Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:29 - ಕನ್ನಡ ಸತ್ಯವೇದವು C.L. Bible (BSI)

29 ಆತನ ನಾಮಕೆ ಘನತೆ ಗೌರವವನು ತನ್ನಿ I ಕಾಣಿಕೆಯೊಂದಿಗೆ ಆತನ ಮಂದಿರಕೆ ಬನ್ನಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ. ಕಾಣಿಕೆ ಸಹಿತ ಆತನ ಸನ್ನಿಧಿಗೆ ಬನ್ನಿರಿ. ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ; ಕಾಣಿಕೆಸಹಿತ ಆತನ ಸನ್ನಿಧಿಗೆ ಬನ್ನಿರಿ. ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೆಹೋವನ ಮಹಿಮೆಯನ್ನು ಕೊಂಡಾಡಿರಿ; ಆತನ ಹೆಸರಿಗೆ ಘನತೆಯನ್ನು ಸಲ್ಲಿಸಿರಿ. ನಿಮ್ಮ ಕಾಣಿಕೆಗಳನ್ನು ಆತನ ಬಳಿಗೆ ತನ್ನಿರಿ; ಆತನ ಪರಿಶುದ್ಧ ನಾಮವನ್ನು ಆರಾಧಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯೆಹೋವ ದೇವರ ಹೆಸರಿಗೆ ಸಲ್ಲತಕ್ಕ ಗೌರವವನ್ನು ಸಲ್ಲಿಸಿರಿ; ಕಾಣಿಕೆಯನ್ನು ತೆಗೆದುಕೊಂಡು ದೇವರ ಸನ್ನಿಧಿಗೆ ಬನ್ನಿರಿ. ಪರಿಶುದ್ಧತೆ ಎಂಬ ಭೂಷಣದೊಡನೆ ಯೆಹೋವ ದೇವರನ್ನು ಆರಾಧಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:29
28 ತಿಳಿವುಗಳ ಹೋಲಿಕೆ  

ಆತನ ಗೃಹದ್ವಾರವನು ಪ್ರವೇಶಿಸಿ ಧನ್ಯವಾದದೊಂದಿಗೆ I ಆತನ ಆವರಣದಲಿ ನಿಲ್ಲಿರಿ ಸ್ತುತಿಸ್ತೋತ್ರಗಳೊಂದಿಗೆ I ಆತನ ನಾಮವನು ಕೊಂಡಾಡಿ ಉಪಕಾರಸ್ಮರಣೆಯೊಂದಿಗೆ II


ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ : “ಪವಿತ್ರ, ಪವಿತ್ರ, ಪವಿತ್ರ ಸೇನಾಧೀಶ್ವರ ಸರ್ವೇಶ್ವರ ಜಗವೆಲ್ಲ ಆತನ ಪ್ರಭಾವಭರಿತ” ಎಂದು ಕೂಗಿ ಹೇಳಿದನು.


ಪ್ರಭುವಿಗೆ ಮಣಿಯಿರಿ ಪವಿತ್ರ ವಸ್ತ್ರಧಾರಿಗಳಂತೆ I ಅಂಜಿಕೆಯಿಂದ ನಡುಗಲಿ ಜಗವಿಡೀ ಆತನ ಮುಂದೆ I


ಇವೆ ಮಹಿಮೆ, ಮಹತ್ವ, ಆತನ ಸನ್ನಿಧಿಯಲಿ I ಶಕ್ತಿಸೌಂದರ್ಯ ಆತನ ಗರ್ಭಗುಡಿಯಲಿ II


ಆತನ ಸನ್ನಿಧಿ ಸೇರೋಣ ಕೃತಜ್ಞತಾಸ್ತುತಿಯೊಂದಿಗೆ I ಜಯಜಯಕಾರ ಮಾಡೋಣ ಕೀರ್ತನೆಗಳಿಂದಾತನಿಗೆ II


ಸ್ತುತಿಸಿರಿ ಆತನ ಶ್ರೀನಾಮ ಮಹಿಮೆಯನು I ಪೂಜಿಸಿರಿ ಪವಿತ್ರಾಂಬರರಾಗಿ ಆತನನು II


ಅರಸ ಬಾಳಲಿ ಚಿರಕಾಲ; ದೊರಕಲಿ ಆತನಿಗೆ ಶೆಬಾದ ಬಂಗಾರ I ಜರುಗಲಿ ಪ್ರಾರ್ಥನೆ ಸದಾಕಾಲ; ಆಶೀರ್ವಾದ ಸಿಗಲಿ ಅನವರತ II


“ಆಮೆನ್‍, ಸ್ತುತಿಸ್ತೋತ್ರವೂ ಘನಮಾನವೂ ಜ್ಞಾನವೂ ಧನ್ಯವಾದವೂ ಶಕ್ತಿಯೂ ಪರಾಕ್ರಮವೂ ಸಲ್ಲಲಿ ಯುಗಯುಗಾಂತರಕ್ಕೂ, ಆಮೆನ್,” ಎಂದು ಹಾಡುತ್ತಾ ದೇವರನ್ನು ಆರಾಧಿಸಿದರು.


ಸೇನೆಯನು ನೀ ಅಣಿಗೊಳಿಸುವ ದಿನದೊಳು I ಸೇರಿಕೊಳ್ವರು ತಾವಾಗಿಯೇ ಪ್ರಜೆಗಳು I ಶುಭ್ರ ವಸ್ತ್ರಧರಿಸಿ ನಿನ್ನ ಯುವಕ ಯೋಧರು I ಉದಯಕಾಲದಿಬ್ಬನಿಯಂತೆ ಇಳಿದು ಬರುವರು II


ಆಮೇಲೆ ಜನರ ಸಮ್ಮತಿಯಿಂದ ಸರ್ವೇಶ್ವರನಿಗಾಗಿ ಗಾಯನಮಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡನು. ಅವರಿಗೆ, “ಪರಿಶುದ್ಧತ್ವವೆಂಬ ಭೂಷಣದೊಡನೆ ಯೋಧರ ಮುಂದೆ ಹೋಗುತ್ತಾ, “ಸರ್ವೇಶ್ವರನಿಗೆ ಕೃತಜ್ಞತಾ ಸ್ತುತಿಮಾಡಿರಿ, ಅವರ ಅಚಲಪ್ರೀತಿ ಶಾಶ್ವತ’ ಎಂದು ಭಜಿಸಿರಿ,” ಎಂಬುದಾಗಿ ಆಜ್ಞಾಪಿಸಿದನು.


“ನರಪುತ್ರನೇ, ಅವರಿಗೆ ಬಲಾಧಾರವೂ ನೇತ್ರಾನಂದವೂ ಆದ ಅವರ ಇಷ್ಟು ಸುಂದರ ಆಲಯವನ್ನೂ ಹೃದಯೋಲ್ಲಾಸವಾದ ಅವನ ಗಂಡು ಹೆಣ್ಣುಮಕ್ಕಳನ್ನೂ ನಾನು ನಿರ್ಮೂಲಮಾಡುವ ದಿನದಲ್ಲಿ


ಕಪ್ಪಗಳನರ್ಪಿಸಲಿ ತಾರ್ಷಿಷ್ ಹಾಗೂ ದ್ವೀಪದ್ವೀಪದ ರಾಜರುಗಳು I ಕಾಣಿಕೆಗಳ ತಂದೊಪ್ಪಿಸಲಿ ಶೆಬಾ ಹಾಗೂ ಸೆಬಾದ ರಾಜರುಗಳು II


ಸುರಸುಂದರವಾದ ಸಿಯೋನಿನಿಂದ I ಉದಯಸಿಹನು ದೇವನು ಶೋಭೆಯಿಂದ II


“ಅವರ ಆಭರಣಗಳ ಚಂದವು ಅವರಿಗೆ ಗರ್ವಕ್ಕೆ ಆಸ್ಪದವಾಯಿತು. ಇದಲ್ಲದೆ ಹೇಯವೂ ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು.


ನಿಮ್ಮ ದೇಶನಿವಾಸಿಗಳ ವಿನಾಶಕ್ಕೆ ಕಾರಣವಾಗಿರುವ ಈ ಗಡ್ಡೆಗಳ ಹಾಗು ಇಲಿಗಳ ರೂಪವನ್ನು ಚಿನ್ನದಿಂದ ಮಾಡಿಸಿ ಇಸ್ರಯೇಲ್ ದೇವರಿಗೆ ಬಹುಮಾನವಾಗಿ ಕೊಡಿ. ಆಗ ಆತನ ಶಿಕ್ಷಾಹಸ್ತ ನಿಮ್ಮನ್ನೂ ನಿಮ್ಮ ದೇವತೆಗಳನ್ನೂ ಹಾಗು ಪ್ರಾಂತ್ಯಗಳನ್ನೂ ಬಿಟ್ಟುಹೋಗಬಹುದು.


ಶಕ್ತಿಸಾಮರ್ಥ್ಯ ಸರ್ವೇಶ್ವರನವೇ ಎಂದು I ಜಗದ ರಾಷ್ಟ್ರಗಳು ಘನಪಡಿಸಲಿ ಆತನನು ಎಂದೆಂದೂ II


ಸರ್ವೇಶನಿಗೆ ಮಣಿಯಿರಿ ಪವಿತ್ರ ವಸ್ತ್ರಧಾರಿಗಳಂತೆ I ಅಂಜಿಕೆಯಿಂದ ನಡುಗಲಿ ಜಗವಿಡೀ ಆತನ ಮುಂದೆ I ಕದಲದ ಸ್ಥಿರತೆಯನು ಇತ್ತಿಹನೀ ಧರೆಗೆ II


ಸುರಪುತ್ರರೇ, ಪ್ರಭುವಿನ ಸ್ತುತಿಮಾಡಿರಿ I ಬಲುಮೆ, ಮಹಿಮೆ, ಅವನದೇ ಎಂದು ಸಾರಿರಿ II


ಶಕ್ತಿಸಾಮರ್ಥ್ಯ ಪ್ರಭುವಿನದೇ ಎಂದು I ಜಗದ ರಾಷ್ಟ್ರಗಳು ಘನಪಡಿಸಲಿ ಆತನನು ಎಂದೆಂದು II


ಎಚ್ಚರಗೊಳ್ಳು, ಎಚ್ಚರಗೊಳ್ಳು ಓ ಸಿಯೋನೇ, ಶಕ್ತಿಶಾಲಿಯಾಗು ಪವಿತ್ರನಗರ ಜೆರುಸಲೇಮೆ. ಧರಿಸಿಕೊ ನಿನ್ನ ಚಂದದ ಉಡುಪನು ನಿನ್ನೊಳಗೆ ಪ್ರವೇಶಿಸರು ಇನ್ನು ಅಪವಿತ್ರರು, ಅನ್ಯಧರ್ಮೀಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು