ನಡ ಸತ್ಯವೇದವು C.L. Bible (BSI)

15 ನೆನಪಿನಲ್ಲಿಡುವನು ಪ್ರಭು ತನ್ನ ವಾಗ್ದಾನವನು I ಸಾವಿರಾರು ತಲೆಗಳವರೆಗೂ ತನ್ನೊಪ್ಪಂದವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆತನು ಸಾವಿರಾರು ತಲೆಮಾರಿನವರೆಗೂ ಇರುವಂತೆ ಮಾಡಿದ ವಾಗ್ದಾನ ಮತ್ತು ಆತನ ಒಡಂಬಡಿಕೆ ಇವುಗಳನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆತನು ಸಾವಿರ ತಲೆಗಳವರೆಗಿರುವವರಿಗೂ ಮಾಡಿದ ವಾಗ್ದಾನ, ಆತನ ಒಡಂಬಡಿಕೆ ಇವುಗಳನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೋವನ ಒಡಂಬಡಿಕೆಯನ್ನು ಸದಾಕಾಲ ನೆನಪಿನಲ್ಲಿಡಿರಿ. ಆತನು ಆ ಆಜ್ಞೆಗಳನ್ನು ಸಾವಿರ ತಲೆಮಾರುಗಳಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ದೇವರು ತಮ್ಮ ಒಡಂಬಡಿಕೆಯನ್ನೂ, ಸಾವಿರ ತಲಾಂತರಗಳಿಗೆ ಆಜ್ಞಾಪಿಸಿದ ತಮ್ಮ ಮಾತನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:15
7 ತಿಳಿವುಗಳ ಹೋಲಿಕೆ  

ನೆನಪಿನಲ್ಲಿಡುವನು ಪ್ರಭು ತನ್ನ ವಾಗ್ದಾನವನು I ಸಾವಿರಾರು ತಲೆಗಳವರೆಗೂ ತನ್ನೊಪ್ಪಂದವನು II


“ನಾನು ನನ್ನ ದಾಸನಾದ ಮೋಶೆಗೆ ಬೋಧಿಸಿದ ಧರ್ಮಶಾಸ್ತ್ರವನ್ನು ಜ್ಞಾಪಕಕ್ಕೆ ತಂದುಕೊಳ್ಳಿ. ಆ ವಿಧಿನಿಯಮಗಳನ್ನು ಆತನಿಗೆ ಹೋರೇಬ್ ಬೆಟ್ಟದಲ್ಲಿ ಕೊಟ್ಟದ್ದು ಇಸ್ರಯೇಲರು ಅವುಗಳನ್ನು ಅನುಸರಿಸಲೆಂದೇ.”


ನಿನ್ನ ಮರೆಯಲಿಲ್ಲ, ನಿನ್ನ ಒಪ್ಪಂದವನು ಮೀರಲಿಲ್ಲ I ಆದರೂ ಒದಗಿವೆಯಲ್ಲ ನಮಗೀ ಅನಾಹುತಗಳೆಲ್ಲ II


ಪ್ರಭುವಿನೊಪ್ಪಂದಗಳ ಪಾಲಕರಿಗೆ ಆತನ ಮಾರ್ಗಗಳು ಸನ್ನುತ I ಆತನ ವಿಧಿ ನಿಬಂಧನೆಗಳ ಪರಿಪಾಲಕರಿಗೆ ಅವುಗಳು ಸುಪ್ರೀತ II


ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೊಬ್ಬರೇ ದೇವರೆಂದು ತಿಳಿದುಕೊಳ್ಳಬೇಕು. ಅವರೇ ನಂಬಿಕಸ್ತರಾದ ದೇವರು; ತಮ್ಮನ್ನು ಪ್ರೀತಿಸಿ ತಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ತಾವು ಮಾಡಿದ ವಾಗ್ದಾನವನ್ನು ನೆರವೇರಿಸಿ, ತಮ್ಮ ಅಚಲಪ್ರೀತಿಯನ್ನು ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ತೋರಿಸುವರು.


ಸರ್ವೇಶ ನಮ್ಮ ದೇವನೆಂಬುದು ಪ್ರಕಟಿತ I ಆತನಿತ್ತ ತೀರ್ಪು ವಿಶ್ವವ್ಯಾಪ್ತ II


ಅಬ್ರಹಾಮನೊಡನೆ ಮಾಡಿಕೊಂಡ ಒಡಂಬಡಿಕೆಯನು I ಇಸಾಕನಿಗೆ ಆಣೆಯಿಟ್ಟು ಆತನು ಹೇಳಿದುದನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು