Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:3 - ಕನ್ನಡ ಸತ್ಯವೇದವು C.L. Bible (BSI)

3 ಇಸ್ರಯೇಲಿನ ಪ್ರತಿ ಒಬ್ಬ ಪುರುಷನಿಗೂ ಸ್ತ್ರೀಗೂ ಒಂದೊಂದು ರೊಟ್ಟಿಯನ್ನೂ ಬೇಯಿಸಿದ ಒಂದು ತುಂಡುಮಾಂಸವನ್ನೂ ಒಣಗಿದ ದ್ರಾಕ್ಷೆಗಳನ್ನೂ ಹಂಚಿದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹಾಗೂ ಅವರಲ್ಲಿ ಪ್ರತಿಯೊಬ್ಬ ಪುರುಷ ಹಾಗು ಸ್ತ್ರೀಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಬೇಯಿಸಿದ ಮಾಂಸವನ್ನೂ ಮತ್ತು ದ್ರಾಕ್ಷಿಹಣ್ಣಿನ ಒಂದು ಗೊಂಚಲನ್ನೂ ಕೊಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರಲ್ಲಿ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ರೊಟ್ಟಿಯನ್ನೂ ಒಂದು ತುಂಡು ಮಾಂಸವನ್ನೂ ದ್ರಾಕ್ಷೇಹಣ್ಣಿನ ಒಂದು ಗೊಂಚಲನ್ನೂ ಕೊಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅನಂತರ ಅಲ್ಲಿ ನೆರೆದಿದ್ದ ಪ್ರತಿಯೊಬ್ಬ ಇಸ್ರೇಲಿನ ಗಂಡಸಿಗೆ ಮತ್ತು ಹೆಂಗಸಿಗೆ ಒಂದು ರೊಟ್ಟಿಯನ್ನೂ ಸ್ವಲ್ಪ ಖರ್ಜೂರವನ್ನೂ ಒಣದ್ರಾಕ್ಷಿಯನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇಸ್ರಾಯೇಲಿನ ಪ್ರತಿಯೊಬ್ಬ ಪುರುಷನಿಗೂ ಸ್ತ್ರೀಗೂ, ಒಂದು ರೊಟ್ಟಿಯನ್ನೂ, ಖರ್ಜೂರದ ಉಂಡೆಯನ್ನೂ, ದ್ರಾಕ್ಷಿ ಹಣ್ಣಿನ ಉಂಡೆಯನ್ನೂ ಹಂಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:3
11 ತಿಳಿವುಗಳ ಹೋಲಿಕೆ  

ಉತ್ಸವಗಳಲ್ಲೂ ಅಮಾವಾಸ್ಯೆಗಳಲ್ಲೂ ಸಬ್ಬತ್ತುಗಳಲ್ಲೂ ಇಸ್ರಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲೂ ದಹನಬಲಿ ಪ್ರಾಣಿ, ಧಾನ್ಯನೈವೇದ್ಯ, ಪಾನನೈವೇದ್ಯ, ಇವುಗಳನ್ನು ಒದಗಿಸುವುದು ರಾಜನ ಕರ್ತವ್ಯ; ಇಸ್ರಯೇಲ್ ವಂಶದ ದೋಷನಿವಾರಣೆಗಾಗಿ ಅವನು ದೋಷಪರಿಹಾರಕ ಬಲಿಪ್ರಾಣಿ, ಧಾನ್ಯನೈವೇದ್ಯ, ದಹನಬಲಿಪ್ರಾಣಿ, ಶಾಂತಿಸಮಾಧಾನ ಬಲಿಪ್ರಾಣಿ ಇವುಗಳನ್ನು ಒಪ್ಪಿಸತಕ್ಕದ್ದು.”


ಇದಲ್ಲದೆ, ಎಜ್ರನು ಅವರಿಗೆ, “ಹೋಗಿ ಮೃಷ್ಟಾನ್ನವನ್ನೂ ಮಧುರಪಾನವನ್ನೂ ತೆಗೆದುಕೊಳ್ಳಿ; ತಮಗಾಗಿ ಏನೂ ಸಿದ್ಧಮಾಡದವರಿಗೆ ಒಂದು ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಸರ್ವೇಶ್ವರನಿಗೆ ಪ್ರತಿಷ್ಠಿತ ದಿನ! ವ್ಯಸನಪಡಬೇಡಿ; ಸರ್ವೇಶ್ವರನ ಆನಂದವೇ ನಿಮ್ಮ ಆಶ್ರಯವಾಗಿದೆ,” ಎಂದನು.


ಗೊಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿಸತ್ಕಾರ ಮಾಡಿ.


ಈ ಕಾರಣ, ಸಮೂಹದವರು ಇನ್ನೂ ಏಳು ದಿವಸ ಹಬ್ಬಮಾಡಬೇಕೆಂದು ತೀರ್ಮಾನಿಸಿಕೊಂಡರು. ಆ ಏಳು ದಿನಗಳಲ್ಲಿಯೂ ಬಹಳವಾಗಿ ಸಂತೋಷದಿಂದ ಹಬ್ಬವನ್ನು ಆಚರಿಸಿದರು.


ಬಲಿಹೋಮಗಳ ಅರ್ಪಣೆ ಮುಗಿದ ತರುವಾಯ ದಾವೀದನು ಸರ್ವೇಶ್ವರನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿದನು. ಅವರೆಲ್ಲರಿಗೂ ಪ್ರಸಾದವನ್ನು ಹಂಚಿದನು:


ಸರ್ವೇಶ್ವರನ ಮಂಜೂಷದ ಮುಂದೆ ದೇವರ ಆರಾಧನೆ ಮಾಡುವುದಕ್ಕಾಗಿ ದಾವೀದನು ಕೆಲವು ಮಂದಿ ಲೇವಿಯರನ್ನು ನೇಮಿಸಿದನು.


ಅಸ್ವಸ್ಥಳಾಗಿರುವೆನು ಅನುರಾಗದಿಂದ ಉಪಚರಿಸಿ ನನ್ನನು ಸೇಬುಹಣ್ಣುಗಳಿಂದ ಚೇತನಗೊಳಿಸಿರಿ ದೀಪದ್ರಾಕ್ಷೆಯಿಂದ.


ಇದಕಾರಣ ಮೋವಾಬ್ಯರೇ ಗೋಳಾಡಲಿ, ಪ್ರಲಾಪಿಸಲಿ ಪ್ರತಿಯೊಬ್ಬನು ಮೋವಾಬಿಗಾಗಿ, ಕೀರ್ ಹರೆಷೆಥಿನ ದೀಪದ್ರಾಕ್ಷಿಯ ಕಡುಬಿಗಾಗಿ, ನೆನೆದು ನರಳಿ ಹಲುಬಲಿ ಅದಕ್ಕಾಗಿ.


ಅನಂತರ ಸರ್ವೇಶ್ವರ ನನಗೆ ಹೇಳಿದ್ದೇನೆಂದರೆ: “ನನ್ನ ಜನರಾದ ಇಸ್ರಯೇಲಿನವರು ಅನ್ಯದೇವತೆಗಳ ಕಡೆಗೆ ತಿರುಗಿಕೊಂಡು, ಅವುಗಳಿಗೆ ನೈವೇದ್ಯಮಾಡಿದ ಪದಾರ್ಥಗಳನ್ನು ಬಯಸುತ್ತಾರೆ. ಆದರೂ ಸರ್ವೇಶ್ವರ ಅವರನ್ನು ಪ್ರೀತಿಸುತ್ತಾರೆ. ಇದಕ್ಕೆ ನಿದರ್ಶನವಾಗಿ, ನೀನು ಹೋಗಿ, ಜಾರನಿಗೆ ಪ್ರಿಯಳೂ ಮತ್ತು ವ್ಯಭಿಚಾರಿಣಿಯೂ ಆದ ಸ್ತ್ರೀಯೊರ್ವಳನ್ನು ಪ್ರೀತಿಸು.”


ಸೊಲೊಮೋನನು ನಿದ್ರೆಯಿಂದ ಎಚ್ಚೆತ್ತಾಗ, ಅದು ಕನಸೆಂದು ತಿಳಿದುಕೊಂಡನು. ಅವನು ಜೆರುಸಲೇಮಿಗೆ ಬಂದನಂತರ ಸರ್ವೇಶ್ವರನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ದಹನಬಲಿಗಳನ್ನೂ ಶಾಂತಿಸಮಾಧಾನದ ಬಲಿಗಳನ್ನೂ ಸಮರ್ಪಿಸಿ, ತನ್ನ ಎಲ್ಲಾ ಪರಿವಾರದವರಿಗೆ ಔತಣವನ್ನು ಏರ್ಪಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು