Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:30 - ಕನ್ನಡ ಸತ್ಯವೇದವು C.L. Bible (BSI)

30 ಸರ್ವೇಶನಿಗೆ ಮಣಿಯಿರಿ ಪವಿತ್ರ ವಸ್ತ್ರಧಾರಿಗಳಂತೆ I ಅಂಜಿಕೆಯಿಂದ ನಡುಗಲಿ ಜಗವಿಡೀ ಆತನ ಮುಂದೆ I ಕದಲದ ಸ್ಥಿರತೆಯನು ಇತ್ತಿಹನೀ ಧರೆಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ಸಾಷ್ಟಾಂಗವೆರಗಿ ನಮಸ್ಕರಿಸಿರಿ. ಭೂಮಿಯು ಸ್ಥಿರವಾಗಿರುವುದು, ಕದಲುವುದಿಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ನಡುಗಿರಿ; ಭೂವಿುಯು ಸ್ಥಿರವಾಗಿರುವದು, ಕದಲುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಯೆಹೋವನ ಮುಂದೆ ಭೂಲೋಕವೆಲ್ಲಾ ಭಯದಿಂದ ನಡುಗುವುದು! ಆದರೆ ಆತನು ಅದನ್ನು ಬಲವಾದ ಅಸ್ತಿವಾರಗಳಲ್ಲಿ ನಿರ್ಮಿಸಿದ್ದರಿಂದ ಅದು ಕದಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಸಮಸ್ತ ಭೂನಿವಾಸಿಗಳೇ, ಅವರ ಮುಂದೆ ಭಯಪಡಿರಿ. ಲೋಕವು ಸ್ಥಿರವಾಗಿರುವುದು, ಕದಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:30
15 ತಿಳಿವುಗಳ ಹೋಲಿಕೆ  

ಸೃಷ್ಟಿಯಾಯಿತು ಆತನ ನುಡಿ ಮಾತ್ರಕೆ I ಸ್ಥಾಪನೆಯಾಯಿತು ಅವನ ಅಣತಿಯೊಂದಕೆ II


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ವಹಿಸಿಹನು ಪ್ರಭು, ರಾಜ್ಯಾಧಿಕಾರವನು I ಧರಿಸಿಹನು ಘನತೆಯ ವಸ್ತ್ರ ಲಾಂಛನವನು I ತೊಟ್ಟಿಹನು ಶೌರ್ಯವೆಂಬ ನಡುಕಟ್ಟನು I ಸ್ಥಿರಪಡಿಸಿಹನು ಕದಲದಂತೆ ಜಗವನು II


ಎಲ್ಲಕ್ಕೂ ಮೊದಲೇ ಇರುವನಾತ, ಸಮಸ್ತಕ್ಕೂ ಆಧಾರಭೂತ.


ಸರ್ವೇಶ್ವರ ಭೂಮಿಯನ್ನು ನಿರ್ಮಿಸಿದ್ದಾರೆ ಶಕ್ತಿಯಿಂದ ಲೋಕವನ್ನು ಸ್ಥಾಪಿಸಿದ್ದಾರೆ ಜ್ಞಾನದಿಂದ ಆಕಾಶಮಂಡಲವನ್ನು ಹರಡಿದ್ದಾರೆ ವಿವೇಕದಿಂದ.


ತಮ್ಮ ಪ್ರಜೆಗೆ ಇಂತೆನ್ನುತ್ತಾರೆ ಸರ್ವೇಶ್ವರ ಸ್ವಾಮಿ : “ನಿನಗೆ ದಯಪಾಲಿಸುವೆನು ಸದುತ್ತರವನು ಪ್ರಸನ್ನತೆಯ ಕಾಲದಲಿ ಸಹಾಯ ನೀಡುವೆನು ರಕ್ಷಣೆಯ ದಿನದಲಿ ನಿನ್ನನು ಕಾಪಾಡಿ ನೇಮಿಸುವೆನು ಜನತೆಗೆ ಸ್ಥಿರ ಒಡಂಬಡಿಕೆಯಾಗಿ.


ಪ್ರಭುವಿಗೆ ಮಣಿಯಿರಿ ಪವಿತ್ರ ವಸ್ತ್ರಧಾರಿಗಳಂತೆ I ಅಂಜಿಕೆಯಿಂದ ನಡುಗಲಿ ಜಗವಿಡೀ ಆತನ ಮುಂದೆ I


ಏಕೆನೆ, ಮಹಾತ್ಮನು ಸರ್ವೇಶ್ವರ ಅತಿ ಸ್ತುತ್ಯರ್ಹನು I ಸಕಲ ದೇವರುಗಳಿಗಿಂತಲೂ ಘನಗಂಭೀರನು II


ಸರ್ವ ಭೂನಿವಾಸಿಗಳೇ, ಸರ್ವೇಶ್ವರನಿಗೆ ಹಾಡಿರಿ I ಆತನ ಮುಕ್ತಿಮಾರ್ಗವನು ಪ್ರತಿನಿತ್ಯವೂ ಸಾರಿರಿ II


ಆತನ ನಾಮಕೆ ಘನತೆ ಗೌರವವನು ತನ್ನಿ I ಕಾಣಿಕೆಯೊಂದಿಗೆ ಆತನ ಮಂದಿರಕೆ ಬನ್ನಿ II


“ಹರ್ಷಿಸಲಿ ಆಕಾಶ, ಸಂತೋಷಿಸಲಿ ಭೂಲೋಕ I ಗರ್ಜಿಸಲಿ ಸಮುದ್ರ ಮತ್ತು ಅದರೊಳಿರುವುದೆಲ್ಲ I ಸಾರಲಿ ರಾಷ್ಟ್ರಗಳಿಗೆ ಸರ್ವೇಶ್ವರ ರಾಜನೆಂದು I ಧರೆಗೆ ನ್ಯಾಯತೀರಿಸಲು ಖಂಡಿತ ಬರುವನೆಂದು II


ನಿನ್ನ ನಿರ್ಣಯ ಸಗ್ಗದಿಂದ ಕೇಳಿಸಿದಾಗ I ಭಯಭೀತಿಯಿಂದ ತೆಪ್ಪಗಾಯ್ತು ಸಮಸ್ತ ಜಗ II


ವಹಿಸಿಹನು ಪ್ರಭು ರಾಜ್ಯಾಧಿಕಾರವನು : ನಡುಗುತಿಹುದು ಜನಾಂಗವು I ಕೆರೂಬಿಯರ ಮಧ್ಯೆ ಆಸೀನನಾಗಿಹನು : ಕಂಪಿಸುತಿಹುದು ಜಗವು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು