Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:23 - ಕನ್ನಡ ಸತ್ಯವೇದವು C.L. Bible (BSI)

23 ಸರ್ವ ಭೂನಿವಾಸಿಗಳೇ, ಸರ್ವೇಶ್ವರನಿಗೆ ಹಾಡಿರಿ I ಆತನ ಮುಕ್ತಿಮಾರ್ಗವನು ಪ್ರತಿನಿತ್ಯವೂ ಸಾರಿರಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಎಲ್ಲಾ ಭೂನಿವಾಸಿಗಳೇ ಯೆಹೋವನಿಗೆ ಕೀರ್ತನೆಯನ್ನು ಹಾಡಿರಿ. ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಎಲ್ಲಾ ಭೂನಿವಾಸಿಗಳೇ, ಯೆಹೋವನಿಗೆ ಕೀರ್ತನೆಯನ್ನು ಹಾಡಿರಿ; ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಭೂನಿವಾಸಿಗಳೇ, ಯೆಹೋವನಿಗೆ ಕೀರ್ತನೆಯನ್ನು ಹಾಡಿರಿ; ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಸಮಸ್ತ ಭೂನಿವಾಸಿಗಳೇ, ಯೆಹೋವ ದೇವರಿಗೆ ಹಾಡಿರಿ. ಅವರ ರಕ್ಷಣೆಯನ್ನು ದಿನಂಪ್ರತಿ ಸಾರಿ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:23
9 ತಿಳಿವುಗಳ ಹೋಲಿಕೆ  

ವರ್ಣಿಸುವೆನು ದಿನವೆಲ್ಲ ನಿನ್ನ ನ್ಯಾಯನೀತಿಯನು I ವಿವರಿಸಲು ಅಸದಳವಾದ ನಿನ್ನಗಣಿತ ರಕ್ಷಣೆಯನು II


ಹಾಡಿರಿ ಸರ್ವೇಶ್ವರನಿಗೆ ಸ್ತುತಿಯನು ಎಸಗಿಹನಾತ ಮಹಿಮಾಕಾರ್ಯಗಳನು ತಿಳಿಸಿರಿ ಜಗದಾದ್ಯಂತಕೆ ಈ ವಿಷಯವನು.


ಬಚ್ಚಿಟ್ಟುಕೊಳ್ಳಲಿಲ್ಲ ನನ್ನೆದೆಯೊಳು ನಿನ್ನ ಸತ್ಸಂಬಂಧವನು I ಪ್ರಕಟಿಸಿದೆನು ಜೀವೋದ್ಧಾರವನು, ನಿನ್ನ ಪ್ರಾಮಾಣಿಕತೆಯನು I ಮಹಾಸಭೆಗೆ ಮರೆಯಿಸದೆ ಸಾರಿದೆನು ನಿನ್ನ ಪ್ರೀತಿ ಸತ್ಯತೆಯನು II


ಭಕ್ತರೇ, ಸಂಕೀರ್ತಿಸಿರಿ ಪ್ರಭುವನು I ಮಾಡಿರಿ ಆತನ ನಾಮಸ್ಮರಣೆಯನು II


ಹಾಡಿ ಪಾಡಿ ಹೊಗಳಿರಿ ಆತನನು I ಧ್ಯಾನಿಸಿ ಆತನ ಪವಾಡಗಳನು II


ಮಿರ್ಯಾಮಳು ಅವರ ಹಾಡಿಗೆ ಈ ಪಲ್ಲವಿಯನ್ನು ಕೂಡಿಸಿದಳು: ಮಾಡಿರಿ ಸರ್ವೇಶ್ವರನ ಗುಣಗಾನ ಮಹೋನ್ನತ ಆತ ಗಳಿಸಿದ ವಿಜಯ ಕಡಲಲ್ಲಿ ಕೆಡವಿ ನಾಶಮಾಡಿಹನು ಕುದುರೆಗಳನು, ರಾಹುತರನು


ಪ್ರಸಿದ್ಧಪಡಿಸಿರಿ ಆತನ ಘನತೆಯನು ರಾಷ್ಟ್ರಗಳಿಗೆ I ಆತನದ್ಭುತ ಕಾರ್ಯಗಳನು ಸಕಲ ಜನಾಂಗಗಳಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು